ಗದಗ | ಎಲ್ಲ ವಾರ್ಡ್‌ಗಳ ಚರಂಡಿ ಸ್ವಚ್ಛಗೊಳಿಸಿ: ಕರವೇ ಆಗ್ರಹ

Date:

ರಾಜ್ಯದಲ್ಲಿ ಮುಂಗಾರು ಈಗ ಚುರುಕಾಗಿದ್ದು, ಎಲ್ಲೆಡೆ ಮಳೆ ಸುರಿಯುತ್ತಿದೆ. ಮಳೆಗಾಲ ಇರುವ ಹಿನ್ನೆಲೆ, ಗದಗ-ಬೇಟಗೇರಿ ನಗರಸಭೆಯ 35 ವಾರ್ಡ್‌ಗಳಲ್ಲಿರುವ ಚರಂಡಿಯನ್ನು ಕೂಡಲೇ ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ, ನಗರಸಭೆ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮುಖಂಡ ಮುತ್ತಣ್ಣ ಚೌಡಣ್ಣವರ ಎಚ್ಚರಿಕೆ ನೀಡಿದರು.

ಗದಗ-ಬೆಟಗೇರಿ ನಗರಸಭೆಯ 35 ವಾರ್ಡಗಳಲ್ಲಿರುವ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಕರವೇ ಕಾರ್ಯಕರ್ತರು ಗದಗ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುತ್ತಣ್ಣ ಔಡಣ್ಣವರ, “ನಗರದಲ್ಲಿರುವ ಬಹುತೇಕ ಚರಂಡಿಗಳು ತುಂಬಿ ಹರಿಯುತ್ತಿವೆ. ಕಸ-ಕಡ್ಡಿ ಸೇರಿದಂತೆ ಚರಂಡಿಯಲ್ಲಿ ಹೂಳು ತುಂಬಿಕೊಂಡಿದೆ. ಇದರಿಂದ ಗಬ್ಬು ವಾಸನೆ ಬರುತ್ತಿದೆ. ಮಳೆ ಬಂದಾಗ ನೀರು ಚರಂಡಿಯಲ್ಲಿ ಪೋಲಾಗಲು ದಾರಿಯಿಲ್ಲದೆ, ರಸ್ತೆಯ ಮೇಲೆ ಹರಿಯುತ್ತದೆ. ಇದರಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುವಂತಹ ಸಂಭವ ಹೆಚ್ಚಾಗಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೂಡಲೇ ಅಧಿಕಾರಿಗಳು ಎಚ್ಚೆತ್ತು ನಗರದಲ್ಲಿರುವ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಜತೆಗೆ ನಗರಸಭೆಯ ಎಲ್ಲ ವಾರ್ಡಗಳಲ್ಲಿ ರಸ್ತೆ ಬದಿ ಗಿಡ ಗಂಟಿಗಳು, ಕಸ ತುಂಬಿದೆ. ಇವುಗಳನ್ನು ಸಹ ಸ್ವಚ್ಛ ಮಾಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಸ್ ಅಪಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ ಕುಟುಂಬಕ್ಕೆ ₹4 ಲಕ್ಷ ಪರಿಹಾರ: ಬೆಂಗಳೂರು ವಿಶ್ವವಿದ್ಯಾಲಯ

“ಅಧಿಕಾರಿಗಳು ಕೂಡಲೇ ಕಾರ್ಯನಿರ್ವಹಿಸದಿದ್ದರೆ, ನಗರಸಭೆಯ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡುತ್ತೇವೆ” ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ವಿನಾಯಕ ಬದಿ, ವಿರುಪಾಕ್ಷ ಹಿತ್ತಲಮನಿ, ದಾವಲಸಾಬ್ ಶಿರಹಟ್ಟಿ, ಇಸಾಭ್ ನದಾಪ್ ಸೇರಿದಂತೆ ಮತ್ತಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...