ಗದಗ | ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಬಿಡುಗಡೆ

Date:

ಗದಗ ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ಗ್ರಾಮಗಳ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಮಲಪ್ರಭಾ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ 750 ಕ್ಯೂಸೆಕ್‌ ನೀರನ್ನು ಸೆಪ್ಟೆಂಬರ್‌ 22ರಿಂದ 15 ದಿನಗಳವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ನೀರನ್ನು ಹರಿಸಲು ಸಭೆಯಲ್ಲಿ ನಿರ್ಣಯಿಸಿದ್ದಾರೆ.

“ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ಬಿಡಲಾದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಬಳಸಿ, ಬೇರಾವುದೇ ಉದ್ದೇಶಕ್ಕೆ ಬಳಸಿಕೊಳ್ಳದಂತೆ ನಿಗಾ ವಹಿಸಬೇಕು. ಜೊತೆಗೆ ಮಲಪ್ರಭಾ ಬಲದಂಡೆ ಕಾಲುವೆಯ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ ದನಕರುಗಳನ್ನು ನದಿ/ಕಾಲುವೆಗೆ ಇಳಿಸುವುದಾಗಲೀ ಮಾಡದಂತೆ ಎಚ್ಚರ ವಹಿಸುವುದರ ಜೊತೆಗೆ ಈ ವೇಳೆ ರೈತ ಬಾಂಧವರು ನದಿದಂಡೆ ಕಾಲುವೆಗೆ ಅಳವಡಿಸಿರುವ ಪಂಪಸೆಟ್‍ಗಳಿಂದ ನೀರೆತ್ತುವುದನ್ನೂ ಕೂಡ ನಿಷೇಧಿಸಿದೆ” ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.

“ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ಹರಿಬಿಡಲಾದ ನೀರನ್ನು ಯಾವುದೇ ಕಾರಣಕ್ಕೂ ಕೃಷಿಗೆ ಬಳಸಬಾರದು. ಕೇವಲ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಬೇಕು. ಹರಿಬಿಡಲಾದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡುವ ಕುರಿತಂತೆ ಹಲವು ಇಲಾಖೆಗಳ ಅಧಿಕಾರಿಗಳ ತಂಡ ರಚನೆ ಮಾಡಿ ಅದರ ಸದುಪಯೋಗ ಕುರಿತು ಸೂಕ್ತ ನಿಗಾವಹಿಸಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾವೇರಿ ಪ್ರತಿಭಟನೆ | ಅಹಿತಕರ ಘಟನೆ ನಡೆದರೆ ಕಾನೂನು ಕ್ರಮ: ಸಚಿವ ಪರಮೇಶ್ವರ್‌ ಎಚ್ಚರಿಕೆ

“ದೈನಂದಿನ ವರದಿ ಸಲ್ಲಿಸುವುದು, ನೀರಿನ ಸದ್ಬಳಕೆ ಕುರಿತು ಸಾಕ್ಷಚಿತ್ರ ಪಡೆದು ಸಲ್ಲಿಸುವುದು ಸೇರಿದಂತೆ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ಬಿಡುಗಡೆಗೊಳಿಸಲಾಗಿರುವ ನೀರು ಉದ್ದೇಶಿತ ಸ್ಥಳವನ್ನು ತಲುಪುವಂತೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ನೀರಾವರಿ ಇಲಾಖಾ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಬೇರಾವುದೇ ಕಾರಣಗಳಿಂದಾಗಿ ನೀರು ಪೋಲಾಗದಂತೆ ಕ್ರಮ ಜರುಗಿಸಬೇಕು. ಪ್ರಸ್ತಾಪಿತ ಸ್ಥಳದಲ್ಲಿ ನೀರು ಭರ್ತಿಯಾದಲ್ಲಿ ಅಥವಾ ನೀರು ಸಾಕೆನಿಸಿದಲ್ಲಿ ಕೂಡಲೇ ನೀರಿನ ಹರಿವನ್ನು ಸ್ಥಗಿತಗೊಳಿಸಲು ಕ್ರಮ ಜರುಗಿಸಬೇಕು. ಈ ಎಲ್ಲ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...