ಗಂಗಾವತಿ ಘಟನೆ: ಮೂವರು ಆರೋಪಿಗಳ ಪೈಕಿ ಇಬ್ಬರ ಬಂಧನ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನಡೆದಿದ್ದ ಇಬ್ಬರು ಮಹಿಳೆಯರ (ಇಸ್ರೇಲ್ ದೇಶದ ಒಬ್ಬರು, ಸ್ಥಳೀಯ ಒಬ್ಬರು) ಅತ್ಯಾಚಾರ ಹಾಗೂ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್ ಅರಸಿದ್ಧಿ ತಿಳಿಸಿದ್ದಾರೆ.

ಶನಿವಾರ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಸಾಯಿನಗರದ ಗೌಂಡಿ ಕೆಲಸ ಮಾಡುವ ಮಲ್ಲೇಶ್ ಅಲಿಯಾಸ್ ಹಂದಿ ಮಲ್ಲೇಶ(22) ಹಾಗೂ ಮಿಷನ್ ಕೆಲಸ ಮಾಡುವ ಚೇತನ ಸಾಯಿ (21) ಎಂಬ ಇಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದರು.

ಇನ್ನೊಬ್ಬ ಯುವಕ ತಲೆಮರೆಸಿಕೊಂಡಿದ್ದು, ಆತನ ಸುಳಿವು ಸಿಕ್ಕಿದೆ. ಶೀಘ್ರದಲ್ಲಿ ಬಂಧಿಸಲಾಗುವುದು. ಆರೋಪಿಗಳ ಪತ್ತೆಗೆ ಐಜಿ ಲೋಕೇಶ ಅವರ ಸೂಚನೆ ಮೇರೆಗೆ ಗಂಗಾವತಿ ಡಿವೈಎಸ್​ಪಿ ನೇತೃತ್ವದಲ್ಲಿ ಒಟ್ಟು ಆರು ತಂಡಗಳನ್ನು ರಚಿಸಲಾಗಿತ್ತು ಎಂದು ಎಸ್​​ಪಿ ರಾಮ್. ಎಲ್ ಅರಸಿದ್ಧಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಸಮೀಪದ ಬಾರ್ ಒಂದರಲ್ಲಿ ಮದ್ಯ ಸೇವಿಸಿದ್ದಾರೆ. ಬಳಿಕ ಸುತ್ತಾಡುವ ಉದ್ದೇಶದಿಂದ ಬೈಕ್​ನಲ್ಲಿ ತೆರಳಿದ್ದು, ಈ ಸಂದರ್ಭದಲ್ಲಿ ಇಬ್ಬರು ವಿದೇಶಿಗರು, ಇಬ್ಬರು ಹೊರ ರಾಜ್ಯದ ಪ್ರವಾಸಿಗರು ಸೇರಿದಂತೆ ಸ್ಥಳೀಯ ಒಬ್ಬ ಮಹಿಳೆಯರನ್ನೊಳಗೊಂಡ ತಂಡ ಸಿಕ್ಕಿದೆ. ನಂತರ ಅವರಿಗೆ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ. ಕೊಲೆ ಮಾಡುವ, ಸುಲಿಗೆ ಮಾಡುವ ಉದ್ದೇಶ ಈ ಆರೋಪಿಗಳಿಗೆ ಇರಲಿಲ್ಲ. ಹಣಕ್ಕೆ ಡಿಮ್ಯಾಂಡ್ ಇಟ್ಟ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ವಿಚಾರಣೆಯ ವೇಳೆ ಇಸ್ರೇಲ್ ಹಾಗೂ ಸ್ಥಳೀಯ ಯುವತಿ ಸೇರಿ ಇಬ್ಬರ ಮೇಲೂ ಅತ್ಯಾಚಾರ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಎಸ್​​​​ಪಿ ತಿಳಿಸಿದ್ದಾರೆ.​​

ಆರೋಪಿಗಳು ಇದಕ್ಕೂ ಮುನ್ನ ಯಾವುದಾದರೂ ಪ್ರಕರಣದಲ್ಲಿ ಭಾಗಿಯಾಗಿದ್ದರೆ? ಎಂಬುವುದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ಎಸ್‌ಪಿ ರಾಮ್ ಅರಸಿದ್ಧಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯ ವೇಳೆ ಹೆಚ್ಚುವರಿ ಎಸ್ಪಿ ಹೇಮಂತಕುಮಾರ್, ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...