ಗದಗ | ʼಕರ್ನಾಟಕ ದರ್ಶನʼ ಪ್ರವಾಸಕ್ಕೆ ಎಂಎಲ್‌ಸಿ ಎಸ್.ವಿ ಸಂಕನೂರ ಚಾಲನೆ

Date:

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾದ ‘ಕರ್ನಾಟಕ ದರ್ಶನ’ ಮಕ್ಕಳ ಪ್ರವಾಸಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಗದಗ ನಗರದ ಮುನ್ಸಿಪಲ್ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ (ಜ.8)  ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆಯಿಂದ ಮಕ್ಕಳಿಗೆ ಕರ್ನಾಟಕದ ಪ್ರಮುಖ ಶೈಕ್ಷಣಿಕ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ಸದುದ್ದೇಶ ಹೊಂದಿದೆ. ಮಕ್ಕಳು ತಮ್ಮ ಶಾಲಾ ಶೈಕ್ಷಣಿಕ ಅವಧಿಯಲ್ಲಿ ರಾಜ್ಯದ ಪ್ರವಾಸ ಕೈಕೊಳ್ಳುವ ಮೂಲಕ ಮುಂದಿನ ಕಲಿಕೆಗೆ ಈ ಪ್ರವಾಸ ಸದ್ಭಳಕೆಯಾಗಲಿ ಎಂದರು. ಪ್ರಸಕ್ತ ಸಾಲಿನ 8ನೇ ತರಗತಿಯ ವಿದ್ಯಾರ್ಥಿಗಳು ಈ ಪ್ರವಾಸ ಕೈಗೊಳ್ಳುತ್ತಿದ್ದು ಪ್ರವಾಸವು ಉತ್ತಮ ಅನುಭವವನ್ನು ವಿದ್ಯಾರ್ಥಿಗಳಿಗೆ ನೀಡಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ  ನಗರಸಭೆ ಮಾಜಿ ಅಧ್ಯಕ್ಷ ಬಿ.ಬಿ. ಅಸೂಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಸಮನ್ವಯಾಧಿಕಾರಿ ಜೆ.ಎ. ಬಾವಿಕಟ್ಟಿ, ದೈಹಿಕ ಶಿಕ್ಷಣ ಅಧಿಕಾರಿ ಪವಾರ, ಶ್ರೀಮತಿ ವಣಿಕ್ಯಾಲ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಸೇರಿದಂತೆ  ಪೋಷಕರು, ಮಕ್ಕಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...