ಗದಗ | ಕಾನೂನು ಉಲ್ಲಂಘಸಿ ಬೇಕಾಬಿಟ್ಟಿ ವಿಂಡ್ ಯಂತ್ರಗಳು ಅಳವಡಿಕೆ; ಆರೋಪ

Date:

ಗದಗ ಜಿಲ್ಲೆ ಕಾನೂನು ಸಚಿವ ಎಚ್.​ಕೆ. ಪಾಟೀಲ್ ತವರು. ಆದರೆ, ಕಾನೂನು ಸಚಿವರ ತವರಲ್ಲೇ ಕಾನೂನು ಉಲ್ಲಂಘಸಿ ಬೇಕಾಬಿಟ್ಟಿ ವಿಂಡ್ ಯಂತ್ರಗಳು ಅಳವಡಿಸಲಾಗಿದೆ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ.

ಗದಗ ಜಿಲ್ಲೆಯನ್ನು ಏಶಿಯಾ ಖಡದಲ್ಲೇ ಅತೀ ವೇಗವಾಗಿ ಗಾಳಿ ಬಿಸುವ ಸ್ಥಳ ಎಂದು ಗುರುತಿಸಲಾಗುತ್ತದೆ. ಹೀಗಾಗಿ, ಇಲ್ಲಿ ಅನೇಕ ವಿಂಡ್ ಕಂಪನಿಗಳು ಲಗ್ಗೆ ಇಟ್ಟಿವೆ. ಎಲ್ಲಿ ಕಣ್ಣು ಹಾಯಿಸಿದ್ರೂ ವಿಂಡ್ ಫ್ಯಾನ್‌ಗಳೇ ಕಣ್ಣಿಗೆ ರಾಚುತ್ತವೆ. ರಿನೋಬಲ್ ಎನರ್ಜಿ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೆಲ ಸಡಲಿಕೆ ನೀಡಿವೆ. ಆದರೆ, ಇದನ್ನೆ ಬಂಡವಾಳ ಮಾಡಿಕೊಂಡ ಬಂಡವಾಳ ಶಾಹಿಗಳು ಬೇಕಾಬಿಟ್ಟಿ ಪವನ​ ವಿದ್ಯುತ್ ಯಂತ್ರಗಳನ್ನು ಜಿಲ್ಲೆಯಲ್ಲಿ ಅಳವಡಿಸಿದ್ದಾರೆ.

ವಿಂಡ್ ಫ್ಯಾನ್ ಅಳವಡಿಸಬೇಕಾದರೆ ಮೊದಲು ಗ್ರಾಮ ಪಂಚಾಯತ್​ಗೆ ಟ್ಯಾಕ್ಸ್ ತುಂಬಿ ಅನುಮತಿ ಪಡೆಯಬೇಕು. ಬಳಿಕ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೃಷಿ ಜಮೀನು ಕೃಷಿಯೇತರ ಜಮೀನಾಗಿ (ಎನ್‌ಎ) ಪರಿವರ್ತನೆ ಮಾಡಬೇಕು. ಬಳಿಕ ಪಂಚಾಯತ್ ಎನ್ಒಸಿ ಪಡೆಯಬೇಕು. ಆದರೆ, ಇದ್ಯಾವ ಕೆಲಸ ಮಾಡದ ವಿಂಡ್ ಕಂಪನಿಗಳು ನೂರಾರು ಪವನ ವಿದ್ಯುತ್ ಯತ್ರಗಳನ್ನು ಈಗಾಗಲೇ ರೈತರ ಜಮೀನುಗಳಲ್ಲಿ ಅಳವಡಿಸಿದ್ದಾರೆ. ವಿದ್ಯುತ್ ಉತ್ಪಾದನೆ ಸಹ ನಡೆದಿದೆಯಂತೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಚಾಯತ್ ಆಡಳಿತ ಪ್ರಶ್ನೆ ಮಾಡಿದಕ್ಕೆ ಕಂಪನಿಗಳು ಈಗ ಎಚ್ಚೆತ್ತುಕೊಂಡು ಪಂಚಾಯತ್​ಗೆ ಓಡಿ ಬಂದಿದ್ದಾರೆ. ಈಗ ಅನುಮತಿಗಾಗಿ ಅರ್ಜಿ ಹಾಕಿದ್ದಾರಂತೆ. ಈ ಬಗ್ಗೆ ಮಾದ್ಯಮದವರು ಪಿಡಿಓ ಅವರನ್ನು ಕೇಳಿದ್ರೆ, ಇದು ಕಂದಾಯ ಇಲಾಖೆ ಜಮೀನು. ಕೃಷಿಯೇತರ ಆದ ಬಳಿಕ ನಮ್ಮ ವ್ಯಾಪ್ತಿಗೆ ಬರುತ್ತೆ. ಇನ್ನೂ ಎನ್ಎ ಆಗಿಲ್ಲ. ಈಗಾಗಲೇ ಫ್ಯಾನ್‌ಗಳನ್ನು ಅಳವಡಿಸಿದ್ದಾರೆ ಎಂದು ಪಂಚಾಯತ್ ಅಧಿಕಾರಿಗಳು ತಮ್ಮ ಅಸಹಾಯಕತೆ ತೋಡಿಕೊಳ್ಳುತ್ತಾರೆ.

ಜಿಲ್ಲೆಯಲ್ಲಿ ಗದಗ, ರೋಣ, ಗಜೇಂದ್ರಗಢ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕುಗಳಲ್ಲಿ 500ಕ್ಕೂ ಅಧಿಕ ವಿವಿಧ ಕಂಪನಿಗಳು ಪವನ ವಿದ್ಯುತ್ ಯಂತ್ರಗಳನ್ನು ಅಳವಡಿಸಿವೆ. ಬಹುತೇಕ ಗ್ರಾಮ ಪಂಚಾಯತ್ ಗಳಿಂದ ಅನುಮತಿಯೂ ಪಡೆಯಲ್ಲಿ, ಎನ್ಓಸಿ ಕೂಡ ಪಡೆಯದೇ ಅಳವಡಿಸಲಾಗಿದೆ. ಈ ಕಂಪನಿಗಳು ಆಡಿದ್ದೇ ಆಟವಾಗಿದೆ. ಸರ್ಕಾರದ ಯಾವುದೇ ನಿಯಮ, ಕಾನೂನು ಪಾಲನೆ ಮಾಡುತ್ತಿಲ್ಲ.

ಸರ್ಕಾರಕ್ಕೆ ತೆರಿಗೆ ವಂಚನೆಯಾಗುತ್ತಿದೆ. ಈ ವಿಷಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಗೋತ್ತಿದ್ರೂ ಮೌನಕ್ಕೆ ಶರಣಾಗಿದ್ದಾರೆ. ಗ್ರಾಮ ಪಂಚಾಯತ್ ಆಡಳಿತಗಳು ತೆರಿಗೆ ಮೋಸಕ್ಕೆ ಆಕ್ರೋಶ ವ್ಯಕ್ತಪಡಿಸಿವೆ. ಇಷ್ಟಾದರೂ, ಕಂದಾಯ ಇಲಾಖೆ ಮಾತ್ರ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ ಎನ್ನೋ ಆರೋಪಗಳಿವೆ.

ಇನ್ನೂ ಈ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಕೆಲ ಸಡಲಿಕೆ ಇವೆ. ಪಂಚಾಯತ್ ಗಳು ಸರಿಯಾದ ಸಮಯಕ್ಕೆ ಅನುಮತಿ ನೀಡಬೇಕು. ವಿದ್ಯುತ್ ಉತ್ಪಾದನೆ ಆಗಬೇಕು. ಇಲ್ಲವಾದಲ್ಲಿ, ರೈತರಿಗೆ ವಿದ್ಯುತ್ ನೀಡಲು ಸಾಧ್ಯವಿಲ್ಲ. ವರದಿ ಪಡೆದುಕೊಳ್ಳುತ್ತೇನೆ.. ಕಂದಾಯ ಇಲಾಖೆಯಿಂದ ನಿಯಮ ಉಲ್ಲಂಘನೆಯಾಗಿದ್ದರೆ, ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...