ಗೌರಿಬಿದನೂರು | ಪರಿಹಾರದ ಹಣಕ್ಕೆ ಮಕ್ಕಳ ಜಟಾಪಟಿ; ಅನಾಥವಾಗಿ ಬಿದ್ದ ತಾಯಿ ಶವ

Date:

ತಾಯಿಯ ಶವಸಂಸ್ಕಾರ ಮಾಡಲು ಆಕೆಯ ಗಂಡು ಮಕ್ಕಳೇ ₹40 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಅಮಾನವೀಯ ಘಟನೆ ಗೌರಿಬಿದನೂರಿನ ದೊಡ್ಡಕುರುಗೋಡು ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಕಡಗತ್ತೂರಿನಲ್ಲಿ ಹೆಣ್ಣುಮಕ್ಕಳ ಮನೆಯಲ್ಲಿ ವಾಸವಿದ್ದ ಅನಂತಕ್ಕ ಎಂಬಾಕೆ ವಯೋಸಹಜ ಕಾಯಿಲೆಯಿಂದ ಬುಧವಾರ ಮೃತಪಟ್ಟಿದ್ದರು. ಸ್ವಂತ ಜಮೀನಿನಲ್ಲಿ ತಂದೆಯ ಸಮಾಧಿಯ ಪಕ್ಕ ತಾಯಿಯ ಅಂತ್ಯ ಸಂಸ್ಕಾರ ಮಾಡಲು ನಿರ್ಧರಿಸಿ ಪುತ್ರಿಯರು ದೊಡ್ಡಕುರುಗೋಡುಗೆ ತೆರಳಿದ್ದಾರೆ. ಅಲ್ಲಿಗೆ ಬಂದ ಮೃತಳ ಇಬ್ಬರು ಗಂಡು ಮಕ್ಕಳು 40 ಲಕ್ಷ ಹಣ ನೀಡಿದರೆ ಮಾತ್ರ ಜಮೀನಿನಲ್ಲಿ ಹೆಣ ಹೂಳಲು ಅವಕಾಶ ನೀಡುವುದಾಗಿ ಪಟ್ಟು ಹಿಡಿದಿದ್ದಾರೆ. ಮಕ್ಕಳ ಹಣದ ದುರಾಸೆಯಿಂದ ಇತ್ತ ತಾಯಿಯ ಶವ ಬಿಸಿಲಿನಲ್ಲಿ ಅನಾಥವಾಗಿ ಬಿದ್ದಿತ್ತು.

ಮೃತ ಅನಂಕ್ಕನ ಹೆಸರಿನಲ್ಲಿದ್ದ 2 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶಕ್ಕೆಂದು ವಶಪಡಿಸಿಕೊಂಡು ಪರಿಹಾರವಾಗಿ ಕೆಐಎಡಿಬಿ 90 ಲಕ್ಷ ನೀಡಿತ್ತು. ಇಬ್ಬರೂ ಗಂಡು ಮಕ್ಕಳು ಸಮನಾಗಿ ಹಂಚಿಕೊಂಡಿದ್ದರು. ಬಳಿಕ ಕೋರ್ಟ್‌ ಮೆಟ್ಟಿಲೇರಿ 4 ಜನ ಪುತ್ರಿಯರೂ ಅದರಲ್ಲಿ ಸಮಾನ ಹಣ ಪಡೆದರು. ಅದನ್ನು ವಾಪಾಸ್‌ ಕೊಡುವಂತೆ ಈಗ ಕ್ಯಾತೆ ತೆಗೆದಿದ್ದಾರೆ ಎಂದು ವೃದ್ಧೆಯ ಮೊಮ್ಮಗಳು ಶಾಂತಮ್ಮ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಗೌರಿಬಿದನೂರು | ಮೂವರು ಮನೆಗಳ್ಳರ ಬಂಧನ

ಕೊನೆಗೆ ವಿಷಯ ತಹಶೀಲ್ದಾರ್‌ ಮಹೇಶ್‌ ಅವರಿಗೂ ತಲುಪಿದೆ. ಸ್ಥಳಕ್ಕೆ ಭೇಟಿ ನೀಡಿದ ಅವರು ಎಲ್ಲಾ ಮಕ್ಕಳೊಂದಿಗೆ ಮಾತುಕತೆ ನಡೆಸಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...