ಗದಗ | ಸಂಸತ್‌ ಭದ್ರತಾ ಲೋಪ; ಎಸ್‌ಎಫ್‌ಐ ವಿರುದ್ಧ ಸುಳ್ಳು ಹರಡುತ್ತಿರುವವ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಸಂಸತ್ತಿನಲ್ಲಿ ನಡೆದ ಘಟನೆಯ ಆರೋಪಿ ಮನೋರಂಜನ್ ಎಂಬಾತ ಎಸ್‌ಎಫ್‌ಐ ಸಂಘಟನೆಯ ಮುಖಂಡನೆಂದು ಸುಳ್ಳು ಹರಡಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಮುಖಂಡರು ಗದಗ ಅಪರ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ದೇಶದ ಪ್ರಜೆಗಳನ್ನು ಪ್ರತಿನಿಧಿಸುವ ಪವಿತ್ರ ಸ್ಥಳವಾದ ಲೋಕಸಭೆಯಲ್ಲಿ ಕೆಲವರು ನುಗ್ಗಿ ಬಣ್ಣದ ಅನಿಲ ಸಿಂಪಡಿಸಿದ್ದು, ಭದ್ರತಾ ಲೋಪವನ್ನು ಎಸಗಿದ್ದಾರೆ. ಇದು ಅಕ್ಷಮ್ಯ ಅಪರಾಧ ಮತ್ತು ಖಂಡನೀಯ ಎಂದು ಎಸ್‌ಎಫ್‌ಐ ಮುಖಂಡ ಗಣೇಶ ರಾಠೋಡ್ ಅಸಮಾಧಾನ ವ್ಯಕ್ತಪಡಿಸಿದರು.

“ಪ್ರಕರಣದಲ್ಲಿ ‌ವಿನಾಕಾರಣ ಎಸ್ಎಫ್ಐ ಮೈಸೂರು ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್ ಅವರ ಪೋಟೋವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ವಿಜಯ್ ಕುಮಾರ್‌ ಅವರನ್ನು ಮನೋರಂಜನ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿಗರು ಸೋಶಿಯಲ್ ಮೀಡಿಯಾದಲ್ಲಿ ಅಪ್ರಚಾರ ಮಾಡುತ್ತಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅವರ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕೃತ್ಯ ಎಸಗಿದವರನ್ನು ಈಗಾಗಲೇ ಬಂಧಿಸಿಲಾಗಿದೆ. ಅವರನ್ನು ಸೂಕ್ತ ವಿಚಾರಣೆ ಒಳಪಡಿಸಿ ಕಾನೂನಿನ ಕ್ರಮಕ್ಕೆ ಮುಂದಾಗಬೇಕೆಂದು ಎಸ್ಎಫ್ಐ ಸಂಘಟನೆ ಒತ್ತಾಯಿಸುತ್ತದೆ. ಕೃತ್ಯ ಎಸಗಿದವರ ಪೈಕಿ ಒಬ್ಬ ಕರ್ನಾಟಕ, ಒಬ್ಬರು ಹರಿಯಾಣ ಮತ್ತೋರ್ವರು ಮಹಾರಾಷ್ಟ್ರ ಮೂಲದವರೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಇವರೆಲ್ಲ ಲೋಕಸಭೆ ಪ್ರವೇಶ ಮಾಡಲು ಇವರಿಗೆ ಪಾಸ್ ನೀಡಿದವರು ಯಾರು? ಇವರ ಹಿಂದೆ ಯಾರೆಲ್ಲಾ ಇದ್ದಾರೆ, ಇದಕ್ಕೆ ಕುಮ್ಮಕ್ಕು ನೀಡಿದವರು ಯಾರು? ಮತ್ತು ಇವರ ಉದ್ದೇಶ ಏನಾಗಿತ್ತು ಎಂಬುದರ ಕುರಿತು ಸಮಗ್ರ ತನಿಖೆ ನಡೆಯಲಿ” ಎಂದು ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ ಹೇಳಿದ್ದಾರೆ.

ಈ ವೇಳೆ ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಚಂದ್ರು ರಾಠೋಡ್, ಪ್ರದೀಪ್ ಎಂ, ಶರಣು ಎಂ ಮತ್ತು ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...