ಕಲಬುರಗಿ : ಗಣೇಶ ಕಟ್ಟೆ ನವೀಕರಣ ವಿಚಾರಕ್ಕೆ ಗುಂಪು ಘರ್ಷಣೆ: ಸೆಕ್ಷನ್144 ಜಾರಿ

Date:

ಗಣೇಶ ಕಟ್ಟೆ ನವೀಕರಣ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಜೇವರ್ಗಿ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಮುನ್ನೆಚ್ಚರಿಕೆಯಾಗಿ ನಿಷೇದಾಜ್ಞೆ ಜಾರಿಗೊಳಿಸಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಸ್ಪಿ ಅಡ್ಡೂರು ಶ್ರೀನಿವಾಸಲು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಗಣೇಶ ಪ್ರತಿಷ್ಠಾಪನೆ ಕಟ್ಟೆ ನವೀಕರಣಕ್ಕೆ ಹಿಂದೂ ಯುವಕರು ಮುಂದಾಗಿದ್ದರು. ಆದರೆ, ಗಣೇಶ ಕಟ್ಟೆಗೆ ಹೊಂದಿಕೊಂಡಂತೆ ಮಸೀದಿ ಇರುವ ಜಾಗದ ವಿಚಾರವಾಗಿ ಸಂಘರ್ಷ ಉಂಟಾಗಿದೆ ಎನ್ನಲಾಗಿದೆ. ಎರಡು ಕೋಮಿನ ಜನರಿಂದ ಕಲ್ಲು ತೂರಾಟ ಮತ್ತು ಬಡಿಗೆಗಳಿಂದ ಹೊಡೆದಾಡಿಕೊಂಡಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಸದ್ಯ ಪರಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಎಸ್ಪಿ ಅಡ್ಡೂರು ಶ್ರೀನಿವಾಸಲು ಪ್ರತಿಕ್ರಿಯಿಸಿ, “ನೆಲೋಗಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಾಗ ಖಾಲಿಮಾಡಿಸುವ ವಿಚಾರವಾಗಿ ವ್ಯಕ್ತಿಯೊಬ್ಬ ವಾಟ್ಸಪ್‌ ಗ್ರೂಪ್ ನಲ್ಲಿ ಮಾಹಿತಿ ಹಾಕಿದ್ದ. ಅಂಗಡಿ ಖಾಲಿ ಮಾಡಿ ಎಂದು ಬೆದರಿಕೆ ಹಾಕುತ್ತಿರುವುದಾಗಿ ಗ್ರೂಪ್‌ ನಲ್ಲಿ ಮೆಸೇಜ್ ಹಾಕಿದ್ದನು. ಈ ವಿಚಾರವಾಗಿ ಎರಡೂ ಸಮುದಾಯಗಳ ಮಧ್ಯೆ ಸೋಮವಾರ ಗಲಾಟೆ ಶುರುವಾಗಿದೆ” ಎಂದು ಎಸ್ ಪಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...