ಗದಗ | ಪ್ರಸಿದ್ಧ ಕಲಾವಿದರಂತೆ ಯುವ ಕಲಾವಿದರಿಗೂ ಪ್ರೋತ್ಸಾಹ ದೊರಕಲಿ: ಸಚಿವ ಎಚ್ ಕೆ ಪಾಟಿಲ್

Date:

ನಾಡಿನ ಪ್ರಸಿದ್ಧ ಕಲಾವಿದರಿಗೆ ಸಾರ್ವಜನಿಕ ಸಮಾರಂಭಗಳಲ್ಲಿ ನೀಡುವ ಶಿಳ್ಳೆ, ಚಪ್ಪಾಳೆ, ಪ್ರೋತ್ಸಾಹವು ಸ್ಥಳೀಯ ಯುವ ಕಲಾವಿದರಿಗೂ ನೀಡುವ ಮೂಲಕ ಪ್ರೋತ್ಸಾಹಿಸುವ ಕಾರ್ಯವಾಗಲಿ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟಿಲ್ ಹೇಳಿದರು.

‌ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸಂಘಗಳ ಒಕ್ಕೂಟ, ಆದರ್ಶ ಶಿಕ್ಷಣ ಸಮಿತಿಯ ಡಿ.ಎಸ್.ಕುರ್ತಕೋಟಿ ಮೆಮೋರಿಯಲ್ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ನಗರದ ಆದರ್ಶ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಭವನದಲ್ಲಿ ಶನಿವಾರ ಜರಗಿದ ಗದಗ ಜಿಲ್ಲಾ ಮಟ್ಟದ ಪ್ರಸಕ್ತ ಸಾಲಿನ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಗದಗ ಜಿಲ್ಲೆ ವ್ಯಾಪ್ತಿಯ ಪ್ರತಿ 15 ಕಿಮೀ ಅಂತರದಲ್ಲಿ ಸಾಹಿತ್ಯ, ಸಂಗೀತ, ಸಂಸ್ಕೃತಿ, ಸಂಪ್ರದಾಯ, ಕ್ರೀಡೆ ಸೇರಿದಂತೆ ಹಲವು ರಂಗಗಳಲ್ಲಿ ಸಾಧನೆಗೈದ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಮಹನೀಯರನ್ನು ಕಾಣಬಹುದಾಗಿದೆ. ಈ ಸಾಧನೆ ಗದಗ ಜಿಲ್ಲೆಯ ಹೆಮ್ಮೆಯ ವಿಷಯ. ಸಂಗೀತ ಕ್ಷೇತ್ರದಲ್ಲಿ ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯವರಾದ ಪಂಡಿತ ಭೀಮಸೇನ ಜೋಶಿಯವರು ಒಬ್ಬರೇ ಈವರೆಗೂ ಸಂಗೀತ ಕ್ಷೇತ್ರಕ್ಕೆ ಭಾರತ ರತ್ನ ಪಡೆದವರಾಗಿದ್ದಾರೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆ ಮಾಡುವುದಕ್ಕೆ ತುಂಬಾ ಸಂತೋಷವೆನಿಸುತ್ತದೆ. ಮೊನ್ನೆ ನವೆಂಬರ್ 1 ರಿಂದ 3 ರವರೆಗೆ ನಗರದಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಯುವಜನತೆಯ ಪಾಲ್ಗೊಳ್ಳುವಿಕೆ ಮುಖ್ಯವಾಗಿತ್ತು. ಅಲ್ಲದೆ ಮೂರು ದಿನಗಳ ಕಾಲ ಸಾಯಂಕಾಲ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಕಲಾವಿದರು ಕಲಾಪ್ರಕಾರಗಳಿಂದ ಅದ್ಭುತ ಕಾರ್ಯಕ್ರಮ ಮೂಡಿಬಂದಿತು. ಕಾರ್ಯಕ್ರಮ ಯಶಸ್ವಿಗೆ ಯುವಜನರ ಪಾಲ್ಗೊಳ್ಳುವಿಕೆ ಪ್ರಮುಖವಾಗಿತ್ತು” ಎಂದರು.

ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ ಮಾತನಾಡಿ, “ಜಗತ್ತಿನಲ್ಲಿ ಹೆಚ್ಚು ಯುವಜನರನ್ನು ಹೊಂದಿದ ರಾಷ್ಟ್ರ ಭಾರತ. ಯುವಜನರು ಮನಸ್ಸು ಮಾಡಿದರೆ ಅಸಾಧ್ಯವೆಂಬುದು ಯಾವುದೂ ಇಲ್ಲ. ಸ್ವಾಮಿ ವಿವೇಕಾನಂದರು ಹೇಳಿದಂತೆ ಯುವಕರಲ್ಲಿ ಅದಮ್ಯ ಶಕ್ತಿ ಇದೆ. ಬದಲಾವಣೆ ಆಗಬೇಕಾದರೆ ಅದು ಯುವಜನರಿಂದ ಸಾಧ್ಯ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶದ ಸಂಪತ್ತು ರಕ್ಷಿಸುವಂತೆ ಆಗ್ರಹ; ನ.26ರಿಂದ 28ರವರೆಗೆ ಧರಣಿ

“ಯುವಜನತೆಗೆ ಸಾಧನೆಗೈಯಲು ಅಗತ್ಯ ಪ್ರೋತ್ಸಾಹ, ಸಹಕಾರ ನೀಡಬೇಕು. ಶಿಕ್ಷಣವೆಂದರೆ ಕೇವಲ ಪಠ್ಯಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಿಗೂ ವಿಕಸನ ಹೊಂದಬೇಕು. ದೇಶದ ಸಂಪತ್ತು ಯಾವುದೆಂದರೆ ಖನಿಜ ಸಂಪತ್ತು, ಅರಣ್ಯ ಸಂಪತ್ತು, ನೈಸರ್ಗಿಕ ಸಂಪತ್ತು ಎಂದು ಹೇಳುತ್ತೇವೆ. ಅದರೊಟ್ಟಿಗೆ ಯುವಜನರೂ ಸಹ ದೇಶದ ಸಂಪತ್ತೆಂದು ನೋಡುವ ಮನೋಭಾವ ನಮ್ಮದಾಗಬೇಕಿದೆ. ಇತ್ತೀಚೆಗೆ ಪಾಶ್ಚಿಮಾತ್ಯ ಸಾಹಿತ್ಯದ ಪ್ರಭಾವ ಮಿತಿಮೀರುತ್ತಿದೆ. ದೇಶಿಯ ಸಾಹಿತ್ಯ, ಸಂಸ್ಕೃತಿ ಬೆಳೆಸುವ ಹಾಗೂ ಉಳಿಸುವ ಮನೋಭಾವನೆ ಮೈಗೂಡಿಸಿಕೊಳ್ಳಬೇಕಿದೆ” ಎಂದರು.

ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ರವಿಕಾಂತ ಅಂಗಡಿ, ಆದರ್ಶ ಶಿಕ್ಷಣ ಸಮಿತಿ ಕಾರ್ಯದರ್ಶಿ ಗೋಡಖಿಂಡಿ, ಡಿ ಎಸ್ ಕುರ್ತಕೋಟಿ ಮೆಮೋರಿಯಲ್ ಪದವಿಪೂರ್ವ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ರವೀಂದ್ರ ಕುಲಕರ್ಣಿ, ಜಿ.ಪಂ. ಮಾಜಿ ಅಧ್ಯಕ್ಷ ಸಿದ್ಧು ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...