ಗದಗ | ರೈತರ ಕೈ ಸೇರದ ಫಸಲ್ ಭೀಮಾ ಯೋಜನೆಯ ಹಣ

Date:

ಭೀಕರ ಬರದಿಂದ ರೈತರು ಈಗಾಗಲೇ ಕಂಗಾಲಾಗಿದ್ದಾರೆ. ಇದರ ನಡುವೆ, ಸರ್ಕಾರದಿಂದ ಫಸಲ್ ಭೀಮಾ ಯೋಜನೆಯಡಿ 35ಕೋಟಿ ರೂ. ಬೆಳೆ ವಿಮೆ ಬಿಡುಗಡೆ ಆಗಿತ್ತು. ಬೆಳೆ ವಿಮೆ ಹಣ ಬಂದ್ದರೂ ಜಿಲ್ಲಾಡಳಿತ ಮಾತ್ರ ರೈತರಿಗೆ ನೀಡಿಲ್ಲ.‌ ಇದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಫಸಲು ಭೀಮಾ ಯೋಜನೆಯಡಿ 35 ಕೋಟಿ ರೂ. ಬಿಡುಗಡೆ ಆಗಿತ್ತು. ರಾಜ್ಯದಲ್ಲೇ ಗದಗ ಜಿಲ್ಲೆಗೆ ಅತಿಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ. ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ ರೈತರ ಪರಿಸ್ಥಿತಿ.

ಬಿಡುಗಡೆಯಾಗಿ ತಿಂಗಳಾದರೂ ರೈತರ ಖಾತೆಗೆ ಜಿಲ್ಲಾಡಳಿತ ಹಣ ಹಾಕಿಲ್ಲ. ಹಾಗಾಗಿ ಗದಗ ಜಿಲ್ಲಾಡಳಿತದ ವಿರುದ್ಧ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ರೈತರ ವಿರುದ್ಧ ಜಿಲ್ಲಾಡಳಿತ ಅನ್ಯಾಯ ಮಾಡುತ್ತಿದೆ ಎಂದು ರೈತರು ಗರಂ ಆಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...