ಪ್ರೀತಿ ವಿಚಾರಕ್ಕೆ ಗವಿಸಿದ್ದಪ್ಪ ಹತ್ಯೆ ಪ್ರಕರಣ; ವಿಷದ ಬಾಟಲಿ ಮುಂದಿಟ್ಟುಕೊಂಡು ಬಾಲಕಿ ತಾಯಿ ಪ್ರತಿಭಟನೆ

Date:

ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ನಡೆದ ಗವಿಸಿದ್ದಪ್ಪನ ಭೀಕರ ಹತ್ಯೆ ಪ್ರಕರಣವು ಇದೀಗ ಇನ್ನೊಂದು ತಿರುವು ಪಡೆಯುತ್ತಿದೆ.

ಹತ್ಯೆಯಾದ ಗವಿಸಿದ್ದಪ್ಪ ಹಾಗೂ ಆರೋಪೊ ಸಾದಿಕ್‌ ಇಬ್ಬರೂ ಒಬ್ಬಳೇ ಬಾಲಕಿಯನ್ನು ಪ್ರೀತಿಸುತ್ತಿದ್ದರು. ಇದೇ ಕಾರಣಕ್ಕೆ ಹತ್ಯೆಯಾದವ ಹಾಗೂ ಆರೋಪಿ ನಡುವೆ ವೈಷಮ್ಯ ಬೆಳೆದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಅದರಂತೆ ಪ್ರಕರಣಕ್ಕೆ ಕಾರಣಳಾದ ಬಾಲಕಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ರಾಜಕೀಯ ನಾಯಕರೂ ಸೇರಿ ಹಲವರು ಒತ್ತಾಯಿಸುತ್ತಿದ್ದರು. ಇದೀಗ ಬಾಲಕಿಯ ತಾಯಿ ಹಾಗೂ ಸಹೋದರಿ ವಿಷದ ಬಾಟಲಿಯನ್ನು ಮುಂದಿಟ್ಟುಕೊಂಡು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಾಲಕಿಯ ತಾಯಿ ಹಸೀನಾ ಹಾಗೂ ಸಹೋದರಿ ಆಯೆಷಾ ಪ್ರತಿಭಟನೆ ನಡೆಸುತ್ತಿದ್ದು, ಈ ಸಂಬಂಧ ಮನವಿ ಪತ್ರವೊಂದನ್ನು ಸಿದ್ಧಪಡಿಸಿ ಜಿಲ್ಲಾಧಿಕಾರಿಗೆ ನೀಡಲು ಮುಂದಾಗಿದ್ದಾರೆ. ಹತ್ಯೆಯಾದ ಗವಿಸಿದ್ದಪ್ಪ ತನ್ನ ಅಪ್ರಾಪ್ತ ಮಗಳ ಮೇಲೆ ಎರಡು ವರ್ಷಗಳ ಕಾಲ ಅತ್ಯಾಚಾರ ಎಸಗಿದ್ದಾನೆ. ಅದರ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿ ನಿರಂತರ ಅತ್ಯಾಚಾರ ಎಸಗಿರುತ್ತಾನೆ. ಇದಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಬೆಂಬಲ ಕೊಟ್ಟ ಎಲ್ಲರನ್ನೂ ಶಿಕ್ಷೆಗೆ ಒಳಪಡಿಸಬೇಕು. ಏನೂ ಅರಿಯದ ಚಿಕ್ಕ ಹುಡುಗಿಯನ್ನು ಪುಸಲಾಯಿಸಿ ಕೃತ್ಯ ಎಸಗಲಾಗಿದೆ. ನನ್ನ ಮಗಳಿಗೆ ಆದ ಅನ್ಯಾಯಕ್ಕೆ ನ್ಯಾಯ ಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ವರು ಯುವಕರು ನಗರದ ನಿವಾಸಿ ಗವಿಸಿದ್ಫಪ್ಪ ನಾಯ್ಕ್ ಎಂಬುವನನ್ನು ನಿರ್ಮಿತಿ ಕೇಂದ್ರ ನಗರದಲ್ಲಿನ ಬಹದ್ದೂರ್ ಬಂಡಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ್ದರು. ಬಳಿಕ ಪ್ರಮುಖ ಆರೋಪಿ ಸಾದಿಕ್‌ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಕೊಪ್ಪಳ | ಗವಿಸಿದ್ದಪ್ಪ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಎಸ್‌ಯು‌ಎಮ್ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...