ಗದಗ | ವಿದ್ಯುತ್ ಪೂರೈಕೆ ಒತ್ತಾಯಿಸಿ ರೈತರಿಂದ ರಸ್ತೆ ತಡೆ ಪ್ರತಿಭಟನೆ

Date:

ಕೃಷಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಗದಗ ಜಿಲ್ಲೆಯ ಮಂಡರಗಿಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ.

ಮುಂಡರಗಿ ತಾಲೂಕಿನಲ್ಲಿ ಕೃಷಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಶಿವಾನಂದ ಇಟಗಿ, “ಮುಂಡರಗಿ‌ ಭಾಗದ ಕೃಷಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈ ಕುರಿತು ಹಿಂದೆಯೂ ಪ್ರತಿಭಟನೆ ಮಾಡಿದ್ದೆವು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕರೆಂಟ್ ಸರಿಯಾಗಿ ಕೊಡದಿರುವುದರಿಂದ ಜಮೀನಿನಲ್ಲಿರುವ ಬೆಳೆಗೆ ಸರಿಯಾಗಿ‌ ನೀರು ಪೂರೈಕೆಯಾಗುತ್ತಿಲ್ಲ. ಬೆಳೆ ಒಣಗುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶರಣಪ್ಪ ಕಂಬಳಿ ಮಾತನಾಡಿ, “ಕೂಡಲೇ ಜಿಲ್ಲೆ ಹಾಗೂ ಹುಬ್ಬಳ್ಳಿಯ ಹೆಸ್ಕಾಂ ಅಧಿಕಾರಿಗಳು ಹಾಗೂ ಶಾಸಕರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ರೈತರ ಜಮೀನುಗಳಿಗೆ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಂಡರಗಿ ತಾಲೂಕು ರೈತ ಸಂಘ ಮುಖಂಡರು ರೈತರು, ಪಕೀರಪ್ಪ ಬಳ್ಳಾರ, ಕೋಟೆಪ್ಪ ಚಿಕ್ಕಣ್ಣವರ, ಪರಸಪ್ಪ ಗದಗಿನ, ಕಿಟ್ಟಪ್ಪ ಮೋರನಾಳ ಹಾಗೂ ಈರಪ್ಪ ಸಿರಿ, ಬಸವರಾಜ ಗಡಾದ, ದ್ಯಾಮಣ್ಣ ಮಸಾಲಿ, ಕನಕಪ್ಪ ಕುರಿ ಹಾಗೂ ರೈತ ಪರ ಸಂಘಟನೆಗಳ ಮುಖಂಡರು ರೈತರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...