ಗದಗ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಎಸ್‌ಎಫ್‌ಐ ಆಗ್ರಹ

Date:

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು.

ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್ ಮಾತನಾಡಿ, “ರಾಜ್ಯದ ಶಾಲೆ ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣ ಇಲ್ಲದೆ ನಲುಗುತ್ತಿವೆ. ನೂತನವಾಗಿ ಆಯ್ಕೆಗೊಂಡು ರಚನೆಗೊಂಡಿರುವ ರಾಜ್ಯದ ಸಿದ್ಧಾರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದ ಸರ್ಕಾರಿ ಶಾಲೆ ಕಾಲೇಜುಗಳಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡಲು ಮುಂದಾಗಬೇಕು. ಶೈಕ್ಷಣಿಕ ವಲಯದಿಂದ ಹೊರಗೆ ಇರುವ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಒದಗಿಸಲು ಮುಂದಾಗುವಂತೆ, ತಾವುಗಳು ಸರ್ಕಾರದ ಮೇಲೆ ಒತ್ತಡ ಹಾಕಬೇಕು” ಎಂದು ತಹಶೀಲ್ದಾರರಿಗೆ ಒತ್ತಾಯಿಸಿದರು.

“ಕಾಂಗ್ರೆಸ್ ಚುನಾವಣೆಯ ಪೂರ್ವ ನೀಡಿದ ಭರವಸೆಯನ್ನು ಈಡೇರಿಸುವ ಕಾರ್ಯಕ್ಕೆ ಮುಂದಾಗಲಿ. ತನ್ನ ಪ್ರಣಾಳಿಕೆಯಲ್ಲಿ ನೀಡಿದಂತೆ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) 2020ನ್ನು ಕೂಡಲೇ ಹಿಂಪಡೆಯಬೇಕು. ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಲ್ಲಿ ವಿದ್ಯಾರ್ಥಿಗಳ ನಡುವೆ ಕೋಮು ವಿಷ ಬೀಜ ಬಿತ್ತಲು ಹೊರಟ ಬಿಜೆಪಿ ನೀತಿಯನ್ನು ಕೈಬಿಟ್ಟು ತಕ್ಷಣ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಮುಂದಾಗಬೇಕು. ಇದಕ್ಕಾಗಿ ಒಂದು ಸಮಿತಿ ರಚಿಸಬೇಕು. ಶಾಂತಿಯ ನೆಲವಾದ ಕರ್ನಾಟಕದಲ್ಲಿ ಶೈಕ್ಷಣಿಕ ವಲಯವನ್ನು ಸೌಹಾರ್ದ ಸೋದರತ್ವದ ನೆಲೆಯಾಗಿ ಉಳಿಸಿಕೊಳ್ಳಬೇಕಿದೆ. ಇದಕ್ಕೆ ಪೂರಕವಾಗಿ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ಮುಂದಾಗಲಿ. ಡೊನೇಷನ್ ಹಾವಳಿ ನಿಯಂತ್ರಣಕ್ಕೆ ಸರ್ಕಾರ ಮುಂದಾಗಬೇಕು. ಅದಕ್ಕೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ತಾಲೂಕಿನಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಇರುವ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ (ಡೇರಾ) ಕಮಿಟಿಯನ್ನು ರಚಿಸಿ ಸಭೆ ಕರೆಯಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಎಫ್‌ಐ ಜಿಲ್ಲಾ ಮುಖಂಡ ಚಂದ್ರು ರಾಠೋಡ್ ಮಾತನಾಡಿ, “ಶೈಕ್ಷಣಿಕ ವಲಯವು ಮೂಲ ಸೌಲಭ್ಯಗಳ ಕೊರತೆಯಿಂದ ಗೊಂದಲದ ಗೂಡಾಗಿದೆ. ವಿದ್ಯಾರ್ಥಿಗಳಿಗೆ ನೀಡಬೇಕಾದ ಪಠ್ಯಪುಸ್ತಕ, ಒಳ್ಳೆಯ ಸಮವಸ್ತ್ರ, ಶ್ಯೂ, ವಿದ್ಯಾರ್ಥಿವೇತನ, ಸೈಕಲ್, ಬಸ್ ಪಾಸ್‌ಗಳನ್ನು ಈವರೆಗೂ ನೀಡಿಲ್ಲ” ಎಂದು ಆರೋಪಿಸಿದರು.

“ಹಾಸ್ಟೆಲ್‌ಗಳಿಗೆ ಸೇರಬಯಸುವವರಿಗೆ ಅರ್ಜಿ ಕರೆಯಬೇಕು. ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ನೀಡಬೇಕು. ಹಾಸ್ಟೆಲ್ ಇಲ್ಲದ ಕಡೆ ಹೊಸ ಹಾಸ್ಟೆಲ್ ಪ್ರಾರಂಭಿಸಬೇಕು. ಖಾಲಿ ಇರುವ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಗಳನ್ನು ಭರ್ತಿ ಮಾಡಿಕೊಳ್ಳಬೇಕು ಸರ್ಕಾರವು ಕೂಡಲೇ ಈ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

“ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಕಲಾ ವಿಭಾಗದಲ್ಲಿ ಸಮಾಜಶಾಸ್ತ್ರ, ವಿಜ್ಞಾನ ವಿಷಯಕ್ಕೆ ಉಪನ್ಯಾಸಕರ ಭರ್ತಿ ಮಾಡಬೇಕು. ತಕ್ಷಣಕ್ಕೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಿರು ಉಪನ್ಯಾಸಕರನ್ನಾದರು ನೇಮಕ ಮಾಡಿಕೊಳ್ಳಬೇಕು. ವಾಣಿಜ್ಯ ವಿಭಾಗದಲ್ಲಿ Accountancy ಮತ್ತು Business study ವಿಷಯಕ್ಕೆ ಕೆವಲ ಒಬ್ಬರು ಅತಿಥಿ ಉಪನ್ಯಾಸಕರಿದ್ದು, ಖಾಯಂ ಉಪನ್ಯಾಸಕರನ್ನು ಭರ್ತಿ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

“ವಿಜ್ಞಾನ ವಿಭಾಗದಲ್ಲಿ ಜೀವಶಾಸ್ತ್ರ ಉಪನ್ಯಾಸಕರ ವರ್ಗಾವಣೆ ಆಗಿದ್ದು, ಆ ಖಾಲಿ ಹುದ್ದೆಯನ್ನು ತಕ್ಷಣ ಭರ್ತಿ ಮಾಡಬೇಕು. ಗ್ರಂಥಾಲಯದಲ್ಲಿ ಸರಿಯಾದಂತಹ ಪುಸ್ತಕಗಳು ಇಲ್ಲ. ಹಾಗಾಗಿ ಹೆಚ್ಚಿನ ಪುಸ್ತಕಗಳನ್ನು ಒದಗಿಸಬೇಕು. ಗ್ರಂಥಾಲಯಕ್ಕೆ ಒಬ್ಬರನ್ನು ಖಾಯಂ ಗ್ರಂಥಪಾಲಕರನ್ನು ನೇಮಿಸಬೇಕು. ಪ್ರಯೋಗಾಲಯಗಳಿಗೆ ಬೇಕಾಗದಂತಹ ಸಿಬ್ಬಂದಿಗಳನ್ನು ಸೇವಿಸಬೇಕು. ಮೂಲ ಸೌಕರ್ಯಗಳು ಒದಗಿಸಬೇಕು. ಕಾಲೇಜಿನಲ್ಲಿ ಬಡಿಯುವ ನೀರಿನ ಸಮಸ್ಯೆ ಇದ್ದು, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು” ಎಂದು ಒತ್ತಾಯಿಸಿದರು.

“ಕಾಲೇಜಿನಲ್ಲಿ ಬೋಧಕೇತರ ಸಿಬ್ಬಂದಿಗಳನ್ನು ನೇಮಿಸಬೇಕು. ಗಜೇಂದ್ರಗಡ, ರೋಣ ತಾಲೂಕಗಳಲ್ಲಿ ಒಂದೇ ಒಂದು ಸರ್ಕಾರಿ ಪದವಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಇದ್ದು, ಮೂಲ ಸೌಕರ್ಯಗಳನ್ನು ಒದಗಿಸದೇ ಹೋದಲ್ಲಿ ಮುಚ್ಚಿಹೋಗುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕುಡಿಯುವ ನೀರಿಗಾಗಿ ಜೈಲಿಗೆ ಹೋಗೋಣ, ನಿಮ್ಮೊಂದಿಗೆ ನಾವಿದ್ದೇವೆ: ರಾಜ್ಯ ಸರ್ಕಾರಕ್ಕೆ ಆಪ್ ಬೆಂಬಲ

“ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಖಾಯಂ ಉಪನ್ಯಾಸಕರನ್ನು ನೇಮಕ ಮಾಡಬೇಕು. ಮೂಲ ಸೌಲಭ್ಯ ಒದಗಿಸಬೇಕು. ಈ ಮೇಲಿನ ಎಲ್ಲ ಬೇಡಿಕೆ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಒಂದು ವೇಳೆ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮತ್ತು ಇಲಾಖೆಗಳು ಮುಂದಾಗದಿದ್ದರೆ ನಾವು ವಿದ್ಯಾರ್ಥಿಗಳ ಜೊತೆಗೂಡಿ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರದೀಪ್, ಶರಣು, ಅರುಣ, ಮಾಹಾಂತೇಶ, ಪ್ರಭು, ಸುನಿಲ್, ವಿನಾಯಕ ಬಿ ಮಹಮ್ಮದ್ ಆರ್ ಸೇರಿದಂತೆ ಇತರರು ಇದ್ದರು.

ವರದಿ : ಮೀಡಿಯಾ ವಾಲೆಂಟಿಯರ್ ಚಂದ್ರು ರಾಠೋಡ್
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು...

ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ...

ಗದಗ | ಭಾರಿ ಆಲಿಕಲ್ಲು ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ...

ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ...