ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

Date:

“ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು ಅವಶ್ಯವಾಗಿದೆ. ವೃತ್ತಿ ಮಾರ್ಗದರ್ಶನ ಪಡೆದಿರುವ ವ್ಯಕ್ತಿಗೆ ಈ ದಾರಿ ಸುಗಮಗೊಳ್ಳುವದು. ಅಂತಹ ಸುಂದರ ಭವಿಷ್ಯವನ್ನು ಸುಗಮಗೊಳಿಸಲು ಈ ಕೆರಿಯರ್ ಮೇಳ ಪೂರಕವಾಗಲಿ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಹೇಳಿದರು.

ಗದಗ ಪಟ್ಟಣದ ಡಯಟ್ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ, ಗದಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಇಂದು ಜರುಗಿದ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಕೆರಿಯರ್ ಮೇಳ-2026 ಉದ್ಘಾಟಿಸಿ ಅವರು ಮಾತನಾಡಿದರು.

“ವಿದ್ಯಾರ್ಥಿಗಳು ಮುಂದಿನ ಜೀವನ ರೂಪಿಸಿಕೊಳ್ಳಲು ವೃತ್ತಿ ಮಾರ್ಗದರ್ಶನ ಘಟಕವನ್ನು ರಾಜ್ಯದ ಎಲ್ಲ ಜಿಲ್ಲೆಯ ಡಯಟ್‌ಗಳಲ್ಲಿ ತೆರೆಯುವ ಸರ್ಕಾರ ಆದೇಶ ನೀಡಿದೆ. ಅದರರನ್ವಯ ಗದುಗಿನಲ್ಲಿಯೂ ಈ ಘಟಕವನ್ನು ಇಂದು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ಜಿಲ್ಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಘಟಕದಲ್ಲಿರುವ ವಿಷಯ ತಜ್ಞರೊಂದಿಗೆ ಸಮಾಲೋಚಿಸಿ ಮಾರ್ಗದರ್ಶನ ಪಡೆದುಕೊಳ್ಳಬೇಕು. ಜೊತೆಗೆ ವೃತ್ತಿ ಮಾರ್ಗದರ್ಶನಕ್ಕೆ ಪೂರಕವಾದ ಅತ್ಯಮೂಲ್ಯ ಗ್ರಂಥಗಳು, ಉನ್ನತ ಕೋರ್ಸಗಳ ವ್ಯಾಸಂಗಕ್ಕೆ ಅಗತ್ಯ ಪುಸ್ತಕಗಳಿದ್ದು, ವಿದ್ಯಾರ್ಥಿಗಳು ಅಧ್ಯಯನ ಮಾಡಬಹುದು. ಕಂಪ್ಯೂಟರ್ ಇಂಟರ್‌ನೆಟ್ ಸೌಲಭ್ಯವೂ ಇದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದೇಶಗಳಲ್ಲಿ ವ್ಯಾಸಂಗ ಮಾಡುವದಕ್ಕೂ ಭಾರತದಲ್ಲಿ ಮಾಡುವುದಕ್ಕೂ ಇಂದಿನ ದಿನಗಳಲ್ಲಿ ಬಹಳ ವ್ಯತ್ಯಾಸವಿಲ್ಲ ವಿದೇಶಗಳಲ್ಲಿ ದೊರಕುವಂತಹ ಎಲ್ಲ ರೀತಿಯ ಸಂಪನ್ಮೂಲಗಳು, ವಿಷಯ ತಜ್ಞರು ಭಾರತದಲ್ಲಿಯೂ ಸಹ ಇದ್ದು ಕಲಿಕಾ ಸಾಮಗ್ರಿ, ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ ಸಾಧಿಸಬೇಕೆಂಬ ಛಲದೊಂದಿಗೆ ಉನ್ನತ ಅಧ್ಯಯನ, ಉನ್ನತ ಸಾಧನೆ ಮಾಡಬಹುದಾಗಿದೆ” ಎಂದರು.

“9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ವೃತ್ತಿ ಮಾರ್ಗದರ್ಶನ ಪಡೆದುಕೊಂಡಿದ್ದರೆ ಅರ್ಧ ದಾರಿ ಕ್ರಮಿಸಿದಂತೆ ಉಳಿದಿರುವದು ಪಿಯುಸಿ ನಂತರ ಅವಕಾಶಗಳು ಹೆರಳವಾಗಿದ್ದು ಸಾಧನೆಯ ಸೂಕ್ತ ಮಾರ್ಗವನ್ನು ಕಂಡುಕೊಳ್ಳಬಹುದಾಗಿದೆ” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೆಶಕ (ಅಭಿವೃದ್ಧಿ) ಹಾಗೂ ಪ್ರಾಂಶುಪಾಲರು ಜಿ.ಎಂ.ಮುಂದಿನಮನಿ, “ವಿದ್ಯಾರ್ಥಿ ವಿದ್ಯಾರ್ಥಿನಿಯರು ವೃತ್ತಿ ಬಗ್ಗೆ ಅರಿತುಕೊಳ್ಳಲು ಹಾಗೂ ಭವಿಷ್ಯ ರೂಪಿಸಿಕೊಳ್ಳಲು ಈ ಕೆರಿಯರ್ ಮೇಳಕ್ಕೆ ಉತ್ತಮ ಸ್ಪಂದನೆ ದೊರೆತಿದೆ. ಜಿಲ್ಲೆಯ 865 ವಿದ್ಯಾರ್ಥಿಗಳು ಮೇಳದಲ್ಲಿ ಪಾಲ್ಗೊಂಡು ಮಾಹಿತಿಯನ್ನು ಪಡೆದುಕೊಂಡಿದ್ದು ಈ ಮಾಹಿತಿ ಅವರ ಭವಿಷ್ಯವನ್ನು ರೂಪಿಸುವಂತಾಗಲಿ” ಎಂದರು.

1003105404

ಹಾವೇರಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ.ಬಿ.ಎಂ.ಬೇವಿನಮರದ ಅವರು ‘ಎಸ್.ಎಸ್.ಎಲ್.ಸಿ/ ಪಿಯುಸಿ ನಂತರ ವೃತ್ತಿ ಅವಕಾಶಗಳು’ ಕುರಿತು ಉಪನ್ಯಾಸ ನೀಡಿ, “ನಾವಿಂದು ಭ್ರಮಾ ಲೋಕದಲ್ಲಿದ್ದೇವೆ. ಬದಲಾಗಿ ವಾಸ್ತವಿಕ ಬದುಕಿಗೆ ಒತ್ತು ನೀಡಬೇಕು. ಇದು ಸ್ಪರ್ಧಾತ್ಮಕ ಯುಗವಾಗಿದ್ದು, ಕಲಿಯುವ ಆಸಕ್ತಿ ಸಾಧಿಸುವ ಛಲವಿದ್ದರೆ ಸಾಧನೆ ಸುಗಮಗೊಳ್ಳುವದು. ಸಾಧಿಸಬೇಕೆನ್ನುವ ವಿದ್ಯಾರ್ಥಿಗಳಿಗೆ ಪೋಷಕರ ಸಲಹೆ, ಶಿಕ್ಷಕರ ಮಾರ್ಗದರ್ಶನ ಆಪ್ತ ಸಮಾಲೋಚನೆ ಅಗತ್ಯ” ಎಂದರು.

ಇಗ್ನೋದ ವಿಶ್ರಾಂತ ಪ್ರಾದೇಶಿಕ ನಿರ್ದೆಶಕ ಡಾ.ಜಿ.ಎಚ್.ಇಮ್ರಾಪೂರ ಸಿಇಟಿ, ಎನ್‌ಇಇಟಿ, ಜೆಇಇ, ಎನ್‌ಡಿಎ, ಎಸ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ, ಪರೀಕ್ಷೆ ಎದುರಿಸುವ ಬಗೆಯನ್ನು ವಿವರಿಸಿದರು.

ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರಿಂದ ಚಿತ್ರಪ್ರದರ್ಶನ, ವಿವಿದ ಇಲಾಖೆ ಯೋಜನೆಗಳ ಕುರಿತು ಹಾಗೂ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ಗಣಿತ ಪ್ರಯೋಗಳ ಮಳಿಗೆ ಜನಮನ ಸೆಳೆದವು.

ಕಾರ್ಯಕ್ರಮದಲ್ಲಿ ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವ್ಹಿ.ವ್ಹಿ.ನಡುವಿನಮನಿ, ಡಯಟ್ ಹಿರಿಯ ಉಪನ್ಯಾಸಕ ಬಿ.ಎಫ್.ಅರವಟಗಿ, ಡಯಟ್ ಉಪನ್ಯಾಸಕ ಕೆ.ವೈ.ವಿಭೂತಿ, ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕಿರೇಸೂರ, ಅಧೀಕ್ಷಕರಾದ ಶ್ರೀಮತಿ ಶೈಲಜಾ ತಟ್ಟಿ ಉಪಸ್ಥಿತರಿದ್ದರು. ಡಯಟ್ ಅಧೀಕ್ಷಕ ಶ್ರೀನಿವಾಸ ಕುಲಕರ್ಣಿ ಪ್ರಾರ್ಥಿಸಿದರು, ಉಪನ್ಯಾಸಕರಾದ ಎಚ್.ಬಿ.ರಡ್ಡೇರ ಸ್ವಾಗತಿಸಿದರು, ಯಲ್ಲಪ್ಪ ಹಂದ್ರಾಳ ನಿರೂಪಿಸಿ ಜಿ.ಡಿ.ದಾಸರ ವಂದಿಸಿದರು. ಉಪನ್ಯಾಸಕರಾದ ಶ್ರೀಮತಿ ಕೆ.ಎಸ್.ಹೂಲಗೇರಿ, ಶ್ರೀಮತಿ ಸುಧಾ ಬನಿಕಲ್, ಅಧೀಕ್ಷಕ ಪ್ರಶಾಂತ ಸರ್ವಂದ, ಎಸ್.ಆರ್.ನದಾಫ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...