ದಾವಣಗೆರೆ | ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಿ; ಬಿ ವಾಮದೇವಪ್ಪ ಸಲಹೆ

Date:

ಹೆಣ್ಣುಮಕ್ಕಳು ವಿದ್ಯಾಭ್ಯಾಸದ ನಂತರದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಕೈಕಟ್ಟಿ ಕೂರದೆ ಸ್ವ–ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಹಾಕಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ ವಾಮದೇವಪ್ಪ ಸಲಹೆ ನೀಡಿದರು.

ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಪಠ್ಯಪೂರಕ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಭಾಗವಹಿಸಿ ಅವರು ಮಾತನಾಡಿದರು.

ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಉತ್ತಮ ಸಾಧನೆ ತೋರಿರುವುದು ಸಂತಸದ ವಿಷಯ. ಎಲ್ಲರಿಗೂ ಬುದ್ಧಿಶಕ್ತಿ ಇರುತ್ತದೆ. ಅದನ್ನು ಕೆಲವರು ಸರಿಯಾಗಿ ಉಪಯೋಗಿಸಿಕೊಳ್ಳುತ್ತಾರೆ. ಮತ್ತೆ ಕೆಲವರು ಉಪಯೋಗಿಸಿಕೊಳ್ಳುವುದಿಲ್ಲ. ಬಡವನಾಗಿ ಹುಟ್ಟಿದರೂ ಬಡವನಾಗಿಯೇ ಸಾಯುವುದು ತಪ್ಪು. ಇರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಹೆಚ್ಚಿನ ಸಾಧನೆ ಮಾಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾರೋಪ ಭಾಷಣ ಮಾಡಿದ ಪತ್ರಕರ್ತೆ ಎಚ್‌ ಅನಿತಾ, ವೈದ್ಯಕೀಯ, ಎಂಜಿನಿಯರಿಂಗ್‌ ಕೋರ್ಸ್‌ಗಳೇ ಶ್ರೇಷ್ಠವಲ್ಲ. ಬಿಎ, ಬಿಎಸ್ಸಿ, ಬಿಕಾಂ ಓದುವವರ ಸೇವೆಯೂ ಸಮಾಜಕ್ಕೆ ಅಗತ್ಯವಿದೆ. ಕೀಳರಿಮೆಯನ್ನು ತೊರೆದು ಹೆಚ್ಚಿನ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಉನ್ನತ ಕೊಡುಗೆ ನೀಡಿ ಎಂದು ಸಲಹೆ ನೀಡಿದರು.

ಮಹಿಳೆಯರು ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದರೂ, ದೌರ್ಜನ್ಯಗಳಿಂದ ಸಂಪೂರ್ಣ ಮುಕ್ತಳಾಗಿಲ್ಲ. ಹೆಣ್ಣುಮಕ್ಕಳ ಮೇಲಿನ ಕೆಲವು ಅಪರಾಧ ಪ್ರಕರಣಗಳು ಜನರನ್ನು ಬೆಚ್ಚಿಬೀಳಿಸುವಂತಿವೆ. ಪಾಲಕರು ಹೆಣ್ಣುಮಕ್ಕಳಿಗೆ ಮಾತ್ರವೇ ನಿರ್ಬಂಧಗಳನ್ನು ಹೇರದೆ ಗಂಡುಮಕ್ಕಳಿಗೂ ಲಿಂಗ ಸೂಕ್ಷ್ಮತೆ ಕುರಿತು ಅರಿವು ಮೂಡಿಸುವ, ಹೆಣ್ಣುಮಕ್ಕಳನ್ನು ಗೌರವಿಸುವ ಮನೋಭಾವ ಬೆಳೆಸುವ ಅಗತ್ಯವಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪಾಲಿಕೆ ಮೇಯರ್ ಹುದ್ದೆ ಮತ್ತೆ ಬಿಜೆಪಿ ಪಾಲು

ಕಾರ್ಯಕ್ರಮದಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯೆ ವೀಣಾ ನಂಜಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಕಾರ್ಯದರ್ಶಿ ದಿಳ್ಯೆಪ್ಪ, ಕಾಲೇಜು ಪ್ರಾಂಶುಪಾಲ ಪ್ರೊ. ಎ ಎಸ್‌ ಶೈಲಜಾ, ಕಾಲೇಜಿನ ಐಕ್ಯುಎಸಿ ಸಂಚಾಲಕ ಭೀಮಪ್ಪ ಪಿ, ಕಚೇರಿ ಅಧೀಕ್ಷಕ ಟಿ ಶೇಷಪ್ಪ, ಉಪನ್ಯಾಸಕಿ ಪೂರ್ಣಿಮಾ, ಸಿದ್ದಲಿಂಗಮ್ಮ ಇದ್ದರು.

ಇದೇ ಸಂದರ್ಭದಲ್ಲಿ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಬಿ. ಎ,. (ಕನ್ನಡ ಐಚ್ಛಿಕ) ವಿಭಾಗದಲ್ಲಿ 8ನೇ ರ‍್ಯಾಂಕ್‌ ಪಡೆದ ಕಾಲೇಜಿನ ಕಾವ್ಯಾ ಎಸ್‌ ಎ ಅವರನ್ನು ಸನ್ಮಾನಿಸಲಾಯಿತು. ಕಾಲೇಜು ವತಿಯಿಂದ, ಪ್ರಾಂಶುಪಾಲರಾದ ಪ್ರೊ. ಎ ಎಸ್‌ ಶೈಲಜಾ ಮತ್ತು ಕಸಾಪ ಅಧ್ಯಕ್ಷ ಬಿ ವಾಮದೇವಪ್ಪ, ಕನ್ನಡ ವಿಭಾಗದ ಮುಖ್ಯಸ್ಥರಾದ ಮಂಜಣ್ಣ ಹಾಗೂ ಸಹ ಪ್ರಾಧ್ಯಾಪಕಿ ಕಾವ್ಯಶ್ರೀ, ಪಾಲಿಕೆ ಸದಸ್ಯೆ ಗೀತಾ ದಿಳ್ಯೆಪ್ಪ ವೈಯಕ್ತಿಕವಾಗಿ ಪ್ರೋತ್ಸಾಹಧನವನ್ನು ವಿದ್ಯಾರ್ಥಿನಿ ಕಾವ್ಯಾ ಅವರಿಗೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...