ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

Date:

ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ ತಪ್ಪದೆ ಮತದಾನ ಮಾಡಿ ಎಂದು ರೋಣ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಕೆ ಇನಾಮದಾರ ಹೇಳಿದರು.

ಗದಗ ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಸಲಾಪೂರ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ನಡೆದ ಸಮುದಾಯ ಕಾಮಗಾರಿಯ, ಬದು ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ಕಡ್ಡಾಯ ಮತದಾನ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನಂತರ ಮಾತನಾಡಿದ ಅವರು ಉತ್ತಮ ಭಾರತಕ್ಕಾಗಿ ಮತ ಚಲಾಯಿಸುವ ಮೂಲಕ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ನಮ್ಮ ಹಿಂದಿನ ತಲೆಮಾರುಗಳ ಹಿರಿಯರನ್ನು ಗೌರವಿಸಬಹುದು ಎಂದರು.

ಮತದಾನ ಮಾಡುವುದು ನಮ್ಮ ನಾಗರಿಕ ಜವಾಬ್ದಾರಿ ಆಗಿದೆ ಎಂದರು. ಚುನಾವಣೆಯಲ್ಲಿ ಮತ ಹಾಕುವ ಸ್ವಾತಂತ್ರ್ಯ ನಿಮಗಿದೆ. ಮತ ಹಾಕಲು ಯಾರೂ ಆಮಿಷಕ್ಕೆ ಒಳಗಾಗಬೇಡಿ. ಉತ್ತಮ ನಾಳೆಗಳು ಬೇಕಾದರೆ, ಮತದಾನ ಮಾಡುವ ಮೂಲಕ ಎಲ್ಲಾ ಅರ್ಹ ನಾಗರಿಕರು ಮತದಾನದ ಹಕ್ಕು ಚಲಾಯಿಸಬೇಕು. ಮತದಾರ ದೇಶದ ಉತ್ತಮ ಭವಿಷ್ಯಕ್ಕೆ ಬುನಾದಿ. ಮತದಾನ ಮಾಡುವ ಮೂಲಕ ಆ ಬುನಾದಿಯನ್ನು ಸದೃಢ ಗೊಳಿಸಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಬಾರಿ ರೋಣ ತಾಲೂಕಿನಲ್ಲಿ ಶೇ.69ರಷ್ಟು ಮತದಾನ ಪ್ರಮಾಣ ಆಗಿದೆ. ಈ ಬಾರಿ ನೂರಕ್ಕೆ ನೂರರಷ್ಟು ಮಾಡುವ ಗುರಿಯನ್ನು ಹೊಂದಿದ್ದೇವೆ, ನಿಮ್ಮ ಗ್ರಾಮದಲ್ಲಿ 800ಕ್ಕೂ ಹೆಚ್ಚು ಮತಗಳು ಇವೆ. ಯಾವುದೇ ಕಾರಣಕ್ಕೂ ಯಾರು ಮತದಾನದಿಂದ ದೂರ ಉಳಿಯಬೇಡಿ ಎಂದರು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಶೀದ್ ಹುಣಸಿಮರದ ಮತನಾಡಿ, ನರೇಗಾದಲ್ಲಿ ಕೆಲಸ ಮಾಡುವ ಕೂಲಿಕಾರರಿಗೆ ದಿನವೊಂದಕ್ಕೆ 349 ರೂ. ನೀಡಲಾಗುತ್ತದೆ. ಬೇಸಿಗೆಯ ಅವಧಿಯಲ್ಲಿ ಬಡ ಜನರಿಗೆ ಅವರ ಮಕ್ಕಳಿಗೆ ಫೀ ತುಂಬಲು ನರೇಗಾ ಯೋಜನೆ ಅನುಕೂಲಕರವಾಗಿದೆ, ಅಲ್ಲದೇ ಈ ಹಣವನ್ನು ಕೂಲಿಕಾರರು ಮುಂಗಾರು ಆರಂಭದಲ್ಲಿ ಕೃಷಿ ಚಟುವಟಿಕೆಗಳ ಬಳಕೆಗೆ ಸಹಾಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಚಿಕ್ಕಮಣ್ಣೂರ ಗ್ರಾಮ ಪಂಚಾಯತಿ ಬಿ.ಎಪ್.ಟಿ. ಈರಣ್ಣ ಬೇಲೆರಿ ನರೇಗಾ ಕೂಲಿಕಾರರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿ, ನರೇಗಾ ಸಿಬ್ಬಂದಿ, ಗ್ರಾಮಸ್ಥರು ಹಾಗೂ ನರೇಗಾ ಕೂಲಿಕಾರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...