ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರನ್ನು ‘ಕೆ.ಎಚ್.ಪಾಟೀಲ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ’ ಎಂದು ಮಾಜಿ ಶಾಸಕ ಡಿ.ಆರ್.ಪಾಟೀಲ ತಿಳಿಸಿದ್ದಾರೆ.
ಗದಗ ಪಟ್ಟಣದಲ್ಲಿ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಮಾರ್ಚ್ 16ರಂದು ಕೆ.ಎಚ್.ಪಾಟೀಲ ಅವರ 101ನೇ ಜಯಂತ್ಯುತ್ಸವ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿ ₹5 ಲಕ್ಷ ನಗದು ಮತ್ತು ಫಲಕ ಒಳಗೊಂಡಿದೆ’ ಎಂದು ತಿಳಿಸಿದ್ದಾರೆ.





