ಗಂಗಾವತಿ | ಅತ್ಯಾಚಾರ ಪ್ರಕರಣ; ಪರಾರಿಯಾಗಿದ್ದ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ ಪೊಲೀಸರು

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಆತನನ್ನು ಗಂಗಾವತಿಗೆ ಕರೆ ತಂದಿದ್ದಾರೆ.

ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ(30) ಬಂಧಿತ ಆರೋಪಿ. ಘಟನೆ ‌ನಡೆದ ಮರುದಿನ ಇದೇ ಬಡಾವಣೆಯ ಮಲ್ಲೇಶ ಹಂದಿ ಹಾಗೂ ಚೇತನ್ ಸಾಯಿ ಎಂಬುವರನ್ನು ಬಂಧಿಸಲಾಗಿತ್ತು. ಶರಣಬಸವ ಗಾರೆಕೆಲಸ ಮಾಡುತ್ತಾನೆ. ಈ ಮೂವರೂ ಆರೋಪಿಗಳು ಒಂದೇ ಪ್ರದೇಶದವರಾಗಿರುವುದರಿಂದ ಸ್ನೇಹಿತರು. ಒಟ್ಟಿಗೆ ಸೇರಿ ಕೃತ್ಯ ನಡೆಸಿದ್ದಾರೆಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿಯವರನ್ನು ಸಂಪರ್ಕಿಸಿದಾಗ ಮಾತನಾಡಿ, “ಮಾರ್ಚ್‌ 6ರಂದು ನಡೆದ ಇಬ್ಬರು ಮಹಿಳೆಯರ ಅತ್ಯಾಚಾರ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆ, ಅತ್ಯಾಚಾರ ಹಾಗೂ ಕೊಲೆ ಯತ್ನ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಒಡಿಶಾದ ಬಿಬಾಸ್‌ ಎಂಬುವವರ ಶವ ಪತ್ತೆಯಾದ ಬಳಿಕ ಕೊಲೆ ಪ್ರಕರಣವನ್ನೂ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಮೂರನೇ ಆರೋಪಿಗಾಗಿ ಶೋಧ ಕಾರ್ಯ ನಡೆಸಿದ್ದು, ತಮಿಳುನಾಡಿನ ಚೆನ್ನೈನಲ್ಲಿ ಮೂರನೇ ಆರೋಪಿಯನ್ನು ಬಂಧಿಸಿ ಗಂಗಾವತಿಗೆ ಕರೆತರಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರನೆ ಆರೋಪಿ ಶರಣಬಸವ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯಸೇವನೆ ಮಾಡಿದ್ದರು ಎನ್ನುವುದು ಸಾಬೀತಾಗಿದೆ. ಈ ಮೂವರೂ ಗಾರೆಕೆಲಸ ಮಾಡುವ ಸ್ನೇಹಿತರು. ಕುಡಿಯಲು ಹಣ ಕಿತ್ತುಕೊಳ್ಳುವುದಕ್ಕಾಗಿ ಇಂತಹ ಕೃತ್ಯ ನಡೆಸಿದ್ದಾರೆ. ಆರೋಪಿಗಳ ಬಂಧನದ ಪ್ರಕ್ರಿಯೆಗಳನ್ನು ನಡೆಸಿ ಮೂವರೂ ಆರೋಪಿಗಳನ್ನು ನ್ಯಾಯಾಲಯದ ವಶಕ್ಕೆ ನೀಡಲಾಗಿದೆ. ತನಿಖಾಧಿಕಾರಿಗಳು ಮುಂದಿನ ವಿಚಾರಣೆಯನ್ನು ಕೈಗೊಂಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತ ಯುವಕನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಆಗ್ರಹ

“ಸಾಣಾಪುರ, ಆನೆಗೊಂದಿ ಭಾಗದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಕಾಡು ಪ್ರಾಣಿಗಳು ಇರುವುದುರಿಂದ ಜಾಗೃತಿ ಮೂಡಿಸುವಂತಹ ಕ್ರಮ ಕೈಗೊಳ್ಳಲಾಗಿದೆ. ವಿದೇಶಿ ಪ್ರವಾಸಿಗರು ಬಂದಲ್ಲಿ ಅರ್ಜಿ ಭರ್ತಿಮಾಡಿ ಕೊಡಬೇಕು. ಪ್ರವಾಸೋದ್ಯಮ ಇಲಾಖೆ ಈ ಕುರಿತು ಗಮನಹರಿಸಲಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...