ಕೊಡಗು | ಮೋದಿಯವರ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯಲ್ಲ: ಸಚಿವ ಬೋಸರಾಜು

Date:

ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೊಟ್ಟ ಮಾತಿನಂತೆ ನಡೆಯುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌ ಬೋಸರಾಜು ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಪರೇಷನ್ ಹಸ್ತ ಪದ ಬಳಕೆ ನಾವು ಮಾಡಲ್ಲ. ಆಪರೇಷನ್ ಎಂಬ ಕೆಟ್ಟ ಶಬ್ದ ತಂದಿದ್ದು ಬಿಜೆಪಿ. ಹಲವು ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿದೆ. ಪಕ್ಷ ಸೇರ್ಪಡೆಗೆ ಹಲವು ಹೊಸ ಹೊಸ ಮುಖಗಳ ಹೆಸರುಗಳು ಬರುತ್ತಿದೆ. ಕಲ್ಯಾಣ ಕರ್ನಾಟಕದಲ್ಲೂ ಹಲವರು ನನ್ನ ಸಂಪರ್ಕದಲ್ಲಿದ್ದಾರೆ. ಇಂತಿಷ್ಟೇ ಜನ ಬರುತ್ತಾರೆಂದು ಹೇಳಲಾಗದು. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆದಿದೆ. ಇಂದಿಗೂ ಬಿಜೆಪಿ ಪರಿಸ್ಥಿತಿ ಬದಲಾಗಿಲ್ಲ” ಎಂದು ವ್ಯಂಗ್ಯವಾಡಿದರು.

“ಅನೇಕ ಜಿಲ್ಲೆಗಳಿಂದ ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರು ಕಾಂಗ್ರೆಸ್ ಸೇರ್ಪಡೆಯಾಗಲ್ಲಿದ್ದಾರೆ. ಅನೇಕ ನಾಯಕರು ಈಗಾಗಲೇ ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ, ನಮ್ಮಲ್ಲಿ ಯಾವುದೇ ಆಪರೇಷನ್ ಹಸ್ತ ಎಂಬೂದು ಇಲ್ಲ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಅವರಾಗಿಯೇ ಬರುತ್ತಾರೆ. ಅಂತವರನ್ನು ಪಕ್ಷ ಬರಮಾಡಿಕೊಳ್ಳಲ್ಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾನಿಗೊಳಗದ ಜನರಲ್ ತಿಮ್ಮಯ್ಯ ಪ್ರತಿಮೆ ವೀಕ್ಷಣೆ

ಕಳೆದ ಸೋಮವಾರ ಸರ್ಕಾರಿ ಬಸ್ ಡಿಕ್ಕಿಯಾಗಿ ಹಾನಿಗೆ ಒಳಗಾಗಿದ್ದ 50 ವರ್ಷದ ಜನರಲ್‌ ತಿಮ್ಮಯ್ಯ ಪ್ರತಿಮೆಯನ್ನು ಬೋಸರಾಜ್‌ ಪರಿಶೀಲಿಸಿದರು. ಪ್ರತಿನೆಯನ್ನೆ ದುರಸ್ತಿ ಮಾಡಿ ಪುನರ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿರಿಯ ರಾಜಕಾರಣಿ ಎಂ.ಸಿ ನಾಣಯ್ಯ ಅವರ ಪರಿಶ್ರಮದಿಂದ 1973ರಲ್ಲಿ ಈ ಪ್ರತಿಮೆ ನಿರ್ಮಿಸಲಾಗಿತ್ತು. ಅದನ್ನು ಉಳಿಸಿಕೊಳ್ಳಬೇಕು ಎಂದು ಸಚಿವರಿಗೆ ಮಡಿಕೇರಿ ಶಾಸಕ ಮಂತರ್ ಗೌಡ ಮನವಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...