ಗದಗ | ರೈತ, ಕಾರ್ಮಿಕರ ಮಹಾಧರಣಿಗೆ ವಿದ್ಯಾರ್ಥಿಗಳ ಬೆಂಬಲ

Date:

ದೇಶದ ದುಡಿಯುವ ಜನ ಮತ್ತು ರೈತಾಪಿ ಮಂದಿ ಸೇರಿ ನೂರಾರು ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚಾ ಜಂಟಿ ಸಮಿತಿ ಮತ್ತು ಕಾರ್ಮಿಕ ವರ್ಗದ ಜಂಟಿ ಸಮಿತಿಯ ನೇತೃತ್ವದಲ್ಲಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ನವಂಬರ್ 26 ರಿಂದ 28 ರವರೆಗೆ ನಡೆಯುತ್ತಿರುವ 72 ಗಂಟೆಗಳ ಮಹಾಧರಣಿಗೆ ರಾಜ್ಯದ ವಿದ್ಯಾರ್ಥಿಗಳ ಸಂಪೂರ್ಣ ಬೆಂಬಲ ಇದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್‌ ಸಂಘಟನೆ ತಿಳಿಸಿದೆ.

ಎಸ್‌ಎಫ್‌ಐನ ಪದಾಧಿಕಾರಿ ಗಣೇಶ ರಾಠೋಡ ಮಾತನಾಡಿ, “ಕಾರ್ಮಿಕರ ವಿರೋಧಿ ಕಾರ್ಮಿಕ ಕಾನೂನು ತಿದ್ದುಪಡಿ ಕೈಬಿಡಲು ಒತ್ತಾಯಿಸಿ ಮತ್ತು ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಶಿಫಾರಸು ಮಾಡಿದ ಸ್ವಾಮಿನಾಥನ್ ವರದಿ ಜಾರಿ ಮಾಡಲು ಒತ್ತಾಯಿಸಿ ಮತ್ತು ರೈತ ವಿರೋಧಿ ಕಾಯ್ದೆಗಳ ರದ್ದುಪಡಿಸುವುದು ಸೇರಿದಂತೆ 24 ಬೇಡಿಕೆ ಈಡೇರಿಸಲು ಒತ್ತಾಯಿಸಿ ನಡೆಯುತ್ತಿರುವ ಈ ಮಹಾಧರಣಿಗೆ ವಿದ್ಯಾರ್ಥಿ ಸಮುದಾಯವು ಸಂಪೂರ್ಣ ಬೆಂಬೆಲಿಸುತ್ತದೆ. ವಿದ್ಯಾರ್ಥಿ ವಿರೋಧಿ ನೀತಿ ಆಗಿರುವ ಎನ್‌ಇಪಿಯನ್ನು ರದ್ದುಪಡಿಸಲು ಒತ್ತಾಯಿಸಿ ಈ ಹೋರಾಟದಲ್ಲಿ ಭಾಗಿಯಾಗುತ್ತೇವೆ” ಎಂದು ತಿಳಿಸಿದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯಾರ್ಥಿ ವಿರೋಧಿ, ಶಿಕ್ಷಣ ವಿರೋಧಿ ನೀತಿ ಜಾರಿ ಮಾಡಿರುವುದರಿಂದ ಆ ನೀತಿಗಳ ವಿರುದ್ಧ ನಮ್ಮ ಹೋರಾಟ. ಮೂಲಭೂತ ಸೌಕರ್ಯಗಳ ಕೊರತೆ ನೀಗಿಸಿಲ್ಲ. ಎಲ್ಲ ಹಳ್ಳಿಗಳಿಗೂ ಬಸ್ ಕೊರತೆ ಇದೆ, ಶೌಚಾಲಯಗಳ ಸಮಸ್ಯೆ, ಲೈಬ್ರರಿ ಸಮಸ್ಯೆ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಕೊರತೆ, ಪಠ್ಯ ಪುಸ್ತಕ, ಸೈಕಲ್, ಶೂ, ಬಟ್ಟೆಗಳನ್ನು ಕೊಡದೆ ಇರುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಕಾಲರ್ಶಿಪ್ ಸಮಸ್ಯೆ, ಕಡಿತ ಮಾಡಿರುವುದು, ಹಾಸ್ಟೆಲ್ ಸಮಸ್ಯೆ ವಿದ್ಯಾರ್ಥಿಗಳನ್ನು ನಿರಂತರವಾಗಿ ಕಾಡುತ್ತಿವೆ. ಅನೇಕ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ, ಉಪನ್ಯಾಸಕರ ಕೊರತೆ, ಖಾಯಂ ಅಧ್ಯಾಪಕರ ಕೊರತೆ ಹೀಗೆ ಸಾಲು ಸಾಲು ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿವೆ” ಎಂದು ಹೇಳಿದರು.

“ಸರ್ಕಾರಗಳು ಯಾವುದೇ ಸಮಸ್ಯೆಗಳತ್ತ ಗಮನ ಹರಿಸದೆ ಕಣ್ಮುಚ್ಚಿ ಕುಳಿತಿವೆ. ಈ ಸಮಸ್ಯೆಗಳನ್ನು ಬಗೆಹರಿಸಲು ಕನಿಷ್ಠ ಪಕ್ಷ ಒಂದಿಷ್ಟು ಪ್ರಯತ್ನವನ್ನೂ ಮಾಡದೇ ರಾಜ್ಯ ಸರ್ಕಾರ ಗ್ಯಾರಂಟಿಗಳ ಹಿಂದೆ ಬಿದ್ದಿದೆ. ಕೇಂದ್ರ ಸರ್ಕಾರ ಬರೀ ಸುಳ್ಳುಗಳನ್ನು ಬಿತ್ತರಿಸಿ ರಾಜಕೀಯ ಲಾಭ ಪಡೆಯಲು ಹೆಣಗುತ್ತಿದೆ. ಹಾಗಾಗಿ ಈ ಹೋರಾಟ ಅನಿವಾರ್ಯವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಾಯಮಾತಿಗೆ ಗಡುವು ನೀಡಿದ ಅತಿಥಿ ಉಪನ್ಯಾಸಕರ ಸಂಘ

ರಾಜ್ಯದ ಜನತೆ ಈ ಮಹಾಧರಣಿಯಲ್ಲಿ ಜೊತೆಯಾಗಿ ನಿಲ್ಲಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್‌ ಸಂಘಟನೆಯು ಜನತೆಯಲ್ಲಿ ಈ ಮೂಲಕ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರುಗಳಾದ ಗಣೇಶ ರಾಠೋಡ್, ಚಂದ್ರು ರಾಠೋಡ್, ಕಾರ್ಮಿಕ ಮುಖಂಡರುಗಳಾದ ಮೈಬೂ ಹವಾಲ್ದಾರ್, ಪ್ರದೀಪ್ ಎಂ, ಶರಣು ಎಂ, ಮಾಂತೇಶ ಪಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...