ಗದಗ | ಜಿಮ್ಸ್ ನಿರ್ದೇಶಕರನ್ನು ವಜಾಗೊಳಿಸಿ; ದಲಿತಪರ ಸಂಘಟನೆಗಳ ಒಕ್ಕೂಟ ಒತ್ತಾಯ

Date:

ಜಿಮ್ಸ್ ನಿರ್ದೇಶಕರಾದ ಬಸವರಾಜ ಬೊಮ್ಮನಹಳ್ಳಿ ಅವರನ್ನು ಸೇವೆಯಿಂದ ವಜಾಗೊಳಿಸಲು ದಲಿಪರ ಸಂಘಟನೆಗಳ ಒಕ್ಕೂಟ ಮತ್ತು ಮಾನವ ಬಂದುತ್ವ ವೇದಿಕೆ ಸಹಯೋಗದಲ್ಲಿ ಶಿರಹಟ್ಟಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.

ಮನವಿ ಸಲ್ಲಿಸಿ ಮಾತನಾಡಿದ ದಲಿತಪರ ಮುಖಂಡ ದೇವರಾಜ ಕಟ್ಟಿಮನಿ, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗದಗದ ಜಿಮ್ಸ್‌ ಪಕ್ಕದಲ್ಲಿರುವ, ಆಸ್ಪತ್ರೆಯ ಉದ್ಘಾಟನೆಯ ಸಲುವಾಗಿ ಆಗಮಿಸಿದಾಗ, ಅವರಿಗೆ ಬಿ.ಆರ್. ಅಂಬೇಡ್ಕರವರ ಭಾವಚಿತ್ರ ನೀಡಲು ದಲಿತ ಸಿಬ್ಬಂದಿಗಳು ಹೋದಾಗ, ಜಿಮ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ ಅವರು ದಲಿತ ಸಮುದಾಯವನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಅಪಚಾರ, ಪದಗಳಿಂದ ಗದರಿಸಿ ಹೊರಗೆ ಹೋಗುವಂತೆ ಬೆದರಿಸಿದ್ದಾರೆ” ಎಂದರು.

“ನೀವು ಈ ಕಾರ್ಯಕ್ರಮದಲ್ಲಿ ಅಂತಹ ಯಾವುದೇ ಫೋಟೋವನ್ನು ಸಿದ್ದರಾಮಯ್ಯನವರಿಗೆ ಕೊಡತಕ್ಕದ್ದಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಸಮುದಾಯದವರಿಗೆ ಅನ್ಯಾಯ ಮತ್ತು ಅಪಚಾರವನ್ನು ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಈ ಮೂಲಕ ಅಗ್ರಹಿಸುತ್ತಿದ್ದೇವೆ, ಇಲ್ಲವಾದಲ್ಲಿ ಗದಗ ಜಿಲ್ಲಾದ್ಯಂತ ದಲಿತ ಸಮುದಾಯದವರೆಲ್ಲ ಸೇರಿಕೊಂಡು ತಮ್ಮ ಕಚೇರಿಯ ಮುಂದೆ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟ ಮತ್ತು ಮಾನವ ಬಂದುತ್ವ ವೇದಿಕೆಯ ಕಾರ್ಯಕರ್ತರು, ದಲಿತಪರ ಹೋರಾಟಗಾರರು, ಮತ್ತಿತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...