ಕೊಡಗು | ಕಟ್ಟಡ ಕುಸಿತ; ಎಂಟು ಮಂದಿ ಪ್ರಾಣಾಪಾಯದಿಂದ ಪಾರು

Date:

ಎರಡು ಹಂತಸ್ಥಿನ ಕಟ್ಟಡ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಕಟ್ಟಡದಲ್ಲಿದ್ದ ಎಂಟು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ನಡೆದಿದೆ. ಅದಾಗ್ಯೂ, ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಲೂಕಿನ ಗೋಣಿಕೊಪ್ಪಲಿನಲ್ಲಿ ಗುರುವಾರ ಸಂಜೆ ಘಟನೆ ನಡೆಸಿದೆ. ಕಟ್ಟಡವು 75 ವರ್ಷಕ್ಕೂ ಹಳೆಯದ್ದಾಗಿತ್ತು ಎಂದು ಹೇಳಲಾಗಿದೆ. ಕಟ್ಟಡದ ನೆಲ ಮಹಡಿಯಲ್ಲಿ ಬಿರಿಯಾನಿ ಹೋಟೆಲ್ ಹಾಗೂ ಮಾಂಸದ ಅಂಗಡಿ ಇತ್ತು. ಅವುಗಳಲ್ಲಿ ಕೆಲಸ ಮಾಡುತ್ತಿದ್ದ ಎಂಟು ಮಂದಿ ಜೋರು ಶಬ್ದ ಕೇಳಿ, ದೌಡಾಯಿಸಿ ಹೊರಬಂದಿದ್ದಾರೆ. ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವಶೇಷಗಳನ್ನು ತೆರವು ತೆರವು ಮಾಡಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಓರ್ವನನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...