ಗದಗ | ಜನಗಣತಿ ಮಾಸ್ಟರ್ ಟ್ರೇನರ್‌ಗಳಿಂದ ಪ್ರಾತ್ಯಕ್ಷಿಕೆ 

Date:

“ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರ ನಿವಾಸದಲ್ಲಿ ಶುಕ್ರವಾರ ಜಿಲ್ಲೆಯ ಜನಗಣತಿ ಮಾಸ್ಟರ್ ಟ್ರೇನರ್‌ಗಳು ಭೇಟಿ ನೀಡಿ, ಜನಗಣತಿ ನಡೆಸುವ ವಿಧಾನ ಕುರಿತು ಪ್ರಾತ್ಯಕ್ಷಿಕೆ ನೀಡಿದರು.

ಜನಗಣತಿ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕ್ರಮಗಳು, ಮಾಹಿತಿಯನ್ನು ಸಂಗ್ರಹಿಸುವ ವಿಧಾನ ಹಾಗೂ ಗಣತಿ ವೇಳೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಮಾಸ್ಟರ್ ಟ್ರೇನರ್‌ಗಳು ವಿವರವಾಗಿ ತಿಳಿಸಿದರು.

ಜನಗಣತಿ ವೇಳೆ ಮನೆಯ ಸದಸ್ಯರ ಸಂಖ್ಯೆ, ವಿವಾಹಿತರ ವಿವರ, ಗ್ಯಾಸ್ ಸಂಪರ್ಕ, ಟಿವಿ ಸಂಪರ್ಕ ಸೇರಿದಂತೆ ಹಲವು ಮೂಲಭೂತ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತದೆ. ಈ ಮಾಹಿತಿಯನ್ನು ಸಾರ್ವಜನಿಕರು ಗಣತಿದಾರರಿಗೆ ಸರಿಯಾಗಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿ ಜನಗಣತಿ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಆ್ಯಪ್ ಮೂಲಕ ನಡೆಯಲಿದ್ದು, ಅದಕ್ಕಾಗಿ ಜಿಲ್ಲೆಯಾದ್ಯಂತ ಅಧಿಕಾರಿಗಳ ತಂಡಗಳನ್ನು ರಚಿಸಿ ತರಬೇತಿ ಪ್ರಕ್ರಿಯೆಗಳು ವೇಗವಾಗಿ ನಡೆಯುತ್ತಿವೆ ಎಂದು ಹೇಳಿದರು.

ಜನಗಣತಿ ಕಾರ್ಯವು ಎರಡು ಹಂತಗಳಲ್ಲಿ ನಡೆಯಲಿದೆ. ಇದೇ ವೇಳೆ ಸಾರ್ವಜನಿಕರಿಗೆ ಸ್ವಯಂವಾಗಿ ತಮ್ಮ ಮಾಹಿತಿಯನ್ನು ಪೋರ್ಟಲ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 1ರಿಂದ ಏಪ್ರಿಲ್ 15ರವರೆಗೆ ಈ ಸೌಲಭ್ಯ ಲಭ್ಯವಿರುತ್ತದೆ. ಏಪ್ರಿಲ್ 16ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ದಾಖಲಾದ ಮಾಹಿತಿಯನ್ನು ಪರಿಶೀಲಿಸಿ, ಉಳಿದವರ ಮಾಹಿತಿಯನ್ನು ಆ್ಯಪ್ ಮೂಲಕ ಸಂಗ್ರಹಿಸಲಿದ್ದಾರೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಸೇರಿದಂತೆ ಜನಗಣತಿ ಮಾಸ್ಟರ್ ಟ್ರೇನರ್‌ಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...