ಗಂಗಾವತಿ | ಪೌರ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಸಿಸಿಟಿಯು ಅನಿರ್ದಿಷ್ಟಾವಧಿ ಧರಣಿ

Date:

ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ (ಎಐಸಿಸಿಟಿಯು) ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ.

“ಗಂಗಾವತಿ ನಗರಸಭೆಯಲ್ಲಿ ದುಡಿಯುತ್ತ ಮೃತಪಟ್ಟ ಪೌರಕಾರ್ಮಿಕರು ಸುಮಾರು 15 ರಿಂದ 20 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಅಸ್ತಮಾ, ಜಾಂಡೀಸ್‌ನಂತಹ ಮಾರಕ ಕಾಯಿಲೆಗಳಿಗೆ ತುತ್ತಾಗಿ ಮೃತಪಟ್ಟಿರುತ್ತಾರೆ. ಒಬ್ಬ ಕಾರ್ಮಿಕರು ಅಪಘಾತದಿಂದ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟಿರುತ್ತಾರೆ. ಈ ಕಾರ್ಮಿಕರ ಕುಟುಂಬಗಳು ಅವರ ದುಡಿಮೆಯ ಮೇಲೆ ಅವಲಂಬಿತರಾಗಿದ್ದರು. ಅವರ ಅಗಲಿಕೆಯ ನಂತರ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರದಿಂದ ಯಾವುದೇ ಪರಿಹಾರವಾಗಲೀ, ಸೌಲಭ್ಯವಾಗಲಿ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜೊತೆಗೆ ಆರ್ಥಿಕವಾಗಿ ತೀರ ಹಿಂದುಳಿದಿದ್ದಾರೆ. ತಮ್ಮ ನಗರಸಭೆಯಲ್ಲಿ ಯು.ಜಿ.ಡಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಈಗಾಗಲೇ ಸುಮಾರು ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ನಮ್ಮ ಸಂಘಟನೆಯ ಮೃತಪಟ್ಟ ಪೌರಕಾರ್ಮಿಕರ ಅವಲಂಬಿತರಿಗೆ ಮಾನವೀಯತೆ ದೃಷ್ಟಿಯಿಂದ ಕೆಲಸ ನೀಡುವಂತೆ ಹಲವಾರು ಬಾರಿ ಮೌಖಿಕವಾಗಿ, ಪತ್ರಗಳ ಮೂಲಕ ಮನವಿ ಮಾಡಲಾಗಿತ್ತು. ಆದರೆ ಮನವಿಗೆ ಸ್ಪಂದಿಸದಿರುವುದನ್ನು ಸಂಘಟನೆ ಬಲವಾಗಿ ಖಂಡಿಸುತ್ತದೆ. ಕೂಡಲೇ ಮೃತಪಟ್ಟ ಪೌರಕಾರ್ಮಿಕರ ಕುಟುಂದ ವರ್ಗದವರಿಗೆ ಮಾನವೀಯತೆ ದೃಷ್ಟಿಯಿಂದ ನಗರಸಭೆಯ ಯಾವುದಾದರೂ ವಿಭಾಗದಲ್ಲಿ ಕೆಲಸ ನೀಡಬೇಕೆಂದು” ಸಂಘಟನೆಯ ಮುಖ್ಯಸ್ಥರು ಒತ್ತಾಯಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಎರಡು ತಿಂಗಳು ಹಾಗೂ ವಾಹನ ಚಾಲಕರಿಗೆ ಕಳೆದ ನಾಲ್ಕೈದು ತಿಂಗಳಿನಿಂದ ಹಾಗೂ ಗಾರ್ಡನರ್ ಗಳಿಗೆ ಕಳೆದ 6 ತಿಂಗಳಿಂದ ವೇತನ ನೀಡಿರುವುದಿಲ್ಲ. ಹೊಸದಾಗಿ ನೇರ ನೇಮಕಾತಿ ಹೊಂದಿರುವ ಒಂಬತ್ತು ಜನ ಪೌರಕಾರ್ಮಿಕರಿಗೆ ಕಳೆದ 8 ತಿಂಗಳಿಂದ ವೇತನ ನೀಡಿರುವುದಿಲ್ಲ. 2021-22ನೇ ಸಾಲಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ತ್ಯಾಜ್ಯ ಸಾಗಿಸುವ ವಾಹನ ಚಾಲಕರು ಹಾಗೂ ಗಾರ್ಡನರ್ ಗಳಿಗೆ ಇಲ್ಲಿಯವರೆಗೂ ಪಿ.ಎಫ್ ಹಾಗೂ ಇ.ಎಸ್.ಐ ಸೌಲಭ್ಯಗಳನ್ನು ನೀಡಿರುವುದಿಲ್ಲ. ಹಾಗೂ ಕನಿಷ್ಟ ವೇತನ ಕಾಯ್ದೆಯಡಿ ವೇತನ ನೀಡಲು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೌರಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ವೆಚ್ಚವನ್ನು ಭರಿಸಲು ಎಸ್.ಎಫ್.ಸಿ ಮುಕ್ತನಿಧಿ, ನಗರ ಸ್ಥಳೀಯ ನಿಧಿಯ ಶೇ 24.10 ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಸರ್ಕಾರ ಅವಕಾಶ ಕಲ್ಪಿಸಿರುತ್ತದೆ. ಆದರೆ ಗಂಗಾವತಿ ನಗರಸಭೆಯಲ್ಲಿ ದುಡಿಯುತ್ತಿರುವ ಯಾವುದೇ ಕಾರ್ಮಿಕರಿಗೆ ಈ ಸೌಲಭ್ಯವನ್ನು ನೀಡಲಾಗುತ್ತಿಲ್ಲ. ಅದೇರೀತಿ ಸ್ಥಳೀಯ ಸಂಸ್ಥೆ/ಮಹಾನಗರ ಪಾಲಿಕೆ ನೌಕರರಿಗೆ 21 ದಿನಗಳ ವಿಶೇಷ ರಜಾ ವೇತನ ನೀಡಲು ಸರ್ಕಾರ ಆದೇಶಿಸಿದ್ದು, ಆದರೆ ಸದರಿ 21 ದಿನಗಳ ವಿಶೇಷ ರಜಾ ವೇತನವನ್ನು ಇದುವರೆಗೂ ನೀಡಿರುವುದಿಲ್ಲ. ಮೊದಲು ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವತ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಸರ್ಕಾರದ ಆದೇಶದಂತೆ ಪೌರಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನದಲ್ಲಿ ಶೇ 20 ರಷ್ಟನ್ನು ಮೀಸಲಿರಿಸಿ ಪೌರಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ವಿವಿಧ ಸೌಲಭ್ಯಕ್ಕೆ ಅನುಕೂಲ ಕಲ್ಪಿಸಿಕೊಡಬೇಕು. ಎಲ್ಲಾ ಸ್ವಚ್ಛತಾ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಹೆಲ್ತ್ ಚೆಕಪ್ ಹಾಗೂ ಆರು ತಿಂಗಳಿಗೊಮ್ಮೆ ಮಾಸ್ಟರ್ ಹೆಲ್ತ್ ಚೆಕಪ್ ಮಾಡಿಸಬೇಕು, ಸರಿಯಾದ ಸಮಯಕ್ಕೆ ಸಮವಸ್ತ್ರ ನೀಡಬೇಕು, ಸಾಧನ ಸಲಕರಣೆಗಳನ್ನು ನೀಡಬೇಕು. ಖಾಯಂ ಪೌರಕಾರ್ಮಿಕರಿಗೆ ನೀಡುವಂತೆ ಎಲ್ಲಾ ಸ್ವಚ್ಛತಾ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಕರ್ಯ ಕಲ್ಪಿಸಬೇಕು.

ಈ ಸುದ್ದಿ ಓದಿದ್ದೀರಾ?: ಗಂಗಾವತಿ | ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ; 150 ಮಕ್ಕಳು ಅಪಾಯದಿಂದ ಪಾರು 

ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕೆಂದು ಈಗಾಗಲೇ ಎರಡು ಮನವಿ ಪತ್ರಗಳನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಪೌರಕಾರ್ಮಿಕರ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದ್ದು, ಕೂಡಲೇ ಮೇಲಿನ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇಲ್ಲವಾದಲ್ಲಿ ಎಲ್ಲಾ ನೇರಪಾವತಿ ಪೌರಕಾರ್ಮಿಕರು ಸೇರಿದಂತೆ ವಾಹನ ಚಾಲಕರು, ಲೋಡರ್ಸ್, ಗಾರ್ಡನರ್‌ಗಳು ಸೇರಿ ಅನಿರ್ದಾಷ್ಟಾವಧಿ ಧರಣಿಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...