ಗದಗ | ಆಯೋಜಕರ ಬೇಜವಬ್ದಾರಿ ಧೋರಣೆ; ಮೂಲ ಸೌಕರ್ಯವಿಲ್ಲದೆ ಕ್ರೀಡಾಪಟುಗಳ ಆಕ್ರೋಶ

Date:

ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಬಂದಿದ್ದ ಕ್ರೀಡಾಪಟುಗಳು ಆಯೋಜಕರ ಬೇಜವಬ್ದಾರಿತನದಿಂದಾಗಿ ಬೇಸತ್ತಿದ್ದಾರೆ. ಅಗತ್ಯ ಮೂಲ ಸೌಲಭ್ಯಗಳು ದೊರೆಯದೆ, ರಸ್ತೆ ಬದಿಯಲ್ಲಿ ಕಾದು ಕುಳಿತು ಕ್ರೀಡೆಯೇ ಬೇಡಪ್ಪಾ ಎಂಬ ಪರಿಸ್ಥಿತಿ ಅನುಭವಿಸಿದ್ದಾರೆ.

ಗದಗ ನಗರದಲ್ಲಿ ಶನಿವಾರದಿಂದ ಪಿಯುಸಿ ಕಾಲೇಜುಗಳ ರಾಜ್ಯ ಪಟ್ಟದ ಹಾಕಿ ಕ್ರೀಡಾಕೂಟ ನಡೆಯಲಿದೆ. ಅದಕ್ಕಾಗಿ ರಾಜ್ಯದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು ನಗರಕ್ಕೆ ಬಂದಿದ್ದಾರೆ. ಆದರೆ, ಬರುವ ವಿದ್ಯಾರ್ಥಿಗಳಿಗೆ ಸರಿಯಾದ ವ್ಯವಸ್ಥೆ ಒದಗಿಸುವಲ್ಲಿ ಆಯೋಜಕು ವಿಫಲರಾಗಿದ್ದು, ವಿದ್ಯಾರ್ಥಿಗಳು ಸುಸ್ತಾಗಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಗದಗ ವಿಭಾಗವು ಕ್ರೀಡಾಪಟುಗಳಿಗೆ ಅಗತ್ಯ ವ್ಯವಸ್ಥೆ ಒದಗಿಸುವ ಜವಾಬ್ದಾರಿ ಹೊತ್ತಿತ್ತು. ಆದರೆ, ಬರುವ ವಿದ್ಯಾರ್ಥಿಗಳಿಗೆ ವಸತಿ, ಉಪಹಾರ, ಊಟ, ನೀರು, ವಾಹನ ಪ್ರಮುಖ ಸೌಲಭ್ಯಗಳನ್ನು ಒದಗಿಸಬೇಕಿತ್ತು. ಆದರೆ, ಯಾವ ಸೌಲಭ್ಯಗಳು ವ್ಯವಸ್ಥಿತವಾಗಿ ದೊರೆಯದ ಕಾರಣ, ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಳಗಿನ ಜಾವವೇ ಗದಗಕ್ಕೆ ವಿದ್ಯಾರ್ಥಿಗಳು ಬಂದಿದ್ದಾರೆ. ರಾತ್ರಿ ಇಡೀ ಪ್ರಯಾಣ ಮಾಡಿಕೊಂಡು ಬಂದ ವಿದ್ಯಾರ್ಥಿಗಳಿಗೆ ಎಲ್ಲಿಗೆ ಹೋಗಬೇಕು. ಎಲ್ಲಿ ಉಳಿಯಬೇಕು ಎಂಬುದರ ಮಾಹಿತಿಯೂ, ಸೌಲಭ್ಯವೂ ದೊರೆಯದೆ, ಬಸ್‌ ನಿಲ್ದಾಣ, ರೈಲು ನಿಲ್ದಾಣ, ಕ್ರೀಡಾಂಗಣಗಳಲ್ಲಿಯೇ ಕಾದು ಕುಳಿತಿದ್ದರು.

ತಡವಾಗಿ ಕೊಠಡಿಗಳನ್ನು ನೀಡಿದರೂ, ಅವುಗಳು ಶುಚಿಯಾಗಿಲ್ಲ. ಗಬ್ಬುನಾರುತ್ತಿವೆ. ಕುಡಿಯುವ ನೀರು, ಊಟದ ವ್ಯವಸ್ಥೆ ಕೂಡ ಸರಿಯಾಗಿ ಆಗಿರಲಿಲ್ಲ ಎಂದು ಕ್ರೀಡಾಪಟುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...