ಗದಗ | ವಿದ್ಯಾರ್ಥಿಗಳ ಧ್ವನಿಯಾದ ಎಸ್‌ಎಫ್‌ಐಗೆ 54ರ ಸಂಭ್ರಮ

Date:

ದಮನಿತರ ಧ್ವನಿಯಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಕಾರ್ಯ ಮಾಡುತ್ತಿದ್ದು, ಕಳೆದ 54 ವರ್ಷಗಳಿಂದ ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ, ಶಿಕ್ಷಣದ ಉಳಿವಿಗಾಗಿ ನಿರಂತರ ಸೈದ್ದಾಂತಿಕ ಮತ್ತು ಶೈಕ್ಷಣಿಕ ಚಳವಳಿಯನ್ನು ಮುಂದುವರಿಸಿದೆ ಎಂದು ರಾಜ್ಯಪದಾಧಿಕಾರಿ ಗಣೇಶ್ ರಾಠೋಡ್‌ ತಿಳಿಸಿದರು.

ಗದಗ ಜಿಲ್ಲೆ ಗಜೇಂದ್ರಗಡ ನಗರದ ಎಸ್‌ಎಫ್‌ಐ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 54ನೇ ಎಸ್‌ಎಫ್‌ಐ ಸಂಸ್ಥಾಪನಾ ದಿನಾಚರಣೆ ವೇಳೆ ಎಸ್‌ಎಫ್‌ಐ ಧ್ವಜಾರೋಹಣ ಮಾಡಿ ಮಾತನಾಡಿದರು.

“ಕುವೆಂಪು ಅವರು, ʼಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳುʼ ಎಂದು ಹೇಳಿದಂತೆ ಸಮಾನತೆಯ ಶಿಕ್ಷಣಕ್ಕಾಗಿ ಮತ್ತು ಸ್ವಾತಂತ್ರ್ಯ ಪ್ರಜಾಪ್ರಭುತ್ವ ಸಮಾಜವಾದಕ್ಕಾಗಿ ನಿರಂತರ ಹೋರಾಟ ಮಾಡುತ್ತಿದೆ. ಶೋಷಿತರ, ದಮನಿತರ ಧ್ವನಿಯಾಗಿ ಎಸ್‌ಎಫ್‌ಐ ಕಾರ್ಯ ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಮುಖಂಡ ಬಾಲು ರಾಠೋಡ್ ಮಾತನಾಡಿ‌, “ನೀವೆಲ್ಲಾ ರೈತ ಕಾರ್ಮಿಕ ಕೃಷಿ ಕೂಲಿಕಾರರ ಮಕ್ಕಳು. ನಿಮ್ಮ ಹಕ್ಕುಗಳಿಗಾಗಿ ನಡೆಯುವ ಚಳವಳಿಯ ಜೊತೆ ನಿಲ್ಲಬೇಕು. ಸದಾ ಕಾರ್ಮಿಕರ, ನಿಮ್ಮ ಬೆಂಬಲಕ್ಕೆ ಇರುತ್ತೇವೆ. ಕುವೆಂಪು ಅವರು ಹೇಳಿದ ಹಾಗೆ ಸರ್ವಜನಾಂಗದ ಶಾಂತಿಯ ತೋಟವನ್ನು ಎಲ್ಲರೂ ಸೇರಿ ರಕ್ಷಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತಾಲೂಕು ಮಟ್ಟದ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನ

“ಉದ್ಯೋಗದ ಅಭದ್ರತೆ ಹೆಚ್ಚುತಿದ್ದು, ಸರ್ಕಾರದ ನೀತಿಗಳು ಕಾರ್ಪೊರೇಟ್ ಪರವಾಗಿವೆ. ಅದಕ್ಕೆ ಕಾರ್ಮಿಕ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ತಡೆಯಲು ಎಸ್‌ಎಫ್‌ಐ ಸಂಘಟನೆ ಪಾತ್ರ ಮಹತ್ವದ್ದು. ಹಾಗಾಗಿ ನೀವು ಈ ಸಂಸ್ಥಪನಾ ದಿನದಂದು ಸಂಕಲ್ಪ ಮಾಡಿ ವಿದ್ಯಾರ್ಥಿ ಸಂಘಟನೆಯನ್ನು ಬಲಗೊಳಿಸಬೇಕು” ಎಂದರು.

ಎಸ್‌ಎಫ್‌ಐನ ಜಿಲ್ಲಾ ಮುಖಂಡ ಚಂದ್ರು ರಾಠೋಡ್, ತಾಲೂಕು ಕಾರ್ಯದರ್ಶಿ ಶರಣು ಎಂ, ಸಂಗೀತಾ, ನಂದಿನಿ, ಅಶ್ವಿನಿ, ಶಿವರಾಜ್, ಚಂದ್ರು, ಅಡಿಯಪ್ಪ ಮತ್ತು ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...