ಗದಗ | ಲೋಕಾಯುಕ್ತ ದಾಳಿ: ಬಿಸಿಎಂ ಅಧಿಕಾರಿ ಮನೆಯಲ್ಲಿ ₹1.82ಕೋಟಿ ಪತ್ತೆ

Date:

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ. ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಒಟ್ಟು ₹1.82 ಕೋಟಿ ಆಸ್ತಿ ಪತ್ತೆಯಾಗಿರುವುದು ತಿಳಿದು ಬಂದಿದೆ.

ಲೋಕಾಯುಕ್ತ ಪೊಲೀಸರ ಶೋಧನೆ ವೇಳೆ ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ. ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್‌ಶೀಟ್‌ಗಳು, ಹಾಸ್ಟೆಲ್‌ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್‌ಪುಸ್ತಕಗಳು ಸಿಕ್ಕಿದ್ದು, ಅಧಿಕಾರಿಗಳನ್ನು ಅಚ್ಚರಿ ವ್ಯಕ್ತಪಡಿಸಿದ್ದಾರೆ.  

ಇವುಗಳ ಜತೆಗೆ, ₹13 ಲಕ್ಷ ಮೌಲ್ಯದ ಆರು ನಿವೇಶನಗಳು, ₹45 ಲಕ್ಷ ಮೌಲ್ಯದ ಮನೆ, ₹80.77 ಲಕ್ಷ ಮೌಲ್ಯದ 29 ಎಕರೆ ಜಮೀನು ಸೇರಿದಂತೆ ಒಟ್ಟು ₹1.38 ಕೋಟಿ ಮೌಲ್ಯದ ಸ್ಥಿರಾಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ಸಿಕ್ಕಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹89 ಸಾವಿರ ನಗದು, ₹23.21 ಲಕ್ಷ ಮೌಲ್ಯದ 152 ಗ್ರಾಂ ಚಿನ್ನಾಭರಣ, ₹2.05 ಲಕ್ಷ ಮೌಲ್ಯದ ಬೆಳ್ಳಿ, ₹31.40 ಲಕ್ಷ ಮೌಲ್ಯದ ವಾಹನಗಳು ಸೇರಿದಂತೆ ಒಟ್ಟು ₹1.82 ಕೋಟಿ ಆಸ್ತಿ ಪತ್ತೆ ಮಾಡಿದ್ದಾರೆ. 

ದಾಖಲಾತಿಗಳ ಪರಿಶೀಲನೆ ಮುಂದುವರಿದಿದೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...