ಗದಗ | ಮುಂಡರಗಿ ತಾಲೂಕನ್ನು ಬರಪಿಡೀತ ಪ್ರದೇಶವೆಂದು ಘೋಷಿಸಲು ಒತ್ತಾಯ

Date:

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಅಭಿವೃದ್ಧಿಯಿಂದ ಹಿಂದುಳಿದಿದ್ದು, ಬರಪೀಡಿತವೂ ಆಗಿರುವುದರಿಂದ ಮುಂಡರಗಿ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ವಿಶ್ವ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

“ಸತತ ಬರಗಾಲವನ್ನು ಅನುಭವಿಸುತ್ತಾ ಬಂದಿರುವ ಮುಂಡರಗಿ ತಾಲೂಕನ್ನು ರಾಜ್ಯ ಸಕಾರವು ಬರಗಾಲ ಪಟ್ಟಿಯಲ್ಲಿ ಕೈ ಬಿಟ್ಟಿದ್ದು, ತಾಲೂಕಿಗೆ ಧೋರಣೆ ಮಾಡುತ್ತಿದೆ. ಗದಗ ಜಿಲ್ಲೆಯಲ್ಲಿಯ 6 ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಿದ್ದು, ಜಿಲ್ಲೆಯಲ್ಲಿಯೇ ಅತ್ಯಂತ ಬರಗಾಲ ಅನುಭವಿಸುತ್ತಿರುವ ಮುಂಡರಗಿ ತಾಲೂಕನ್ನು ಕೈ ಬಿಟ್ಟು ರಾಜ್ಯ ಸಕಾರ ಅನ್ಯಾಯ ಮಾಡಿದೆ” ಎಂದು ಸಂಘಟನಾಕಾರರು ಆರೋಪಿಸಿದರು.

“ಮುಂಡರಗಿ ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡುವುದರೊಂದಿಗೆ ತಾಲೂಕಿನ ರೈತರಿಗೆ ಹಾಗೂ ರೈತ ಕಾರ್ಮಿಕರಿಗೆ ವಿಷೇಶ ಪ್ಯಾಕೇಜ್ ಘೋಷಣೆ ಮಾಡಬೇಕು”‌ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರಿಗೆ ಕಳಪೆ ಬಿತ್ತನೆ ಬೀಜ ಹಾಗೂ ಕಳಪೆ ರಸಗೊಬ್ಬರಗಳನ್ನು ಪೂರೈಕೆ ಮಾಡುತ್ತಿದ್ದು, ಇದರಿಂದಲೂ ಕೂಡ ರೈತರು ಸಂಪೂರ್ಣ ಹಾನಿ ಅನುಭವಿಸುತ್ತಿದ್ದಾರೆ. ಒಂದು ಕಡೆ ಮಳೆ ಇಲ್ಲದೆ, ಇನ್ನೊಂದು ಕಡೆ ಕಳಪೆ ಬೀಜಗಳಿಂದ ಮುಂಡರಗಿ ತಾಲೂಕಿನ ರೈತರು ಈ ವರ್ಷ ಭಾರೀ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಬಿಡುಗಡೆ

“ರಾಜ್ಯ ಸರ್ಕಾರ ಕೂಡಲೇ ಮುಂಡರಗಿ ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಮಾನದಲ್ಲಿ ವಿಶ್ವ ಕನ್ನಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ರಾಜ್ಯಾದ್ಯಂತ ಬೃಹತ್ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂಧರ್ಭದಲ್ಲಿ ಸಂಘಟನೆಯ ಗದಗ ಜಿಲ್ಲಾಧ್ಯಕ್ಷ ಎಂ ಕೆ ತಳಗಡೆ, ಎ ಎಸ್‌ ಘಟ್ಟ, ಶಿವಪ್ಪ ಉಕ್ಕಲಿ, ರಾಜು ಹಾಳಕೇರಿ, ಹಣಮಂತಪ್ಪ ಕೋಳಿ, ವಾಡುಸಾಬ ಡಂಬಳ, ರಾಜಾಭಕ್ಷಿ ದಂಡಿನ, ಸುಜಾತ ಕೆದರಳ್ಳಿ, ಯಲ್ಲಮ್ಮ ಚಿಕ್ಕಣ್ಣನವರ, ಮಧುಮತಿ ಮಡಿವಾಳರ, ರಾಜೇಶ್ವರಿ ಪಾಟೀಲ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...