ಗೋಕರ್ಣ | ‘ಮಾದಕ ಚಾಕಲೇಟ್’ ಭೀತಿ: ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ

Date:

ಉತ್ತರ ಕನ್ನಡ: ಕಳೆದ ಕೆಲವು ದಿನಗಳಿಂದ ಗೋಕರ್ಣ ಭಾಗದ ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಿಶ್ರಿತ ಚಾಕಲೇಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಆದರೆ, ಇದು ಕೇವಲ ವದಂತಿಯಾಗಿದ್ದು, ಸಾರ್ವಜನಿಕರು ಹಾಗೂ ಪಾಲಕರು ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಶಿಕ್ಷಣ ಸಂಸ್ಥೆಗಳ ಪ್ರಮುಖರು ಸ್ಪಷ್ಟಪಡಿಸಿದ್ದಾರೆ.

ವೈರಲ್ ಫೋಟೋ ಹಿಂದಿನ ಸತ್ಯಾಸತ್ಯತೆ: ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಚಾಕಲೇಟ್ ಪ್ಯಾಕೆಟ್‌ಗಳ ಫೋಟೋಗಳು ಗೋಕರ್ಣಕ್ಕೆ ಸಂಬಂಧಿಸಿದ್ದಲ್ಲ. ಇವು ಅಂತರ್ಜಾಲದಲ್ಲಿ ಈ ಹಿಂದೆಯೇ ಲಭ್ಯವಿದ್ದ ಹಳೆಯ ಫೋಟೋಗಳಾಗಿದ್ದು, ಕಿಡಿಗೇಡಿಗಳು ಸ್ಥಳೀಯ ಸುದ್ದಿಯಂತೆ ಬಿಂಬಿಸಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂತಹ ಯಾವುದೇ ಮಾದಕ ಚಾಕಲೇಟ್‌ಗಳು ಗೋಕರ್ಣದ ಮಾರುಕಟ್ಟೆಯಲ್ಲಿ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ಗ್ರಾ.ಪಂ. ಅಧ್ಯಕ್ಷರಾದ ನಾಗರಾಜ ಹಿತ್ತಲಮಕ್ಕಿ ಅವರು,

“ಸಾಮಾಜಿಕ ಜಾಲತಾಣದ ವದಂತಿಗಳಿಂದ ಪಾಲಕರು ಭಯಭೀತರಾಗಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುವ ವಾತಾವರಣ ನಿರ್ಮಾಣವಾಗಿದೆ. ಆದರೆ ವಾಸ್ತವದಲ್ಲಿ ಇಂತಹ ಘಟನೆಗಳು ಎಲ್ಲಿಯೂ ವರದಿಯಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಕಾರವಾರ | ಸರಕಾರಿ ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆಯ ಆತ್ಮಹತ್ಯೆ ಯತ್ನ; ಆಸ್ಪತ್ರೆಗೆ ದಾಖಲು

ಪಾಲಕರು ಗಾಬರಿಗೊಳ್ಳುವ ಬದಲು ಮಕ್ಕಳ ದಿನನಿತ್ಯದ ನಡವಳಿಕೆಗಳ ಮೇಲೆ ನಿಗಾ ಇಡುವುದು ಮತ್ತು ಅಪರಿಚಿತರು ನೀಡುವ ತಿಂಡಿಗಳನ್ನು ತಿನ್ನದಂತೆ ಎಚ್ಚರಿಸುವುದು ಒಳಿತು,” ಎಂದು ಸಲಹೆ ನೀಡಿದ್ದಾರೆ.

ಪೊಲೀಸರ ಎಚ್ಚರಿಕೆ: ಗೋಕರ್ಣ ಪೊಲೀಸ್ ನಿರೀಕ್ಷಕರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, “ಕ್ಷೇತ್ರ ವ್ಯಾಪ್ತಿಯಲ್ಲಿ ಇಂತಹ ಯಾವುದೇ ಶಂಕಾಸ್ಪದ ವಸ್ತುಗಳು ಕಂಡುಬಂದಿಲ್ಲ. ಸಾರ್ವಜನಿಕರು ಸುಳ್ಳು ಸುದ್ದಿಗಳನ್ನು ನಂಬಬಾರದು ಹಾಗೂ ಇಂತಹ ಸಂದೇಶಗಳನ್ನು ಇತರರಿಗೆ ಫಾರ್ವರ್ಡ್ ಮಾಡುವ ಮೂಲಕ ಸಾರ್ವಜನಿಕ ಶಾಂತಿಗೆ ಭಂಗ ತರಬಾರದು,” ಎಂದು ಮನವಿ ಮಾಡಿದ್ದಾರೆ.

ಸಾರ್ವಜನಿಕರಲ್ಲಿ ಮನವಿ: ಯಾವುದೇ ಖಚಿತ ಮಾಹಿತಿ ಇಲ್ಲದೆ ಇಂತಹ ಸಂದೇಶಗಳನ್ನು ಫಾರ್ವರ್ಡ್ ಮಾಡಿ ಗೊಂದಲ ಸೃಷ್ಟಿಸಬೇಡಿ. ವಾಟ್ಸಾಪ್‌ನಲ್ಲಿ ಬರುವ ಪ್ರತಿಯೊಂದು ಸಂದೇಶವನ್ನು ನಂಬಿ ಇತರರಿಗೆ ಹಂಚಬೇಡಿ ಎಂದು ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...