ಗದಗ | ಅಂಬೇಡ್ಕರ್ ಪ್ರತಿಮೆ ತೆರವಿಗೆ ಕೋರ್ಟ್‌ ಆದೇಶ; ಛಲವಾದಿ ಮಹಾಸಭಾ ಖಂಡನೆ

Date:

  • ಕಳಸಾಪುರ ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ತೆರವಿಗೆ ನ್ಯಾಯಾಲಯದಿಂದ ಆದೇಶ
  • ʼಬಾಬಾ ಸಾಹೇಬರ ಮೂರ್ತಿ ತೆರವುಗೊಳಿಸಿದರೆ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಲಾಗುವುದುʼ.

ಗದಗ ತಾಲೂಕಿನ ಕಳಸಾಪುರ ಗ್ರಾಮದ ಅಂಬೇಡ್ಕರ್ ನಗರದ ಜನರು ಖಾಲಿ ಭೂಮಿಯನ್ನು ಛಲವಾದಿ ಸಮಾಜದ ಉಪಯೋಗಕ್ಕೆ ಬಳಸಿಕೊಂಡು ಬಂದಿದ್ದು, ಇವತ್ತಿಗೂ ಮುಂದುವರೆಸಿದ್ದಾರೆ. ಈ ಜಾಗದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಪ್ರತಿಷ್ಠಾನ ಮಾಡಲಾಗಿದೆ. ಆದರೆ, ಈ ಪ್ರತಿಮೆಯನ್ನು ತೆರವುಗೊಳಿಸುವಂತೆ ನ್ಯಾಯಾಲಯದಿಂದ ಆದೇಶ ತಂದಿದ್ದು ಖಂಡನೀಯ. ಯಾವುದೇ ಕಾರಣಕ್ಕೂ ಅಂಬೇಡ್ಕರ್‌ ಪ್ರತಿಮೆಯನ್ನು ತೆರವುಗೊಳಿಸಬಾರದು ಎಂದು ಗದಗ ಜಿಲ್ಲಾ ಛಲವಾದಿ ಮಹಾಸಭಾ ಆಗ್ರಹಿಸಿದೆ.

ಈ ಕುರಿತು ಜಿಲ್ಲಾ ಛಲವಾದಿ ಮಹಾಸಭಾ ಮುಖಂಡರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಕಳಸಾಪುರ ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ನಗರಕ್ಕೆ ಹೊಂದಿಕೊಂಡಿರುವ 2 ಎಕರೆ 35 ಗುಂಟೆ ಖಾಲಿ ಜಾಗವನ್ನು ಛಲವಾದಿ ಮಹಾಸಭಾ ಸಮಾಜಕ್ಕೆ ನೀಡುವಂತೆ ಹಲವಾರು ವರ್ಷಗಳಿಂದ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಆದರೆ ಈವರೆಗೂ ಸರ್ಕಾರವಾಗಲಿ‌, ಸಂಬಂಧಪಟ್ಟ ಆಡಳಿತ ವ್ಯವಸ್ಥೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮಹಾಸಭಾದ ಮುಖಂಡ ಶರೀಫ್ ಬಿಳಿಯಲಿ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಭೂಮಿ ವಿವಾದದಲ್ಲಿ ಕೆಲವು ಭೂ ಮಾಲೀಕರು ಉದ್ದೇಶ ಪೂರ್ವಕವಾಗಿಯೇ ಖಾಲಿ ಜಾಗ ಕಬಳಿಸಲು ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಈ ಭೂಮಿಯನ್ನು ಭೂ ಮಾಲೀಕರಿಗೆ ಬಿಟ್ಟುಕೊಡದಿರುವಂತೆ ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಸಂಘಟನೆಯ ಮುಖಂಡ ಆನಂದ ಸಿಂಗಾಡಿ ಮಾತನಾಡಿ, “ಈ ಭೂಮಿ ಭೂ ಮಾಲೀಕರಿಗೆ ಬಿಟ್ಟುಕೊಡುವುದಿಲ್ಲ. ಒಂದು ವೇಳೆ ಬಲವಂತವಾಗಿ ತೆರವುಗೊಳಿಸಲು ಮುಂದಾದರೆ ದಲಿತ ಸಂಘಟನೆಗಳ ಸಮ್ಮುಖದಲ್ಲಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆಕೊಟ್ಟು ತೀವ್ರ ಹೋರಾಟ ಮಾಡಲಾಗುವುದು. ಮುಂದಿನ ಅನಾಹುತಕ್ಕೆ ಜಿಲ್ಲಾಡಳಿತವೇ ನೇರ ಹೊಣೆಯಾಗಲಿದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಅನಧಿಕೃತ ಉಸುಗು ತುಂಬಿದ ಲಾರಿಗಳ ಸಂಚಾರ ನಿರ್ಬಂಧಿಸುವಂತೆ ಆಗ್ರಹ

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರುಗಳಾದ ಸುಬಾಷ್ ಸೊಂಪುರ, ಮುತ್ತು ಬಿಳಿಯಲಿ, ಪರಶು ಕಾಳೆ, ಶಿವಾನಂದ ತಮ್ಮಣ್ಣವರ, ಎನ್ ಡಿ ಚಲವಾದಿ ಹಾಗೂ ಕಳಸಾಪುರ ಗ್ರಾಮದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...