ಗದಗ | ಸರ್ಕಾರಿ ಶಾಲೆಗೆ ಬಿಇಒ ಆರ್.ಎನ್ ಹುರಳಿ ಭೇಟಿ, ಪರಿಶೀಲನೆ

Date:

ಗದಗ ಜಿಲ್ಲೆಯ ಗಜೇಂದ್ರಗಡದ‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.5ಕ್ಕೆ ರೋಣ ಬಿಇಒ ಆರ್‌.ಎನ್‌ ಹುರಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಶಾಲೆಯ ಆವರಣವು ಅವ್ಯವಸ್ಥಿತವಾಗಿದೆ ಎಂದು ಡಿವೈಎಫ್‌ಐ ಮುಖಂಡ ದಾವಲಸಾಬ ತಾಳಿಕೋಟಿ ಅವರು ದೂರು ನೀಡಿದ್ದರು. ದೂರು ಸ್ವೀಕರಿಸಿದ ಬಿಇಒ ಶಾಲೆಗೆ ಭೇಟಿ ನೀಡಿದ್ದಾರೆ.

ಶಾಲೆಯಲ್ಲಿ ಸಭೆ ನಡೆಸಿದ ಅವರು, “ಶಾಲೆಯಲ್ಲಿನ ಕೆಲ‌ ಶಿಕ್ಷಕಿಯರ ವರ್ಗಾವಣೆಗೆ ಮನವಿ ಬಂದಿದೆ. ಅದನ್ನು ಪರಿಶೀಲನೆ ನಡೆಸಿ, ಮುಂದಿನ‌ ಕ್ರಮ ಕೈಗೊಳ್ಳುತ್ತೇವೆ. ಅವ್ಯವಸ್ಥಿತೆಯನ್ನು ನಿರ್ವಹಿಸಿ, ಶೀಘ್ರದಲ್ಲಿಯೇ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಮಾತನಾಡಿದ ದಾವಲಸಾಬ ತಾಳಿಕೋಟಿ, “ಶಾಲೆಯಲ್ಲಿನ ಕೆಲ ಶಿಕ್ಷಕಿಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡದೆ, ಶಾಲಾ ಅವಧಿಯಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಅಂತಹವರನ್ನು ವರ್ಗಾವಣೆ ಮಾಡಬೇಕು. ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಬೇಕು” ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...