ಗದಗ | ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಇಬ್ಬರು ಅಯ್ಯಪ್ಪ‌ ಮಾಲಾಧಾರಿಗಳ ಸಾವು

Date:

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಅಯ್ಯಪ್ಪ‌ ಸ್ವಾಮಿ ಮಾಲಾಧಾರಿಗಳು ಮೃತಪಟ್ಟಿರುವ ಘಟನೆ ಕಾನಹೊಸಹಳ್ಳಿ ಸಮೀಪದ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ (ಜ.9) ಬೆಳಗಿನ ಜಾವ ನಡೆದಿದೆ.

ಮೃತರನ್ನು ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಚನ್ನವೀರಗೌಡ (32), ಗದಗ ನಗರದ ಯುವರಾಜ ಕಾಶಪ್ಪ ಹೂಗಾರ (22) ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಿಸಲಾಗಿತ್ತಾದರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಾಲಕ ಚಿದಂಬರ್ ಕುಲಕರ್ಣಿ, ವೀರಣ್ಣ ಸಂಗಳದ್, ಮಂಜುನಾಥ ತಳವಾರ್ ತೀವ್ರ ಗಾಯಗೊಂಡಿದ್ದು ಎಲ್ಲರೂ ಗದಗ ಮೂಲದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗದಗದಿಂದ ಶಬರಿಮಲೆಗೆ ಹೊಸಪೇಟೆ ಮಾರ್ಗವಾಗಿ ಐವರು ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲಿರುವ ಸಿಮೆಂಟ್ ಕಟ್ಟೆಗೆ ಕಾರು ಡಿಕ್ಕಿಯಾದ ಪರಿಣಾಮ ಕಾರು ಪಲ್ಟಿಯಾಗಿ ಅವಘಡ ಸಂಭವಿಸಿದೆ.

ಕಾನಹೊಸಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶ್ರೀಹರಿಬಾಬು ಬಿ.ಎಲ್, ಕೂಡ್ಲಿಗಿ ಡಿವೈಎಸ್‌ಪಿ ಮಲ್ಲೇಶಪ್ಪ ಮಾಲ್ಲಪುರೆ, ಕೊಟ್ಟೂರು ಸಿಪಿಐ ವೆಂಕಟೇಶಸ್ವಾಮಿ, ಪಿಎಸ್‌ಐ ಎರಿಯಪ್ಪ ಅಂಗಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...