ಮೈಸೂರು |ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಮೊದಲ ಆದ್ಯತೆ ನೀಡಿ: ಬಡಗಲಪುರ ನಾಗೇಂದ್ರ

Date:

ಮೈಸೂರಿನ ಜಲದರ್ಶಿನಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಈ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಮೊದಲ ಆದ್ಯತೆ ನೀಡುವಂತೆ ಒತ್ತಾಯಿಸಿದರು.

ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದ್ದು. ಕೃಷಿಕರು ಅನಿಶ್ಚಿತತೆ ಮತ್ತು ಅಭದ್ರತೆಯಿಂದ ಜೀವನ ಸಾಗಿಸುತ್ತಿದ್ದಾರೆ. ಕೃಷಿಕರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವ ದೃಷ್ಟಿಯಿಂದ ಈ ಸಾಲಿನ ಬಜೆಟ್‌ನಲ್ಲಿ ಕೃಷಿ ಮತ್ತು ಕೃಷಿಕರಿಗೆ ಮೊದಲ ಆಧ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಮೈಸೂರು ಜಿಲ್ಲೆಯ ನೀರಾವರಿ ಯೋಜನೆಗಳು ಮತ್ತು ಹೊಸ ತಾಲ್ಲೂಕುಗಳಾದ ಸರಗೂರು ಹಾಗೂ ಸಾಲಿಗ್ರಾಮ ತಾಲ್ಲೂಕು ಕೇಂದ್ರಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ನೀಡಬೇಕು. ದಿನಾಂಕ-17-02-2026ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವ ರೈತ ಮುಖಂಡರ ಸಮಾಲೋಚನಾ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖ ಪದಾಧಿಕಾರಿಗಳು ಪಾಲ್ಗೊಂಡು ಕೃಷಿ ಮತ್ತು ಗ್ರಾಮೀಣ ಕ್ಷೇತ್ರಕ್ಕೆ ಆಧ್ಯತೆ ನೀಡುವ ಸಂಬಂಧ 19 ಅಂಶದ ಹಕ್ಕೊತ್ತಾಯ ಹಾಗೂ 13 ವಿಶೇಷ ಮತ್ತು ನಿರ್ಧಿಷ್ಟ ಕಾರ್ಯಕ್ರಮವನ್ನು ಈ ಆಯವ್ಯಯದಲ್ಲಿ ಘೋಷಿಸುವಂತೆ ಲಿಖಿತ ಹಕ್ಕೊತ್ತಾಯ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಹೆಚ್.ಡಿ.ಕೋಟೆ, ನಂಜನಗೂಡು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮತ್ತು ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ ವರ್ಜಿನೀಯ ತಂಬಾಕು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ತಂಬಾಕು ಬೆಳೆಯು ಹೆಚ್ಚಿನ ಉದ್ಯೋಗ ಸೃಷ್ಟಿಗೆ ಕಾರಣವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೆಚ್ಚಿನ ತೆರಿಗೆಯನ್ನು ಭರಿಸುತ್ತಿವೆ. ಆದರೆ, ತಂಬಾಕು ಬೆಲೆ ಕುಸಿತವಾಗಿದ್ದು. ರೈತರು ಕಂಗಾಲಾಗಿದ್ದಾರೆ. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರಂತರವಾಗಿ ಒತ್ತಾಯ ಮಾಡುತ್ತಾ ಬಂದಿದ್ದಾಗಿಯೂ ನಿರ್ಲಕ್ಷ್ಯ ಮಾಡುತ್ತಿವೆ. ತಂಬಾಕು ಬೆಳೆಗಾರರ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕೆಂದು ಆಗ್ರಹಿಸಿದರು.

ಮೈಸೂರು-ಚಾಮರಾಜನಗರ ಜಿಲ್ಲೆಯಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷಗಳಿಂದ ಸಾವು-ನೋವುಗಳು ಆಗುತ್ತಲೆ ಇವೆ. ಸರಣಿ ಹುಲಿ ದಾಳಿ ನಡೆದ ನಂತರ ಸಂಘದ ಒತ್ತಾಯದ ಮೇರೆಗೆ ಸಫಾರಿಯನ್ನು ನಿಲ್ಲಿಸಲಾಗಿತ್ತು. ಸಫಾರಿ ಸ್ಥಗಿತಗೊಳಿಸಿದ ನಂತರ ವನ್ಯಜೀವಿ ಮತ್ತು ಮಾನವ ಸಂಘರ್ಷ ಕಡಿಮೆಯಾಗಿದೆ. ಇದನ್ನು ಅರಣ್ಯ ಮಂತ್ರಿಯವರೇ ಸ್ವತಃ ಒಪ್ಪಿ ಹೇಳಿಕೆ ನೀಡಿರುತ್ತಾರೆ. ಆದರೆ, ಸರ್ಕಾರ ಒತ್ತಡಕ್ಕೆ ಮಣಿದು ಮತ್ತೆ ಸಫಾರಿಯನ್ನು ಪ್ರಾರಂಭ ಮಾಡಲು ಹೊರಟಿರುವುದು ಖಂಡನೀಯ. ಯಾವುದೇ ಕಾರಣಕ್ಕೂ ಸಫಾರಿಯನ್ನು ಪುನರಾರಂಭ ಮಾಡಬಾರದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ಡೋಪ್ಲಿನ್ ಕಾಂಪ್ಲೆಕ್ಸ್’ ತೆರವು ಪ್ರಕರಣ; ನಾವು ಮಾಲೀಕರೇ ಹೊರತು ಬಾಡಿಗೆದಾರರಲ್ಲ

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ತಾಲ್ಲೂಕು ಕಾರ್ಯದರ್ಶಿ ಮಂಟಕಳ್ಳಿ ಮಹೇಶ್, ಜಿಲ್ಲಾ ಕಾರ್ಯದರ್ಶಿ ನಾಗನಹಳ್ಳಿ ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಹಕ್ಕೊತ್ತಾಯಗಳು:

  • ಕೃಷಿಕರು ಯಾವಾಗಲು ಅನಿಸ್ಥಿತೆ ಎದುರಿಸುತ್ತಾ ಅಭದ್ರತೆಗೆ ಒಳಗಾಗಿದ್ದಾರೆ. ಈ ಸಾಲಿನ ಆಯವ್ಯಯ ಕೃಷಿಕರನ್ನು ಮೇಲೆತ್ತುವ ದೃಷ್ಟಿಯಿಂದ ಕೃಷಿವಲಯಕ್ಕೆ ಪ್ರಥಮ ಆಧ್ಯತೆ ನೀಡಿ ದೂರದೃಷ್ಠಿಯ ಕಾರ್ಯಕ್ರಮಗಳನ್ನು ರೂಪಿಸಬೇಕು.
  • ಕೃಷಿ ಉತ್ಪನ್ನಗಳ ಉತ್ಪಾದನೋತ್ತರ ಮೌಲ್ಯವರ್ದನೆಯ ಮೇಳವನ್ನು ಮಾಡಿರುವುದು ಸ್ವಾಗತಾರ್ಹ. ಸಂಬಂಧ ದೂರದೃಷ್ಟಿಯ ಕಾರ್ಯಕ್ರಮಗಳನ್ನು ರೂಪಿಸಿ ಗ್ರಾಮೀಣ ಯುವಕರು- ಯುವತಿಯರು ಇದರಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ದೃಷ್ಟಿಯಿಂದ ಅಗತ್ಯ ಕೌಶಲ್ಯ ತರಬೇತಿ, ಹಣಕಾಸು ನೆರವು, ಮಾರುಕಟ್ಟೆ ಸೃಷ್ಟಿಸಿಕೊಡುವ ಮೂಲಕ ರೈತ ಕುಟುಂಬದ ಆದಾಯ ವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ನಿರ್ದಿಷ್ಟ ಕಾರ್ಯಕ್ರಮಗಳನ್ನು ರೂಪಿಸಬೇಕು.
  • ರೈತ ಯುವಕರು ಮದುವೆ ಆಗಲು ವಧು ಸಿಗದೇ ಇರುವುದು ಒಂದು ಸಾಮಾಜಿಕ ಪಿಡುಗಾಗಿರುವುದು ವಿಷಾದನೀಯ. ಈ ಸಮಸ್ಯೆಗೆ ಕಾರಣಗಳನ್ನು ಕಂಡುಹಿಡಿಯಬೇಕು. ರೈತ ಯುವಕರನ್ನು ವಿವಾಹವಾಗುವ ಹೆಣ್ಣುಮಕ್ಕಳಿಗೆ ಕನಿಷ್ಠ ₹10 ಲಕ್ಷ ಠೇವಣಿ, ಕೃಷಿ ಅಥವಾ ಕೃಷಿಪೂರಕ ಸಣ್ಣ ಉದ್ದಿಮೆಗಳನ್ನು ಸ್ಥಾಪಿಸಲು ಸರ್ಕಾರವೇ ಭದ್ರತೆ ನೀಡಿ ಬಡ್ಡಿರಹಿತ ಸಾಲ ಒದಗಿಸಿ ಉತ್ತೇಜನ ನೀಡಬೇಕು.
  • ವನ್ಯಜೀವಿ-ಮಾನವ ಸಂಘರ್ಷ ಹೆಚ್ಚುತ್ತಲೇ ಇದ್ದು, ಇದನ್ನು ನಿಯಂತ್ರಿಸಲು ಈ ಆಯವ್ಯಯದಲ್ಲಿ ಹೆಚ್ಚು ಆರ್ಥಿಕ ಅನುದಾನ ನೀಡಬೇಕು. ವನ್ಯಪ್ರಾಣಿಗಳ ಹಾವಳಿಗೆ ತುತ್ತಾಗಿ ಮಡಿದವರ ಕುಟುಂಬಕ್ಕೆ ಹಾಲಿ ಇರುವ ₹20 ಲಕ್ಷ ರೂಪಾಯಿ ಪರಿಹಾರ ಧನವನ್ನು ₹50 ಲಕ್ಷಕ್ಕೆ ಏರಿಸಬೇಕು ಮತ್ತು ಆ ಕುಟುಂಬಕ್ಕೆ ಒಂದು ಖಾಯಂ ಉದ್ಯೋಗ ನೀಡಬೇಕು, ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು ಸಂಪೂರ್ಣ ಸರ್ಕಾರವೇ ಭರಿಸಬೇಕು. ಮೃತರ ಕುಟುಂಬದ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು.
  • ಕೃಷಿಕರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದಾಗ ಆಗುವ ವಿದ್ಯುತ್ ಅವಗಡ, ಯಂತ್ರಗಳಿಂದಾಗುವ ಅನಾಹುತ, ವಿಷಜಂತುಗಳಿಂದಾಗುವ ಅನಾಹುತಗಳಿಗೆ ಈಗ ನೀಡುತ್ತಿರುವ ಪರಿಹಾರ ಕಡಿಮೆ ಇದ್ದು, ಇದನ್ನು ಹೆಚ್ಚಿಸಬೇಕು.
  • ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರೇ ಭರಿಸಲು ಸರ್ಕಾರ ನಿಗದಿ ಮಾಡಿರುವ ಶುಲ್ಕ ಅತ್ಯಂತ ದುಬಾರಿಯಾಗಿದ್ದು, ಹಳೇ ಪದ್ದತಿಯನ್ನು ಮುಂದುವರಿಸಬೇಕು. ಕನಿಷ್ಠ ಹಗಲು 12 ಗಂಟೆ 3 ಪೇಸ್ ವಿದ್ಯುತ್ ನೀಡಲು ತೀರ್ಮಾನಿಸಬೇಕು. ಸೌರಶಕ್ತಿ ವಿದ್ಯುತ್ ಸಂಪರ್ಕವನ್ನು ಮತ್ತಷ್ಟು ವ್ಯಾಪಕಗೊಳಿಸಬೇಕು. ತೋಟದ ಮನೆಗಳಿಗೂ ಗೃಹ ಬಳಕೆಗೆ ನಿರಂತರ ವಿದ್ಯುತ್ ಸಂಪರ್ಕ ಒದಗಿಸಬೇಕು, ವಿದ್ಯುತ್ ಬಿಲ್‌ಗೆ ಸಂಬಂಧಿಸಿದಂತೆ ಎಲ್ಲರಿಗೂ ಅನ್ವಯವಾಗುವ ನಿಯಮಗಳನ್ನು ಇವರಿಗೂ ಅನ್ವಯಿಸಬೇಕು. ರೈತ ನಾಯಕ ಪ್ರೊ: ಎಂ.ಡಿ.ನಂಜುಂಡಸ್ವಾಮಿಯವರ ಕರೆಯ ಮೇರೆಗೆ ಕರ ನೀರಾಕರಣ ಚಳುವಳಿಯಲ್ಲಿ ಗೃಹ ವಿದ್ಯುತ್ ಬಿಲ್ಲನ್ನು ಉಳಿಸಿಕೊಂಡಿರುವ ಕುಟುಂಬಗಳ ಬಾಕಿಯನ್ನು ಸಂಪೂರ್ಣ ಮನ್ನಾ ಮಾಡಬೇಕು. ( 2014ನೇ ಸಾಲಿನಲ್ಲಿ ತಮ್ಮ ನೇತೃತ್ವದ ಸರ್ಕಾರ ಇದ್ದಾಗ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದೆ)
  • ಕೃಷಿ ಉಪಕರಣಗಳ ಮೇಲೆ ಶೇ.18 ಜಿ.ಎಸ್.ಟಿ ವಿಧಿಸುತ್ತಿರುವುದು ದುಬಾರಿ ಆಗಿದ್ದು, ರಾಜ್ಯ ಸರ್ಕಾರ ತನ್ನ ಪಾಲನ್ನು ಕನಿಷ್ಠ ದರಕ್ಕೆ ಇಳಿಸಬೇಕು ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲು ಒತ್ತಡ ತರಬೇಕು.
  • ಸರ್ವೆ ವೆಚ್ಚವನ್ನು ಕಡಿತಗೊಳಿಸಬೇಕು. ಹದ್ದುಬಸ್ತು ಪೋಡಿ ದುರಸ್ತಿ ಸ್ಕೆಚ್. ಹೌಸಿಂಗ್ ಇ-ಸ್ವತ್ತು ನಕ್ಷೆ ಸರ್ಕಾರಿ ಸೇವೆಯಾಗಿದ್ದು, ಅದಕ್ಕೆ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಶುಲ್ಕವನ್ನು ಮೊದಲಿದ್ದ ದರಕ್ಕೆ ಇಳಿಸಬೇಕು.
  • ತೊಗರಿ ಬೆಳೆಗಾರರ ರಕ್ಷಣೆಗೆ ಮುಂದಾಗಬೇಕು. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ತೊಗರಿಯನ್ನು ಹೇರಳವಾಗಿ ಬೆಳೆಯುತ್ತಿದ್ದು, ಅತಿ ಮಳೆಯಿಂದಾಗಿ ರೋಗಕ್ಕೆ ತುತ್ತಾಗಿ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಈ ಪೂರ್ಣ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಮತ್ತು ತೊಗರಿಗೆ ಕೇಂದ್ರ ಘೋಷಣೆ ಮಾಡಿರುವ ಕನಿಷ್ಠ ಬೆಂಬಲ ಬೆಲೆಗೆ ರಾಜ್ಯ ಸರ್ಕಾರ ಹೆಚ್ಚುವರಿ ಸಹಾಯ ಧನವನ್ನು ನೀಡಿ ನೇರ ಖರೀದಿ ಮಾಡಬೇಕು.
  • ರಾಜ್ಯದ ಎಲ್ಲಾ ನೀರಾವರಿ ಜಲಾಶಯಗಳಿಂದ ಪೋಲಾಗುತ್ತಿರುವ ನೀರನ್ನು ಹಿಡಿದಿಟ್ಟು ಸದ್ಬಳಕೆ ಮಾಡಿಕೊಳ್ಳಲು ಈ ಆಯವ್ಯಯದಲ್ಲಿ ಪ್ರಮುಖ ಅಂಶವಾಗಿ ಪರಿಗಣಿಸಬೇಕು.ಮತ್ತು ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಸಣ್ಣ ನೀರಾವರಿ ಇಲಾಖೆಗೆ ಹೆಚ್ಚು ಅನುದಾನವನ್ನು ಒದಗಿಸಬೇಕು.
  • ಕೃಷ್ಣಾ ಸೇರಿದಂತೆ ರಾಜ್ಯದ ಉಳಿದ ಎಲ್ಲಾ ನೀರಾವರಿ ಯೋಜನೆಗಳನ್ನು ಆಧ್ಯತೆ ಮೇರೆಗೆ ಕೈಗೆತ್ತಿಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಭದ್ರ ಮೇಲ್ಕಂಡೆ ಯೋಜನೆಗೆ ಅಗತ್ಯ ಇರುವ ಅನುದಾನವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕು, ಅಲ್ಲದೆ ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯನ್ನು ನೀಡಬೇಕು. ಕೃಷ್ಣಾ ಜಲಮಂಡಳಿ ಅಂತಿಮ ತೀರ್ಪಿನ ಅನ್ವಯ ಆಲಮಟ್ಟಿ ಜಲಾಶಯದಲ್ಲಿ ನಮಗೆ ಲಭ್ಯವಿರುವ ಸಂಪೂರ್ಣ ನೀರಿನ ಸಮಗ್ರ ಸದ್ಬಳಕೆ ಮಾಡಿಕೊಳ್ಳಲು ಅಗತ್ಯವಿರುವ ಯೋಜನೆಗಳನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಬೇಕು.
  • ತುಂಗಾ-ಭದ್ರ ಎಡದಂಡೆ ನಾಲೆ ಶಿಥಿಲವಾಗಿದ್ದು ಕೂಡಲೇ ದುರುಸ್ಥಿಪಡಿಸಬೇಕು.
  • ಕಬಿನಿ ನದಿ ನೀರು ತಮಿಳುನಾಡಿಗೆ ಹೆಚ್ಚು ಪ್ರಮಾಣದಲ್ಲಿ ಹರಿಸುತ್ತಿದ್ದು, ಏತ ನೀರಾವರಿ ಯೋಜನೆಗಳ ಮೂಲಕ ಮೈಸೂರು ಮತ್ತು ಚಾಮರಾಜನಗರ, ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ನೀರು ಒದಗಿಸಲು ಯೋಜನೆ ರೂಪಿಸಬೇಕು. ಹಾಗೆಯೇ, ಕಾವೇರಿ ಪ್ರಾಂತದ ಮಂಡ್ಯ, ರಾಮನಗರ, ತುಮಕೂರು, ಚಿಕ್ಕಮಗಳೂರು, ಹಾಸನ, ಮುಂತಾದ ಜಿಲ್ಲೆಗಳಿಗೆ ನೀರು ಹರಿಸಬೇಕು.
  • ಗ್ರಾಮೀಣ ಕುಡಿಯುವ ನೀರಿನ ಯೋಜನೆಗೆ ಆಯವ್ಯಯದಲ್ಲಿ ಹೆಚ್ಚಿನ ಹಣ ತೆಗೆದಿಡಬೇಕು. ಗ್ರಾಮೀಣ ಮೂಲಸೌಕರ್ಯ ನಮ್ಮ ಹೊಲ-ನಮ್ಮ ರಸ್ತೆ ಯೋಜನೆಯ ಭಾಗವಾಗಿರುವ ರೈತರ ಎಲ್ಲಾ ಜಮೀನುಗಳಿಗೆ ಹೋಗುವ ರಸ್ತೆ ನಿರ್ಮಾಣಕ್ಕೆ ಹೆಚ್ಚು ಆಧ್ಯತೆ ನೀಡಬೇಕು.
  • ಮೈಕ್ರೋ ಪೈನಾನ್ಸ್ ಹಾವಳಿ ತಡೆಗಟ್ಟಲು ಸರ್ಕಾರ ಕಾನೂನು ರೂಪಿಸಿದ್ದಾಗ್ಯೂ ಕಿರುಕುಳ ನಿಂತಿಲ್ಲ. ಆದರೆ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ತನ್ನ ಅಧೀನದಲ್ಲಿ ಬರುವ ಹಣಕಾಸು ಸಂಸ್ಥೆಗಳ ಮೂಲಕ ದುಡಿಯುವ ವರ್ಗಕ್ಕೆ ವಿಶೇಷವಾಗಿ ಮಹಿಳೆಯರಿಗೆ ಸರಳವಾಗಿ ಸಣ್ಣ ಸಾಲ ಸಿಗುವ ವ್ಯವಸ್ಥೆಯನ್ನು ಮಾಡಬೇಕು. ಉತ್ತರ ಕರ್ನಾಟಕ ಭಾಗದ ಕೆಲವು ಸಹಕಾರಿ ಬ್ಯಾಂಕುಗಳು ರೈತರಿಗೆ ಸಾಲ ನೀಡಿ ಬಡ್ಡಿ, ಚಕ್ರಬಡ್ಡಿ ಸೇರಿಸಿ ದುಪ್ಪಟ್ಟು ಮೊತ್ತದ ಸಾಲ ವಸೂಲಿಗೆ ಮುಂದಾಗಿ ಅವರ ಜಮೀನುಗಳನ್ನು ಹರಾಜು ಮಾಡಿಕೊಳ್ಳುತ್ತಿದ್ದು, ಇದನ್ನು ತಡೆಗಟ್ಟಲು ಸೂಕ್ತ ಕಾನೂನು ರಚಿಸಬೇಕು ಮತ್ತು ಸಾಲ ಮರುಪಾವತಿಗೆ ಸರಳ ನೀತಿಯನ್ನು ರೂಪಿಸಬೇಕು.
  • ಸಹಕಾರಿ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ನೀಡುಲು ಹೆಚ್ಚು ಹಣ ಮೀಸಲಿಡಬೇಕು. ಬ್ಯಾಂಕುಗಳಿಂದ ಅಲ್ಪಾವದಿ ಬೆಳೆಸಾಲ ಪಡೆಯಲು ಜಮೀನು ಅಡಮಾನ ಮಾಡಬೇಕೆಂಬ ಸಂಕೀರ್ಣ ಪದ್ಧತಿಯನ್ನು 2018 ರಲ್ಲಿ ಜಾರಿಗೆ ತರಲಾಗಿದ್ದು, ಇದನ್ನು ಕೈಬಿಟ್ಟು ಸರಳ ಅಡಮಾನ ಪದ್ದತಿಯನ್ನು ಮುಂದುವರಿಸಬೇಕು.
  • ತುಂತುರು, ಹನಿ ನೀರಾವರಿಗೆ ನೀಡುವ ಸೌಲಭ್ಯವನ್ನು ಸರಳೀಕರಿಸಬೇಕು. ಕಬ್ಬು ಬೆಳೆಗೆ ಹನಿ ನೀರಾವರಿ ಅಳವಡಿಸಬೇಕು. ತುಂತುರು ಮತ್ತು ಹನಿ ನೀರಾವರಿಗೆ ಸರ್ಕಾರ ಕೊಡುತ್ತಿರುವ ಸಹಾಯಧನವನ್ನು ಒಮ್ಮೆ ಪಡೆದವರಿಗೆ 7 ವರ್ಷಗಳ ಕಾಲದ ವರೆಗೆ ಮತ್ತೆ ಕೊಡದಂತೆ ತಂದಿರುವ ನಿಯಮವನ್ನು ಮಾರ್ಪಾಡು ಮಾಡಿ ಕನಿಷ್ಠ 4 ವರ್ಷಗಳಿಗೆ ಇಳಿಸಬೇಕು. ನೀರನ್ನು ಸಂರಕ್ಷಿಸುವ ದೃಷ್ಟಿಯಿಂದ ಕಬ್ಬಿನ ಬೇಸಾಯಕ್ಕೆ ಹನಿ ನೀರಾವರಿ ವ್ಯವಸ್ಥೆಗೆ ಒತ್ತುನೀಡಿ ಇದಕ್ಕೆ ಹೆಚ್ಚಿನ ಸಹಾಯಧವನ್ನು ನೀಡಬೇಕು.
  • ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಡಯಾಂಚ ಮತ್ತು ಸೆಣಬನ್ನು ಬೆಳೆಯಲು ಪ್ರೋತ್ಸಾಹ ನೀಡಬೇಕು.
  • ಅಡಿಕೆ-ತೆಂಗಿನ ಮರಗಳಿಗೆ ಬರುವ ರೋಗವನ್ನು ತಡೆಗಟ್ಟಲು ವಿಶೇಷ ಅನುದಾನವನ್ನು ನೀಡಬೇಕು ತಂಬಾಕು ಬೆಳೆಗಾರರ ರಕ್ಷಣೆಗೂ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು.

ಈ ಕೆಳಕಂಡ ವಿಶೇಷ ಮತ್ತು ನಿರ್ಧಿಷ್ಟ ಕಾರ್ಯಕ್ರಮಗಳನ್ನು ಈ ಆಯವ್ಯಯದಲ್ಲಿ ಘೋಷಿಸಬೇಕು:

  • ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಮಾತು ಕೊಟ್ಟಂತೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಬೇಕು.
  • ಎ.ಪಿ.ಎಂ.ಸಿ ಕಾಯ್ದೆಯನ್ನು ಮತ್ತಷ್ಟು ರೈತ ಸ್ನೇಹಿ ಆಗಿ ಗಟ್ಟಿಗೊಳಿಸಬೇಕು.
  • ಬಿ.ಜೆ.ಪಿ ಸರ್ಕಾರ ತಂದಿರುವ ಜಾನುವಾರು ಹತ್ಯೆ ನಿಷೇದ ಮತ್ತು ಸಂರಕ್ಷಣಾ ತಿದ್ದುಪಡಿ ಕಾಯ್ದೆಯನ್ನು ವಾಪಸ್‌ ಪಡೆಯಬೇಕು.
  • 2013-18ನೇ ಸಾಲಿನ ತಮ್ಮ ನೇತೃತ್ವದ ಸರ್ಕಾರ ದೇಶದಲ್ಲಿ ಮೊದಲನೇ ಬಾರಿಗೆ ಕೃಷಿ ಬೆಲೆ ಆಯೋಗವನ್ನು ಸ್ಥಾಪನೆ ಮಾಡಿರುವ ಹೆಗ್ಗಳಿಕೆ ಇದೆ. ಆದರೆ, ಕೃಷಿ ಬೆಲೆ ಆಯೋಗಕ್ಕೆ ಶಾಸನಾತ್ಮಕ ಬಲ ನೀಡದೇ ಇರುವುದರಿಂದ ಶಿಫಾರಸ್ಸುಗಳು ಯಾವುದೂ ಜಾರಿಗೆ ಬರುತ್ತಿಲ್ಲ. ಕೃಷಿ ಬೆಲೆ ಆಯೋಗವನ್ನು ಶಾಸ್ವತ ಆಯೋಗವಾಗಿ ಘೋಷಿಸಿ, ಶಾಸನಾತ್ಮಕ ಅಧಿಕಾರವನ್ನು ನೀಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...