ಗದಗ | ತರಗತಿ ಬಹಿಷ್ಕರಿಸಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪ್ರತಿಭಟನೆ

Date:

ಬಿಸಿಯೂಟ, ಪೌಷ್ಟಿಕ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಮುಖ್ಯ ಶಿಕ್ಷಕಿ ಎ.ಎಸ್ ರಾಠೋಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 15ದಿನಳಿಂದ ಮೊಟ್ಟೆ, ಶೇಂಗಾ ಚಿಕ್ಕಿ ಹಾಗೂ ಬಾಳೆ ಹಣ್ಣು ಸೇರಿ ಇನ್ನಿತರ ಪೌಷ್ಟಿಕ ಆಹಾರ ನೀಡದೇ, ಧಾನ್ಯಗಳಿಲ್ಲದ ತಿಳಿ ಸಾಂಬಾರು ಮತ್ತು ಹುಳು ಹತ್ತಿದ ಕೊಳೆತ ತರಕಾರಿಯನ್ನು ಬಳಕೆ ಮಾಡಿ ಅಸಮರ್ಪಕವಾಗಿ ಮಧ್ಯಾಹ್ನ ಬಿಸಿಯೂಟವನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಒಂದರಿಂದ 7ನೇ ತರಗತಿವರೆಗೆ ಒಟ್ಟು 441 ಮಕ್ಕಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಿದ್ದರೂ ಮುಖ್ಯ ಶಿಕ್ಷಕಿ ಎ.ಎಸ್ ರಾಠೋಡ ಅವರು ಮಕ್ಕಳ ಹಿತ ಕಾಪಾಡುತ್ತಿಲ್ಲ, ನಮ್ಮೂರ ಶಾಲೆಗೆ ಇಂಥಹ ಶಿಕ್ಷಕರು ಬೇಡ ಎಂದು ಮಕ್ಕಳು ಪಟ್ಟು ಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...