ಚಿಕ್ಕಮಗಳೂರು | ಕಾಂಗ್ರೆಸ್‌ ಮುಖಂಡನ ಹತ್ಯೆ ಪ್ರಕರಣ; ಮೃತನ ವಿರುದ್ಧವೇ ಎಫ್‌ಐಆರ್‌ ದಾಖಲು

Date:

ಡಿಸೆಂಬರ್ 5 ರಾತ್ರಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು ಕಂಡಿದ್ದು, ಕೊಲೆಯಾದ ಗಣೇಶ್ ಗೌಡನ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ. ಗಣೇಶ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ನೀಡಿದ ದೂರಿನ ಆಧಾರದ ಮೇಲೆ ಹತ್ಯೆಯಾದ ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬ್ಯಾನರ್‌ ತೆರವುಗೊಳಿಸುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಗಣೇಶ್‌ ಗೌಡನನ್ನು ಬಜರಂಗದಳ ಕಾರ್ಯಕರ್ತರು ಹತ್ಯೆಗೈದಿದ್ದರು ಎಂದು ಆರೋಪಿಸಲಾಗಿದೆ. ಪರಾರಿಯಾಗಿದ್ದ ಆರೋಪಿಗಳಾದ ಬಜರಂಗದಳದ ಕಾರ್ಯಕರ್ತ ಹಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದ ಪೊಲೀಸರು, ಸಂಜಯ್‌, ನಾಗಭೂಷಣ್‌ ಎಂಬ ಇಬ್ಬರು ಆರೋಪಿಗಳನ್ನು‌ ಬಂಧಿಸಿದ್ದಾರೆ.

ಇದೀಗ, ಬಂಧಿತ ಆರೋಪಿಗಳು ಮೃತ ಗಣೇಶ್ ಮೇಲೆಯೇ ಪ್ರತ್ಯಾರೋಪ ಮಾಡಿದ್ದು, ದೂರು ದಾಖಲಿಸಿದ್ದಾರೆ. “ಡಿಸೆಂಬರ್ 5ರ ರಾತ್ರಿ ಸಖರಾಯಪಟ್ಟಣದ ಮಠದ ಬಳಿ ಬ್ಯಾನರ್ ತೆರವುಗೊಳಿಸುವಾಗ ಗಣೇಶ್ ಗೌಡ ‘ಇವರದ್ದು ಜಾಸ್ತಿ ಆಯಿತು’ ಎಂದು ಬಜರಂಗದಳ ಕಾರ್ಯಕರ್ತರನ್ನು ನಿಂದಿಸಿ, ಗಲಾಟೆ ಮಾಡಿದ್ದರು” ಎಂದು ಆರೋಪಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಲಾಟೆ ಮಾಡದಂತೆ ಗಣೇಶ್ ಗೌಡನನ್ನು ಪ್ರಶ್ನಿಸಿದೆ. ಇದರಿಂದ ಗಣೇಶ್ ಮತ್ತು ನಮ್ಮ ನಡುವೆ ‌ಜಗಳ ಆರಂಭವಾಯಿತು. ಈ ವೇಳೆ, ಗಣೇಶ್ ಮತ್ತು ಇತರರು ನಮ್ಮ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಯತ್ನಿಸಿದರು” ಎಂದು ಆರೋಪಿ ಸಂಜಯ್ ಆರೋಪಿಸಿದ್ದಾರೆ.

ಆರೋಪಿಗಳ‌ ಪ್ರತಿದೂರಿನ ಆಧಾರ ಮೇಲೆ ಮೃತ ಗಣೇಶ್ ಮತ್ತು ಕಾಂಗ್ರೆಸ್ ಕಾರ್ಯಕರ್ತರಾದ ಸಂದೀಪ್, ಅಪ್ಪು, ಚಂದು,ಅಭಿ, ಬಿಂದು, ರೋಷನ್‌ ಎಂಬವರ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...