ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ ಹೊತ್ತಿಗೆ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಸುರಿದದ್ದು, ಗ್ರಾಮದ ಜನರಲ್ಲಿ ಅಚ್ಚರಿ ಮೂಡಿಸಿದೆ.
ಮಲ್ಲಾಪುರ ಗ್ರಾಮದಲ್ಲಿ ಸರಿಸುಮಾರು ಒಂದೂವರೆ ಗಂಟೆಗಳ ಕಾಲ ನಿರಂತರವಾಗಿ ಸುರಿದ ಆಲಿಕಲ್ಲು ಮಳೆಯಿಂದ ಗ್ರಾಮದಲ್ಲಿ ಹಿಮಪಾತದಂತೆಯೇ ಕಣ್ಣಿಗೆ ನೋಡಲು ನಿರ್ಮಾಣವಾಗಿತ್ತು. ರಸ್ತೆಗಳು ಮತ್ತು ಮನೆಗಳ ಮುಂದೆ ಆಲಿಕಲ್ಲುಗಳು ರಾಶಿ ರಾಶಿಯಾಗಿ ಬಿದ್ದಿದ್ದು, ಪರಿಸರ ಸಂಪೂರ್ಣವಾಗಿ ಬಿಳಿಮಯವಾಗಿದ್ದು ಕಾಶ್ಮೀರಿಯಂತೆ ಕಾಣುತ್ತಿತ್ತು.
ಗ್ರಾಮಸ್ಥರು ಆಲಿಕಲ್ಲು ಮಳೆಯ ದೃಶ್ಯವನ್ನು ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದಾರೆ. ಮತ್ತೊಂದೆಡೆ ರೈತರು ಅಪಾರ ಪ್ರಮಾಣದ ಮೇವು, ಹೊಟ್ಟು ನೀರುಪಾಲಾಗಿ ಸಂಕಷ್ಟಕ್ಕೀಡಾಗಿದ್ದಾರೆ.





