ಗದಗ | ಗ್ರಾಮದ ಅವ್ಯವಸ್ಥೆಗಳ ವಿರುದ್ಧ ಡಿಎಸ್ಎಸ್ ಪ್ರತಿಭಟನೆ

Date:

ಗ್ರಾಮವು ಅವ್ಯವಸ್ಥೆಗಳ ತಾಣವಾಗಿದೆ. ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಸಿಬೇಕೆಂದು ಒತ್ತಾಯಿಸಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ ಮಾಡೋಳ್ಳಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಡಿಎಸ್ಎಸ್ ಮುಖಂಡ ಹನಮಂತ ಮಾದರ, “ಗ್ರಾಮದಲ್ಲಿ ಅನೇಕ ಸಮಸ್ಯೆಗಳಿವೆ. ಭಗತ್ ಸಿಂಗ್‌ ನಗರದಲ್ಲಿ ಮೊರಂ ರಸ್ತೆ ಹದಗೆಟ್ಟಿದೆ. ಕೇರಿ ಓಣಿಗೆ ಎರಡು ತಿಂಗಳದರೂ ನೀರು ಪೂರೈಕೆ ಆಗಿಲ್ಲ. ಲಕ್ಷವ್ವ ನಂದಿ ಇವರ ಮನೆಯ ಪಕ್ಕದಲ್ಲಿ ಗಟಾರ ಹದಗೆಟ್ಟಿದೆ. ನೀರು ಅಲ್ಲೆ ನಿಂತು ಮನೆ ಕುಸಿಯುವಂತಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ಶೌಚಾಲಯ ಇಲದೇ ಇರುವುದರಿಂದ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಕುರಿತು ಡಿಎಸ್ಎಸ್ ವತಿಯಿಂದ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವ ಅಧಿಕಾರಿಗಳಾಗಲಿ, ಗ್ರಾಮ ಪಂಚಾಯತಿ ಸದಸ್ಯರಾಗಲಿ ಸ್ಪಂದಿಸದೇ ಇದ್ದುದರಿಂದ ಇಂದು ಪ್ರತಿಭಟನೆ ನಡೆಸಿದ್ದೇವೆ. ಒಂದು ವೇಳೆ ಈ ಸಮಸ್ಯೆಗಳನ್ನು ಈಡೇರಿಸದೇ ಹೋದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಯಮನೂರ ಮಾದರ, ಮುತ್ತಪ್ಪ ಮಾದರ, ಮಂಜುನಾಥ ಮಾದರ, ಪರಸಪ್ಪ ಈರಗಾರ, ಮುನ್ನಸಾಬ್, ಮಲ್ಲು, ಸಲ್ಮಾನ್, ರಾಜು, ಮಲ್ಲಪ್ಪ, ಮಂಜು ನಾ ಮಾದರ ಇನ್ನೂ ಅನೇಕರು ಪಾಲ್ಗೊಂಡಿದ್ದರು. ಗ್ರಾಮ ಪಂಚಾಯತ್ ಸದಸ್ಯರು ಬಸವರಾಜ ಜಕನೂರ್, ರಾಜುಗೌಡ ಮುದುಗೌಡ್ರ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...