ಗೋಕಾಕ್ | ಜಮೀನಿನ ಗಡಿ ವ್ಯಾಜ್ಯ; ದೇವಸ್ಥಾನದಲ್ಲಿ ಮಲಗಿದ್ದ ವ್ಯಕ್ತಿಯ ಕೊಚ್ಚಿ ಕೊಲೆಗೈದ ವೃದ್ಧ

Date:

ಇಬ್ಬರ ನಡುವಿನ ಜಮೀನಿನ ಗಡಿ ವ್ಯಾಜ್ಯ ವಿವಾದವು ಓರ್ವನ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದಿದೆ.

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದಾಗ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಕೊಲೆಯಾದ ವ್ಯಕ್ತಿ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೇ ಮಡ್ಡೆಪ್ಪನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಮೀನಿನ ಸೀಮೆ ಜಾಗಕ್ಕಾಗಿ ಹಲವು ವರ್ಷಗಳಿಂದ ಮಡೆಪ್ಪ-ಭೀರಪ್ಪ ಮಧ್ಯೆ ಗಲಾಟೆ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ.

ಮಡ್ಡೆಪ್ಪ ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದಾಗ ಸಮಯ ಸಾಧಿಸಿ ಭೀರಪ್ಪ ಹತ್ಯೆಗೈದಿದ್ದಾನೆ‌. ಬಿಡಿಸಿಕೊಳ್ಳಲು ಸ್ಥಳೀಯರು ಧಾವಿಸಿ ಬಂದರೂ, ಅಟ್ಟಾಡಿಸಿಕೊಂಡು ಬಂದು ಮಡ್ಡೆಪ್ಪನನ್ನು ಭೀರಪ್ಪ ಹರಿತವಾದ ಆಯುಧದಿಂದ ಕೊಲೆ ಮಾಡಿದ್ದಾನೆ.

image 2 2
ಕೊಲೆಯಾದ ಮಡ್ಡೆಪ್ಪ ಯಲ್ಲಪ್ಪ ಬಾನಸಿ ಹಾಗೂ ಕೊಲೆ ಆರೋಪಿ ಭೀರಪ್ಪ ಸಿದ್ದಪ್ಪ ಸುಣಧೋಳಿ

ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದ ಭೀರಪ್ಪನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಮಡ್ಡೆಪ್ಪ ಮೃತಪಟ್ಟಿದ್ದಾರೆ. ಬಳಿಕ ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...