ಬೆಂಗಳೂರು | ಈಜುಕೊಳದಲ್ಲಿ ಬಾಲಕಿ ಸಾವು ಪ್ರಕರಣ; 7 ಮಂದಿ ಬಂಧನ

Date:

ಒಂದೂವರೆ ತಿಂಗಳ ಹಿಂದೆ ಅಪಾರ್ಟ್‌ಮೆಂಟ್‌ ಒಂದರ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದ ಘಟನೆ ಸಂಬಂಧ ಅಪಾರ್ಟ್‌ಮೆಂಟ್‌ ನಿವಾಸಿಗಳ ಸಂಘದ ಅಧ್ಯಕ್ಷ ಸೇರಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

2023ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ವರ್ತುರು ಬಳಿಯ ಪ್ರೆಸ್ಟೀಜ್ ಲೇಕ್ ಸೈಡ್ ಹೆಬಿಬಾಬ್ ಅಪಾರ್ಟ್‌ಮೆಂಟ್‌ನ ಈಜುಕೊಳದಲ್ಲಿ ಆಟವಾಡುವಾಗ 10 ವರ್ಷದ ಬಾಲಕಿ ಮಾನ್ಯ ವಿದ್ಯುತ್‌ ಪ್ರವಹದಿಂದ ಸಾವನ್ನಪ್ಪಿದ್ದರು. ಈಜುಕೊಳದಲ್ಲಿ ವಿದ್ಯುತ್‌ ಪ್ರವಹದ ಬಗ್ಗೆ ಮಾಹಿತಿ ನೀಡಿದರೂ ಅಪಾರ್ಟ್‌ಮೆಂಟ್‌ ನಿರ್ವಹಣೆ ಜವಬ್ದಾರಿ ಹೊತ್ತಿರುವ ಸಂಘದ ಅಧ್ಯಕ್ಷ ಮತ್ತು ಎಲೆಕ್ಟ್ರಿಶಿಯನ್ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದ ಪರಿಣಾಮ ದುರ್ಘಟನೆ ನಡೆದಿದೆ ಎಂದು ಆರೋಪಿಸಲಾಗಿತ್ತು.

ಘಟನೆ ಸಂಬಂಧ ಮೃತ ಬಾಲಕಿಯ ತಂದೆ ರಾಜೇಶ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನ್ನ ಮಗಳ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಅಪಾರ್ಟ್‌ಮೆಂಟ್‌ ನಿವಾಸಿಗಳ ಸಂಘದ ಅಧ್ಯಕ್ಷ ದೇಬಸಿಸ್ ಸಿನ್ಹಾ, ಜಾವೇದಿ ಸಫೀಕ್ ರಾಂ, ಸಂತೋಷ್ ಮಹಾರಾಣ, ಬಿಕಾಸ್ ಕುಮಾರ್ ಫೋರಿಡಾ, ಭಕ್ತ ಚರಣ್ ಪ್ರಧಾನ್, ಸುರೇಶ್ ಹಾಗೂ ಗೋವಿಂದ್ ಮಂಡಲ್ ಎಂಬವರನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...