ಗದಗ | ಬೀದಿನಾಯಿ, ಹಂದಿ ಹಾವಳಿ; ನಿಯಂತ್ರಣಕ್ಕೆ ಕರವೇ ಸ್ವಾಭಿಮಾನಿ ಸೇನೆ ಒತ್ತಾಯ

Date:

ಬೀದಿನಾಯಿ ಹಾಗೂ ಹಂದಿಗಳ ಹಾವಳಿ ವಿಪರೀತವಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೀದಿನಾಯಿ, ಹಂದಿ ಹಾವಳಿ ನಿಯಂತ್ರಣ ಮಾಡಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ಗದಗ ಜಿಲ್ಲಾಧ್ಯಕ್ಷ ಶರಣು ಗೋಡಿ ಒತ್ತಾಯಿಸಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯು ಪುರಸಭೆ ಅಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, “ಪಟ್ಟಣದ ಐತಿಹಾಸಿಕ ಸೋಮೇಶ್ವರ ದೇವಸ್ಥಾನ, ದೂದ್‌ಪೀರಾ ದರ್ಗಾದ ಹತ್ತಿರ ಚಿಕನ್ ಮತ್ತು ಮೀನು ಮಾರುಕಟ್ಟೆಗಳಿವೆ. ಇದರಿಂದ ಅಲ್ಲಿ ಅಳಿದುಳಿದ ಮಾಂಸ ಸೇವನೆಗೆ ಬೀದಿ ನಾಯಿಗಳು ಬೀಡು ಬಿಟ್ಟಿರುತ್ತವೆ. ಇವು ಮಕ್ಕಳು ಹಾಗೂ ಮಹಿಳೆಯರನ್ನು ಕಚ್ಚಿ ಗಾಯಗೊಳಿಸಿರುವ ಘಟನೆಗಳು ಪದೇ ಪದೆ ನಡೆಯುತ್ತಿವೆ. ಬಸ್ ನಿಲ್ದಾಣ, ಶಿಗ್ಲಿ ಕ್ರಾಸ್, ಇಟ್ಟಿಗೇರಿ ದಂಡೆಯ ಮೇಲೆ, ಅಂಬೇಡ್ಕರ್ ನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೀದಿನಾಯಿ ಹಾಗೂ ಹಂದಿಗಳು ಬೀಡು ಬಿಟ್ಟಿವೆ. ಇವುಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಕಿರಿಕಿರಿ ಉಂಟಾಗಿದೆ. ಆದ್ದರಿಂದ ಅವುಗಳನ್ನು ಹಿಡಿದು ಬೇರೆಡೆಗೆ ಸಾಗಾಟ ಮಾಡಬೇಕು” ಎಂದು ಶರಣು ಗೋಡಿ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪೊಲೀಸರ ಕ್ರೀಡಾಕೂಟ; ಗಮನ ಸೆಳೆದ ಅಡಿಷನಲ್ ಎಸ್‌ಪಿ ಕಾರ್ಯಪ್ಪನವರ ಪೆನಾಲ್ಟಿ ಕಿಕ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರಾದ ನಾಗೇಶ ಅಮರಾಪೂರ, ಇಸ್ಮಾಯಿಲ್ ಆಡೂರ, ಮೈನು ಮನಿಯಾರ, ಅಸ್ಪಾಕ್ ಬಾಗೋಡಿ, ಯಲ್ಲಪ್ಪ ಹಂಜಗಿ, ಶರಣಪ್ಪ ಬಸಾಪೂರ, ಫೀರ್‌ಸಾಬ್ ರಿತ್ತಿ, ಬಸವರಾಜ ಅಮರಾಪೂರ, ಹಜರತ್ ಅಲಿ ಮನಿಯಾರ್, ಅಮಿನಸಾಬ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...