ಗದಗ | ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಕರವೇ ಆಗ್ರಹ

Date:

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಒತ್ತಾಯಿಸಿ ಗದಗ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಗದಗ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಶರಣು ಗೋಡೊ ಮಾತನಾಡಿ, “ರಾಜ್ಯದಲ್ಲಿ ಯಾವ ವರ್ಷವೂ ಇಲ್ಲದಷ್ಟು ಬರಗಾಲ ಈ ವರ್ಷ ಅತಿ ಹೆಚ್ಚು ಆವರಿಸಿಕೊಂಡಿದೆ‌. ವಾಡಿಕೆಯಂತೆ ಮಳೆಯಾಗುತ್ತಿಲ್ಲ. ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 192 ತಾಲೂಕುಗಳನ್ನು ಬರಪಿಡೀತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ. ಕೃಷ್ಣರಾಜ ಸಾಗರ ಜಲಾಶಯದಲ್ಲಿ ಕೇವಲ 20 ಟಿಎಂಸಿ ನೀರಿದೆ. ಅದರಲ್ಲಿ ಬಳಕೆಗೆ ಸಿಗುವುದು 15 ಟಿಎಂಸಿ ಮಾತ್ರ. ಇಂತಹ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾದಿಕಾರ ಪ್ರತಿದಿನ 5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿಯಾಗಿದೆ‌‌” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಮುಂಡರಗಿ ತಾಲೂಕನ್ನು ಬರಪಿಡೀತ ಪ್ರದೇಶವೆಂದು ಘೋಷಿಸಲು ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಕಾರಣಕ್ಕೂ ಪ್ರಾಧಿಕಾರವು ಈ ಆದೇಶವನ್ನು ಪಾಲಿಸಬಾರದು. ನಾಡಿನ ಜನರ ಜೀವಕ್ಕಿಂತ ಆದೇಶ ದೊಡ್ಡದಲ್ಲ. ಈ ಪ್ರಾಧಿಕಾರದ ಆದೇಶವನ್ನು ಪಾಲಿಸಲು ಹೋಗಿ, ಅವರು ಕೇಳಿದಷ್ಟು ರಾಜ್ಯ ಸರ್ಕಾರ ನೀರು ಬಿಟ್ಟಿರುವುದೇ ದೊಡ್ಡ ತಪ್ಪು. ಈಗಲೂ ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸುತ್ತಿಲ್ಲ. ಕೂಡಲೇ ಸರ್ಕಾರ ಸರಿಯಾದ ನಿರ್ಧಾರ ತಗೆದುಕೊಂಡು ನೀರು ಬಿಡದಂತೆ ದೃಢ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು...

ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ...

ಗದಗ | ಭಾರಿ ಆಲಿಕಲ್ಲು ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ...

ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ...