ಗಂಗಾವತಿ | ಆನೆಗೊಂದಿ ಪಂಚಾಯತಿ ಪಿಡಿಒ ಅಮಾನತು

Date:

ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಪಿಡಿಒ ಕೃಷ್ಣಪ್ಪ ಅವರು ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿರಲಿಲ್ಲ. ಗೈರು ಹಾಜರಿಗಳೇ ಹೆಚ್ಚಾಗಿದ್ದವು. ಅಲ್ಲದೆ, ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಶೌಚಾಲಯ ನಿರ್ಮಿಸಿರುವ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ಪಾವತಿಸದೆ, ವಿಳಂಬ ಮಾಡಿದ್ದರು. ಹಲವಾರು ಯೋಜನೆಗಳನ್ನು ಉತ್ತಮವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಮಾತ್ರವಲ್ಲದೆ, ಚರಂಡಿ ನೀರು, ಮಲ-ಮೂತ್ರಗಳ ತ್ಯಾಜ್ಯ ಸೇರಿದಂತೆ ನಾನಾ ರೀತಿಯ ತ್ಯಾಜ್ಯವು ನೇರವಾಗಿ ತುಂಗಭದ್ರಾ ನದಿಗೆ ಸೇರುತ್ತಿದೆ. ತ್ಯಾಜ್ಯವನ್ನು ನದಿಗೆ ಸೇರದಂತೆ ನಿರ್ವಹಿಸಿ, ನೈರ್ಮಲ್ಯ ಕಾಪಾಡುವಲ್ಲಿಯೂ ನಿರ್ಲಕ್ಷ್ಯ ಧೋರಣೆ ತಳೆದಿದ್ದರು. ಪ್ರವಾಸೋದ್ಯಮ ಇಲಾಖೆಗೆ ಕೊಠಡಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದ ಆದೇಶವನ್ನೂ ಅವರು ಪಾಲಿಸಿಲ್ಲ. ಇಂತಹ ಹಲವಾರು ರೀತಿಯಲ್ಲಿ ಕರ್ತವ್ಯಲೋಪ ಎಸಗಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲ ಆರೋಪಗಳನ್ನು ಪರಿಗಣಿಸಿರುವ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಪಾಂಡೆ ಅವರು ಪಿಡಿಒ ಕೃಷ್ಣಪ್ಪ ಅವರಿಗೆ ಕರ್ತವ್ಯಲೋಪಕ್ಕೆ ಕಾರಣ ಕೇಳಿ ಹಲವು ಬಾರಿ ನೋಟಿಸ್‌ ಜಾರಿ ಮಾಡಿದ್ದರು. ಆದರೆ, ಪಿಡಿಒ ಕೃಷ್ಣಪ್ಪ ಸರಿಯಾದ ಕಾರಣಗಳನ್ನು ನೀಡಿರಲಿಲ್ಲ. ಹೀಗಾಗಿ, ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...