ಉಡುಪಿ | ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕಡ್ಡಾಯ – ಎಸ್‌ ಪಿ ಹರಿರಾಂ ಶಂಕರ್‌

Date:

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳಿಗೆ ಪ್ರತಿ ಸಮಿತಿಯವರು ಕಡ್ಡಾಯವಾಗಿ ಪೋಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ವತಿಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಹೇಳಿದರು.

ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಆಚರಣೆಯ ಸಲುವಾಗಿ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟಂತೆ ಚರ್ಚಿಸಲು ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದ ಅವರು,
ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಧ್ವನಿ ವರ್ಧಕಗಳ ಬಳಕೆಗೆ ನಿಷೇಧವಿರುತ್ತದೆ ಎಂದರು. ಗಣೇಶ ಪ್ರತಿಷ್ಠಾನ ಪೆಂಡಾಲ್‌ಗಳಲ್ಲಿ ಸಿ.ಸಿ.ಟಿವಿ ಗಳ ಅಳವಡಿಕೆ, ಬೆಳಕಿನ ವ್ಯವಸ್ಥೆಗಳನ್ನು ಆಯೋಜಕರು ಮಾಡುವುದು ಸೂಕ್ತ ಎಂದ ಅವರು, ಬ್ಯಾನರ್‌ಗಳಲ್ಲಿ ಪ್ರಚೋಧನಾಕಾರಿ ಘೋಷಣೆಗಳನ್ನು ಅಳವಡಿಕೆ ಮಾಡುವಂತಿಲ್ಲ. ಬ್ಯಾನರ್‌ಗಳ ಅಳವಡಿಕೆಗೆ ಸೂಕ್ತ ಪ್ರಾಧಿಕಾರದ ಅನುಮತಿ ಪಡೆಯಬೇಕು ಎಂದರು.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್‌ಪಿ ಸುಧಾಕರ್ ನಾಯಕ್, ಸಹಾಯಕ ಕಮೀಷನರ್ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...