ಗದಗ | ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಮಾರಾಟ: ಏಜೆನ್ಸಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಗದಗ-ಬೆಟಗೇರಿ ನಗರದ ಗ್ರಾಹಕರನ್ನು ವಂಚಿಸಿ ಎಲ್‌ಪಿಜಿ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಹಾಗೂ ಸಾರ್ವಜನಿಕರಿಗೆ ವಿನಾಕಾರಣ ತೊಂದರೆ ನೀಡುತ್ತಿರುವ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಂಡು ಇಂತಹ ಏಜೆನ್ಸಿಗಳ ಪರವಾನಿಗೆ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಸ್ಲಂ ಜನಾಂದೋಲನ- ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್‌ ಆರ್ ಮಾನ್ವಿ ಮಾತನಾಡಿ, “ಗೃಹ ಬಳಕೆ ಎಲ್‌ಪಿಜಿ  ಸಿಲಿಂಡರ್ ಕೊರತೆಯಿಂದ ರಾಜ್ಯಾದ್ಯಂತ ಗ್ಯಾಸ್ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಎಲ್‌ಪಿಜಿ ಸಿಲಿಂಡರ್‌ಗಳ ಹೆಚ್ಚಿನ ಉತ್ಪಾದನೆಗೆ ಕೇಂದ್ರ ಸರ್ಕಾರದಿಂದ ಆದೇಶ ಮಾಡಲಾಗಿದೆ. 14.5 ಕೆಜಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಒಂದು ಸಿಲಿಂಡರ್‌ಗೆ ₹1,500 ತೆಗೆದುಕೊಳ್ಳುತ್ತಿದ್ದಾರೆಂಬ ಹಲವು ವರದಿಗಳು ಬರುತ್ತಿವೆ. ಇದರಿಂದ ಮುಂಬರುವ ದಿನಗಳಲ್ಲಿ ಅನೇಕ ಹಬ್ಬಗಳು ಇರುವುದರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಭಾರೀ ಬೇಡಿಕೆ ಇದೆ” ಎಂದರು.

“ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಬರುತ್ತಿದ್ದ ಎಲ್‌ಪಿಜಿ ಸಿಲಿಂಡರ್ ಪೊರೈಕೆಯಲ್ಲಿ ವ್ಯತ್ಯಯವಾಗಿದೆ. ಇಂಟರ್ ಬುಕ್ಕಿಂಗ್ ಅನ್ನು 21 ದಿನದಿಂದ 25 ದಿನಕ್ಕೆ ಏರಿಸಲಾಗಿದೆ. ಈ ಮೂಲಕ ದಾಸ್ತಾನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇಂತಹ ಸಂದರ್ಭದಲ್ಲಿಯೂ ಗದಗ-ಬೆಟಗೇರಿ ಭಾಗದ ಭಾರತ ಗ್ಯಾಸ್ ಏಜೆನ್ಸಿ ಮತ್ತು ಹಲವು ಏಜೆನ್ಸಿಗಳು ಗ್ರಾಹಕರಿಗೆ ನೀಡಬೇಕಾದ ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ ಮಾತನಾಡಿ, “ನಗರದಲ್ಲಿ ಏಜೆನ್ಸಿಗಳಿಂದ ನಿರಂತರವಾಗಿ ಗ್ಯಾಸ್ ಮಾಫಿಯಾ ನಡೆಯುತ್ತಿದ್ದು, ಇದರ ಹಿಂದೆ ಒಂದು ದೊಡ್ಡ ಜಾಲವೇ ಇದೆ ಎಂಬ ಅನುಮಾನ ವ್ಯಕ್ತವಾಗಿದೆ. ಭಾರತ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಗ್ರಾಹಕರಿಗೆ ಸರಿಯಾದ ಮಾಹಿತಿ ನೀಡುವುದಿಲ್ಲ. ಗ್ರಾಹಕರು ತಮ್ಮ ಗ್ಯಾಸ್ ಬುಕ್‌ ಮಾಡಿರುವ ಬಗ್ಗೆ ಹಾಗೂ ಗ್ಯಾಸ್ ವಿತರಿಸಲು ತಡವಾಗಿರುವ ಬಗ್ಗೆ ಇನ್ನು ಹಲವು ಸಮಸ್ಯೆಗಳ ಬಗ್ಗೆ ಕಚೇರಿಯಲ್ಲಿರುವ ಲ್ಯಾಂಡ್ ಲೈನ್ ಫೋನಿಗೆ ಕರೆ ಮಾಡಿದರೆ, ಕಚೇರಿಯ ಸಿಬಂದಿಗಳು ಕರೆಯನ್ನು ಸ್ವಿಕರಿಸದೆ ಗ್ರಾಹಕರಿಗೆ ಸಾಕಷ್ಟು ತೊಂದರೆಗಳನ್ನು ನೀಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಗರದಲ್ಲಿ ಹಗಲು ದರೋಡೆಗೆ ನಿಂತಿರುವ ಭಾರತ ಗ್ಯಾಸ್ ಏಜೆನ್ಸಿ ಸಿಬ್ಬಂದಿಗಳು ಕಂಪನಿಯ ನಿಗದಿತ ಬೆಲೆಗಿಂತ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದಾರೆ. ಇಂತಹ ಏಜೆನ್ಸಿಗಳ ಮೇಲೆ ಕ್ರಮ ಕೈಗೊಂಡು ಏಜೆನ್ಸಿಯ ಪರವಾನಿಗೆ ರದ್ದು ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ತನಿಖೆಗೆ ಆದೇಶ

ಮಹಿಳಾ ಸಮಿತಿ ಅಧ್ಯಕ್ಷೆ ಪರ್ವೀನ್‌ ಬಾನು ಹವಾಲ್ದಾರ ಮಾತನಾಡಿ, “ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸುವುದರಿಂದ ನಿರಂತರ ಬೆಲೆ ಏರಿಕೆ ಮತ್ತು ಕುಗ್ಗುತ್ತಿರುವ ನೈಜ್ ಆದಾಯದಿಂದ ತತ್ತರಿಸುತ್ತಿರುವ ಮಧ್ಯಮ ವರ್ಗ ಹಾಗೂ ದುಡಿಯುವ ಜನರ ಮೇಲೆ ಇನ್ನಷ್ಟು ಹೊರೆಗಳನ್ನು ಹೇರಿದಂತಾಗಿದೆ” ಎಂದರು.

ಈ ಸಂದರ್ಭದಲ್ಲಿ ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೌಲಾಸಾಬ ಗಚ್ಚಿ, ಮೆಹಬೂಬಸಾಬ ಬಳ್ಳಾರಿ, ಪುಷ್ಪಾ ಬಿಜಾಪೂರ, ವಿಶಾಲಕ್ಷಿ ಹಿರೇಗೌಡ್ರ, ಮಕ್ತುಮಸಾಬ ಮುಲ್ಲಾನವರ, ಶಂಕ್ರಪ್ಪ ರೋಣದ, ಆನಂದಪ್ಪ ಮೂಲಿಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...