ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ 48 ವರ್ಷದ ಚೆನ್ನಮ್ಮ ಹಡಪದ ಎಂಬ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತ ಮಹಿಳೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದ ನಿವಾಸಿಯಾದ ಚೆನ್ನಮ್ಮ, ಶಿರಹಟ್ಟಿಗೆ ಸಂಬಂಧಿಕರ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ.

“ನಿನ್ನೆ ಮಧ್ಯಾಹ್ನ ಬಸ್ ನಿಲ್ದಾಣದಲ್ಲಿ ವೇಗವಾಗಿ ಬಂದ ಬಸ್ ಮಹಿಳೆಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮಹಿಳೆಯ ಕಾಲುಗಳಿಗೆ ಗಂಭೀರ ಗಾಯವಾಗಿ, ತಲೆಗೂ ಏಟು ಬಿದ್ದಿತ್ತು. ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳೆ ಕೊನೆಯುಸಿರೆಳೆದಿದ್ದಾರೆ.





