ಗದಗ | ಬಸ್ ಪಾಸ್ ನೀಡಲು ವಿಳಂಬ; ವಿದ್ಯಾರ್ಥಿಗಳ ಪ್ರತಿಭಟನೆ

Date:

ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿರುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಬಸ್‌ ಪಾಸ್‌ಗೆ ಅರ್ಜಿ ಸಲ್ಲಿಸಿ ಒಂದು ತಿಂಗಳು ಕಳೆದರೂ ಪಾಸ್ ವಿತರಿಸಿಲ್ಲ. ಬಸ್ ಡಿಪೋದ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಡಿಪೋದ ಎದುರು ಪ್ರತಿಭಟನೆ ನಡೆಸಿದ್ದಾರೆ.

“ದಿನನಿತ್ಯ ಪ್ರಯಾಣದ ದರ ಭರಿಸಿ ಶಾಲಾ-ಕಾಲೇಜಿಗೆ ಪ್ರಯಾಣಿಸುತ್ತಿದ್ದೇವೆ. ದಿನ ಬಸ್‌ ಟಿಕೆಟ್‌ ಖರೀದಿಸಲು ಹಣವಿಲ್ಲದೆ ಪರದಾಡುತ್ತಿದ್ದೇವೆ. ಅಧಿಕಾರಿಗಳನ್ನು ಕೇಳಿದರೆ, ಮತ್ತೊಮ್ಮೆ ಅರ್ಜಿ ಹಾಕಿ ಎಂದು ಹೇಳಿ ಕಳಿಸುತ್ತಿದ್ದಾರೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿದರೆ, ಅರ್ಜಿ ಸ್ವೀಕರಿಸುತ್ತಿಲ್ಲ. ಇದಕ್ಕೆ ಲಕ್ಷ್ಮೇಶ್ವರ ಸಾರಿಗೆ ಸಂಸ್ಥೆಯ ನಿರ್ಲಕ್ಷ್ಯ ಧೋರಣೆಯೇ ಕಾರಣ. ಸುಮಾರು ಐವತ್ತು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ” ಎಂದು ಎಂದು ಜಯ ಕರ್ನಾಟಕ ಸಂಘಟನೆಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಂತ್ರಿಕ ದೋಷದಿಂದ ಸಮಸ್ಯೆ ಆಗಿದೆ. ಇನ್ನು ನಾಲ್ಕು ದಿನಗಳಲ್ಲಿ ಸಮಸ್ಯೆ ಪರಿಹರಿಸುತ್ತೇವೆ. ವಿದ್ಯಾರ್ಥಿಗಳಿಗೆ ಪಾಸ್ ವಿತರಿಸುತ್ತೇವೆ” ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ರಮೇಶ್ ಹಂಗನಕಟ್ಟಿ, ಇಸಾಕ್ ಬಸ್ಯಾ ಹರಪನಹಳ್ಳಿ, ಹಾಲಪ್ಪ ಭಂಡಾರಿ, ಬಸಣ್ಣ ಮೇಲ್ಮುರಿ, ಖಾದರ್ ಭಾಷಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು...

ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ...

ಗದಗ | ಭಾರಿ ಆಲಿಕಲ್ಲು ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ...

ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ...