ಚಿಕ್ಕಬಳ್ಳಾಪುರ | ಗೋಕಾಡು ಕುರಿತು ಹೈಕೋರ್ಟ್‌ ತೀರ್ಪು ಬಂದರೆ ಇಡೀ ರಾಜ್ಯಕ್ಕೆ ಅನುಕೂಲ

Date:

ಗೋಕಾಡು ಎಂಬುದು ಇಡೀ ರಾಜ್ಯದ ಜನರ ಸಮಸ್ಯೆ. ಪ್ರಸ್ತುತ ಈ ಪ್ರಕರಣ ಹೈಕೋರ್ಟ್‌ನಲ್ಲಿದೆ. ಉಚ್ಚ ನ್ಯಾಯಾಲಯವು ಅನುಭವದಲ್ಲಿರುವ ರೈತರಿಗೆ ಆ ಭೂಮಿ ಕೊಡಬಹುದು ಎಂದು ತೀರ್ಪು ನೀಡಿದರೆ, ಇಡೀ ರಾಜ್ಯದ ರೈತರಿಗೆಲ್ಲಾ ಅನುಕೂಲವಾಗಲಿದೆ. ಆಗ ಗೋಕಾಡಿನ ಜಾಗದಲ್ಲಿ ಸ್ವಾಧೀನದಲ್ಲಿರುವ ರೈತರಿಗೆ ದುರಸ್ತು ಮಾಡಿಕೊಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಹೇಳಿದರು.

ನಗರ ಹೊರವಲಯದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಎರಡನೇ ದಿನದ ಕರ್ನಾಟಕ ಲೋಕಾಯುಕ್ತ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣಾ ಸಭೆಯಲ್ಲಿ ದೂರುದಾರರೊಬ್ಬರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಶಿಡ್ಲಘಟ್ಟ ತಾಲೂಕಿನ ರೈತ ಚೌಡಪ್ಪ ಎಂಬುವರು ನಮ್ಮ ಜಮೀನು ದುರಸ್ತು ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದೇವೆ. ಇದುವರೆಗೆ ದುರಸ್ತು ಮಾಡಿಕೊಟ್ಟಿಲ್ಲ. ಅರಣ್ಯ ಇಲಾಖೆಯವರು ಅದು ಅರಣ್ಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಆದರೂ ದುರಸ್ತು ಮಾಡಿಕೊಡುತ್ತಿಲ್ಲ. ಕಚೇರಿ ಅಲೆಸುತ್ತಿದ್ದಾರೆ ಎಂದು ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ವಿರುದ್ಧ ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಶೀಲ್ದಾರ್‌ ರಾಜೀವ್‌ ಮಾತನಾಡಿ, ಕಂದಾಯ ಇಲಾಖೆಯಲ್ಲಿರುವ 1919ರ ಕಡತದ ಪ್ರಕಾರ ಆ ಜಾಗ ಗೋಕಾಡು. ಆದ್ದರಿಂದ, ದುರಸ್ತು ಮಾಡಿಕೊಟ್ಟಿಲ್ಲ. ಗೋಕಾಡಿನ ವಿಚಾರವಾಗಿ ಪ್ರಕರಣ ಹೈಕೋರ್ಟ್‌ನಲ್ಲಿದೆ ಎಂದು ತಿಳಿಸಿದರು.

ಪ್ರಕರಣ ಹೈಕೋರ್ಟ್‌ನಲ್ಲಿದ್ದಾಗ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಬೇಕಿದ್ದಲ್ಲಿ ನೀವು ಅದೇ ಪ್ರಕರಣದಲ್ಲಿ ಸೇರಿಕೊಳ್ಳಲು ಅವಕಾಶವಿದೆ. ಕೋರ್ಟ್ ತೀರ್ಪಿನ ಬಳಿಕ ನಿಮಗೆ ಸೂಕ್ತ ಉತ್ತರ ದೊರೆಯಲಿದೆ ಎಂದು ಹೇಳಿದರು.

ಇದೇ ವಿಚಾರವಾಗಿ ಕೆಲಕಾಲ ರೈತ ಚೌಡಪ್ಪ ನ್ಯಾಯಮೂರ್ತಿಗಳೊಂದಿಗೆ ವಾದ ನಡೆಸಿದರು. ಕೊನೆಗೆ ಸಿಟ್ಟಾದ ನ್ಯಾಯಮೂರ್ತಿ ಫಣೀಂದ್ರ, ಜಾಸ್ತಿ ಮಾತನಾಡಬೇಡಿ ಸುಮ್ಮನೆ ಇರಿ ಎಂದು ಏರುಧ್ವನಿಯಲ್ಲಿ ದೂರದಾರರ ವಿರುದ್ಧ ಗುಡುಗಿದರು.

ಶಿಡ್ಲಘಟ್ಟ ತಾಲೂಕಿನ ದೊಡ್ಡತೇಕಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಸರಕಾರಿ ಗೋಮಾಳದಲ್ಲಿ ಸರಕಾರದಿಂದ ಸಾರ್ವಜನಿಕ ಉಪಯೋಗಕ್ಕಾಗಿ ಕೊಳವೆ ಬಾವಿ ಕೊರೆಸಲಾಗಿದೆ. ಅದರಿಂದ 10 ಅಡಿ ಅಂತರದಲ್ಲೇ ಖಾಸಗಿ ವ್ಯಕ್ತಿಯೊಬ್ಬ ಮತ್ತೊಂದು ಕೊಳವೆ ಬಾವಿ ಕೊರೆಸಿದ್ದಾನೆ ಎಂಬ ದೂರಿಗೆ ಪ್ರತಿಕ್ರಿಯಿಸಿದ ನ್ಯಾ.ಫಣೀಂದ್ರ ಅವರು, ತಹಶೀಲ್ದಾರ್‌ ಬಿ ಎಂ ಸ್ವಾಮಿ ಹಾಗೂ ಪಿಡಿಒ ವಜ್ರೇಶ್‌ ಕುಮಾರ್‌ ಇಬ್ಬರೂ ಸ್ಥಳ ಪರಿಶೀಲನೆ ನಡೆಸಬೇಕು. ಸರಕಾರಿ ಗೋಮಾಳದಲ್ಲಿದ್ದರೆ ಸಾರ್ವಜನಿಕ ಬಳಕೆಗೆ ಅನುಕೂಲವಾಗುವಂತೆ ಅದನ್ನು ಪಂಚಾಯಿತಿ ವ್ಯಾಪ್ತಿಗೆ ನೀಡಿ ಎಂದು ಆದೇಶಿಸಿದರು.

ಎರಡನೇ ದಿನದ ಸಭೆಯಲ್ಲಿ ನಡೆದ ಕೆಲ ಪ್ರಕರಣಗಳ ವಿಚಾರಣೆಯಲ್ಲಿ ನ್ಯಾ.ಫಣೀಂದ್ರ ಅವರು ದೂರುದಾರರ ವಿರುದ್ಧವೇ ಹರಿಹಾಯ್ದರು. ಸಾರ್ವಜನಿಕ ಅಧಿಕಾರಿಗಳ ವಿರುದ್ಧ ವಿನಾಕಾರಣ ಕೇಸು ಹಾಕುತ್ತೀರಿ. ಅವರು ನಿಮ್ಮ ಪರವಾಗಿಯೇ ಇರುತ್ತಾರೆ ಎಂಬುದನ್ನು ಸಾರ್ವಜನಿಕರು ಅರ್ಥಮಾಡಿಕೊಳ್ಳಬೇಕು ಎಂದು ಬುದ್ದಿವಾದದ ಪಾಠ ಮಾಡಿದರು.

ಎರಡನೇ ದಿನ ನಡೆದ ದೂರುಗಳ ವಿಚಾರಣಾ ಸಭೆಯಲ್ಲಿ ಸುಮಾರು 26 ಪ್ರಕರಣಗಳು ಇತ್ಯರ್ಥಗೊಂಡವು.

ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಎಂ ಪಾಟೀಲ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿಲ್ಪ, ಲೋಕಾಯುಕ್ತದ ಎಸ್ ಪಿ ಆಂಟೋನಿ ಜಾನ್, ಡಿ.ವೈ.ಎಸ್.ಪಿ ಜಗನ್ನಾಥ್, ಅಪಾರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...