ಬೀದರ್ | ಚಳಕಾಪುರ ಹನುಮಾನ ಜಾತ್ರೆಯಲ್ಲಿ ಗುಂಪು ಘರ್ಷಣೆ: ಶಾಂತಿ ಸ್ಥಾಪನೆಗೆ ಖಂಡ್ರೆ ಮನವಿ

Date:

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಎರಡು ಸಮುದಾಯದವರ ನಡುವೆ ನಡೆದಿರುವ ಗುಂಪು ಘರ್ಷಣೆಯಿಂದ ತೀವ್ರ ಆಘಾತವಾಗಿದ್ದು, ಶಾಂತಿ ಮರು ಸ್ಥಾಪನೆಗೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.

‘ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತರೆಲ್ಲರೂ ಸಹೋದರರಂತೆ ಬಾಳುತ್ತಿರುವ ಬೀದರ್ ಜಿಲ್ಲೆ ಸರ್ವ ಜನಾಂಗದ ಶಾಂತಿಯ ತೋಟವೆಂದು ಹೆಸರಾಗಿದೆ. ಜಾತಿಯತೆಯ ನಿರ್ಮೂಲನೆಗೆ ಶ್ರಮಿಸಿದ ಬಸವಾದಿ ಶರಣರ ನಾಡಿನಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಅಪಾರ ಗೌರವ ನೀಡಲಾಗುತ್ತದೆ. ಇಂತಹ ಭಾವೈಕ್ಯತೆಯ ನೆಲದಲ್ಲಿ ನಡೆಯುವ ಸಣ್ಣ ಘಟನೆಗಳು ಜಿಲ್ಲೆಯ ಖ್ಯಾತಿಗೆ ಕಳಂಕ ತರುತ್ತವೆ’ ಎಂದು ಬುಧವಾರ ತಿಳಿಸಿದ್ದಾರೆ.

‘ಚಳಕಾಪುರದಲ್ಲಿ ಆಗಿರುವ ಕಹಿ ಘಟನೆ ಮರೆತು ಎಲ್ಲರೂ ಶಾಂತಿ ಮರು ಸ್ಥಾಪನೆಗೆ ಪ್ರಯತ್ನಶೀಲರಾಗಬೇಕು. ಗ್ರಾಮದಲ್ಲಿ ನಡೆದಿರುವ ಘಟನೆ ಅತ್ಯಂತ ನೋವಿನ ಸಂಗತಿ. ಸಮಾಜದ ಸ್ವಾಸ್ಥ್ಯ ಕದಡದಂತೆ, ಶಾಂತಿಗೆ ಭಂಗ ಬಾರದಂತೆ ಪ್ರಜ್ಞಾವಂತರಾದ ಬೀದರ್ ಜಿಲ್ಲೆಯ ಜನತೆ ಸಹಕರಿಸಬೇಕು’ ಎಂದು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿ, ಶಾಂತಿ ಸಭೆ ನಡೆಸಿ, ಶಾಂತಿ ಮರುಸ್ಥಾಪಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಚಳಕಾಪುರದ ಹನುಮಾನ ಜಾತ್ರೆ ಸಂದರ್ಭದಲ್ಲಿ ನ.3ರಂದು ಪರಿಶಿಷ್ಟ ಜಾತಿ ಹಾಗೂ ಸವರ್ಣಿಯರ ಮಧ್ಯೆ ಗುಂಪು ಘರ್ಷಣೆ ನಡೆದಿದ್ದು, ಎರಡೂ ಕಡೆಯವರ ವಿರುದ್ಧ ಖಟಕ ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...