ಗದಗ | ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳ ಸಮಗ್ರ ಕಾರ್ಯಗಳಿಂದ ಗ್ರಾಮೀಣಾಭಿವೃದ್ಧಿ ಸಾಧ್ಯ: ಶ್ಯಾಮಸುಂದರ ಪಾಲಿವಾಲ

Date:

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳು ಒಗ್ಗೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ಪಣ ತೊಟ್ಟಾಗ ಮಾತ್ರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ರಾಜಸ್ಥಾನದ ಉದಯಪುರ ಜಿಲ್ಲೆಯ ಪಿಪಲಾಂತ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ಯಾಮಸುಂದರ ಪಾಲಿವಾಲ ಹೇಳಿದರು.

ಗದಗ ಜಿಲ್ಲೆ ನರಗುಂದ ಪಟ್ಟಣದ ತಾಲೂಕು ಪಂಚಾಯತ್ ಸಭಾ‌ ಭವನದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ನರಗುಂದ ತಾಲೂಕು ಪಂಚಾಯತ್ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಮತ್ತು ನೀರು ನಿರ್ವಹಣೆ ಕುರಿತಾದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಿಮೆಂಟ್ ಮತ್ತು ಕಾಂ‌ಕ್ರೀಟ್ ಕೆಲಸಗಳನ್ನು ಬಿಟ್ಟು ಹೆಚ್ಚೆಚ್ಚು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕು. ಆಗ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಅಂರ್ತಜಲ ಮಟ್ಟ ಹೆಚ್ಚುತ್ತದೆ. ಅಲ್ಲದೆ ಸಾರ್ವಜನಿಕ ಕೆಲಸ ಮಾಡುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಬೇರೆಯವರಿಂದ ಒಂದು ರೂಪಾಯಿಯನ್ನೂ ಪಡೆಯದೆ ತಮ್ಮ ಕೈಯಿಂದಲೂ ಹಣ ಹಾಕದೆ ಕೇವಲ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಸ್ಥಾನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಐದು ವರ್ಷಗಳವರೆಗೆ ಒಬ್ಬರೇ ಅಧಿಕಾರ ಚಲಾಯಿಸುತ್ತಾರೆ. ಆದರೆ ಕರ್ನಾಟಕದಲ್ಲಿ ಇದು ಭಿನ್ನವಾಗಿದೆ. ಐದು ವರ್ಷಗಳ ಅಧಿಕಾರವಧಿಯಲ್ಲಿ ಇಬ್ಬರು ಅಥವಾ ಮೂವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗೋದು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕೆಲಸಕಾರ್ಯಗಳಿಗೆ ಹಿನ್ನಡೆಯಾಗಿದೆ. ಈ ಬಗ್ಗೆ ಕರ್ನಾಟಕ ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ಸಂಬಂಧಪಟ್ಟವರ ಜೊತೆ ನಾನೇ ಮಾತನಾಡಿ ಅಭಿವೃದ್ಧಿ ಪೂರಕ ತೀರ್ಮಾನವನ್ನು ಕೈಗೊಳ್ಳಲು ಸಹಕರಿಸುತ್ತೇನೆ” ಎಂದು ಪಾಲಿವಾಲ ತಿಳಿಸಿದರು.

“ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯ್ಕೆಯಾಗುವ ಜನಪ್ರತಿನಿಧಿಗಳು ರಚನಾತ್ಮಕವಾಗಿ ಕೆಲಸ ಮಾಡಿದರೆ ಗ್ರಾಮಗಳ ಅಭಿವೃದ್ಧಿಯ ಜೊತೆಗೆ ದೇಶದ ಅಭಿವೃದ್ಧಿಯಾಗುತ್ತದೆ. ರಚನಾತ್ಮಕವಾಗಿ ಕೆಲಸ ಮಾಡುವ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಧಿಕಾರಿಗಳು ಗ್ರಾಮ ಮಟ್ಟದಿಂದ ರಾಷ್ಟ್ರಮಟ್ಟದವರೆಗೂ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ ಆರ್ ಮುಂಡರಗಿ ಮಾತನಾಡಿ, “ಶ್ಯಾಮಸುಂದರ ಪಾಲಿವಾ ಅವರು ಪಿಪಲಾಂತ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಹೆಣ್ಣು ಮಗು ಜನಿಸಿದರೆ 111 ಸಸಿಗಳನ್ನು ನೆಡುವ ಮೂಲಕ ಹೆಣ್ಣುಭ್ರೂಣ ಹತ್ಯೆ ತಡೆಗಟ್ಟುವುದರ ಜೊತೆಗೆ ಪರಿಸರ ಸಂರಕ್ಷಣೆ ಪಾಠವನ್ನು ತಿಳಿಸಿದ್ದಾರೆ. ರಾಜಸ್ಥಾನದ ಪಿಪಲಾಂತ್ರಿ ಗ್ರಾಮದಲ್ಲಿ ಅಂರ್ತಜಲಮಟ್ಟ ಕುಸಿದು ಹೋಗಿತ್ತು. ಸಾವಿರ ಅಡಿಗೆ ಸಿಗುತ್ತಿದ್ದ ಅಂತರ್ಜಲ ಇದೀಗ ಪಾಲಿವಾಲ ಅವರ ಪರಿಸರ ಸಂರಕ್ಷಣೆ ಕಾರ್ಯದಿಂದ 15 ರಿಂದ 20 ಅಡಿಗೆ ನೀರು ಸಿಗುವಂತಾಗಿದೆ” ಎಂದು ಪಾಲಿವಾಲ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಮಾದಿಗರ ಶಕ್ತಿ ಪ್ರದರ್ಶನ; ನ.11ರಂದು ಹಲೋ ಮಾದಿಗ, ಚಲೋ ಹೈದರಾಬಾದ್ ಸಮಾವೇಶ

ನರಗುಂದ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಕೆ ಇನಾಮದಾರ ಮಾತನಾಡಿ, “ಕೇವಲ 8ನೇ ತರಗತಿ ಪಾಸಾದ ಪಾಲಿವಾಲ ಅವರು ಪಿಪಲಾಂತ್ರಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ದೇಶವೇ ಮೆಚ್ಚುವಂತಹ ಕೆಲಸಗಳನ್ನು ಮಾಡಿದ್ದಾರೆ. ಪಿಪಲಾಂತ್ರಿ ಗ್ರಾಮ ಪಂಚಾಯತಿಯ ನಾಲ್ಕು ಗ್ರಾಮಗಳಲ್ಲಿ ಹಸರೀಕರಣ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಿದ್ದಾರೆ” ಎಂದು ಬಣ್ಣಿಸಿದರು.

ಗದಗ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ಕುಮಾರ ಪೂಜಾರ, ಜಿಲ್ಲಾ ಪಂಚಾಯತ್ ಎಡಿಪಿಸಿ ಕಿರಣಕುಮಾರ್, ನರಗುಂದ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಆನಂದ ಬೋವಿ, ನರಗುಂದ ತಾಲೂಕಿನ ಎಲ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ತಾಲೂಕಿನ ಮನರೇಗಾ ಸಿಬ್ಬಂದಿ ವರ್ಗ ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...