ಗೋಕರ್ಣ | ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ ಪತ್ತೆ!

Date:

ಅಪಾಯಕಾರಿ ಗುಹೆಯೊಂದರಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತದ್ದ ರಷ್ಯಾದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿಯ ರಾಮತೀರ್ಥ ಬೆಟ್ಟದ ಗುಹೆಯಲ್ಲಿದ್ದ ಮಹಿಳೆ ಮತ್ತು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಗೋಕರ್ಣ ಪೊಲೀಸರು ತಿಳಿಸಿದ್ದಾರೆ.

ಜುಲೈ 9 ರಂದು ಸಂಜೆ 5:00 ಗಂಟೆ ಸುಮಾರಿಗೆ ಗೋಕರ್ಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಧರ್ ಎಸ್‌ಆರ್ ಮತ್ತು ಅವರ ತಂಡವು ಪ್ರವಾಸಿಗರ ಸುರಕ್ಷತೆಯನ್ನು ಹಿತದೃಷ್ಟಿಯಿಂದ ರಾಮತೀರ್ಥ ಬೆಟ್ಟದ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಅವರು ಪತ್ತೆಯಾಗಿದ್ದಾರೆ. ಮಹಿಳೆಯನ್ನು ಗಮನಿಸಿದ ಪೊಲೀಸರು ಕಾಡಿನಲ್ಲಿ ಶೋಧ ನಡೆಸಿದಾಗ, ಮಹಿಳೆಯು ಅಪಾಯಕಾರಿ, ಭೂಕುಸಿತ ಪೀಡಿತ ವಲಯದಲ್ಲಿರುವ ಗುಹೆಯಲ್ಲಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

ರಕ್ಷಿಸಲಾದ ಮೂವರನ್ನು ರಷ್ಯಾ ಮೂಲದ ಮಹಿಳೆ ನೀನಾ ಕುಟಿನಾ (40 ವರ್ಷ) ಮತ್ತು ಆಕೆಯ ಇಬ್ಬರು ಹೆಣ್ಣು ಮಕ್ಕಳಾದ ಪ್ರೇಮಾ (6 ವರ್ಷ), ಅಮಾ (4 ವರ್ಷ) ಎಂದು ಹೆಸರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕೆಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, “ತಾನು ಗೋವಾದಿಂದ ಗೋಕರ್ಣಕ್ಕೆ ಆಧ್ಯಾತ್ಮಿಕ ಏಕಾಂತತೆಗೆ ಬಂದಿದ್ದೇನೆ. ನಗರ ಜೀವನದ ಜಂಜಾಟದಿಂದ ದೂರವಿದ್ದು, ಧ್ಯಾನ ಮತ್ತು ಪ್ರಾರ್ಥನೆಯಲ್ಲಿ ತೊಡಗಲು ಅರಣ್ಯ ಗುಹೆಯಲ್ಲಿ ವಾಸಿಸಲು ನಿರ್ಧರಿಸಿದ್ದೆ” ಎಂದು ನೀನಾ ಹೇಳಿಕೊಂಡಿದ್ದಾರೆ.

ಆಕೆಯ ಉದ್ದೇಶವು ಆಧ್ಯಾತ್ಮಿಕವೇ ಆಗಿದ್ದರೂ, ಅಂತಹ ವಾತಾವರಣವು ಮಕ್ಕಳಿಗೆ ಸುರಕ್ಷತವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಹೆ ಇರುವ ರಾಮತೀರ್ಥ ಬೆಟ್ಟದಲ್ಲಿ 2024ರ ಜುಲೈನಲ್ಲಿ ದೊಡ್ಡ ಭೂಕುಸಿತವಾಗಿತ್ತು. ಈ ಪ್ರದೇಶವು ವಿಷಪೂರಿತ ಹಾವುಗಳು ಸೇರಿದಂತೆ ಅಪಾಯಕಾರಿ ವನ್ಯಜೀವಿಗಳ ನೆಲೆಯಾಗಿದೆ. ಇದು ಅಪಾಯಕಾರಿ ಸ್ಥಳವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?:ʼಗುಜರಾತ್ ಮಾಡೆಲ್‌ʼ : ಸುಳ್ಳಿನ ಸೌಧ ಕುಸಿಯುತ್ತಿದೆ, ಬಿಜೆಪಿ ಬೆತ್ತಲಾಗುತ್ತಿದೆ!

ಆ ಪ್ರದೇಶದ ಅಪಾಯಗಳ ಕುರಿತು ಮಹಿಳೆಗೆ ತಿಳಿಸಿದ ಬಳಿಕ, ಆಕೆ ಆ ಪ್ರದೇಶದಿಂದ ಹೊರಬಂದಿದ್ದಾರೆ. ಆಕೆಗೆ ಕುಮಟಾ ತಾಲೂಕಿನ ಬಂಕಿಕೋಡ್ಲಾ ಗ್ರಾಮದಲ್ಲಿ ಮಹಿಳಾ ಸನ್ಯಾಸಿ ಸ್ವಾಮಿ ಯೋಗರತ್ನ ಸರಸ್ವತಿ ನಡೆಸುತ್ತಿದ್ದ ಆಶ್ರಮದಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಹಿಳೆ ಮತ್ತು ಅವರ ಇಬ್ಬರು ಮಕ್ಕಳನ್ನು ರಷ್ಯಾಕ್ಕೆ ಮರಳಿ ಕಳಿಸಲು ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಜೊತೆ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅಧಿಕೃತ ಪತ್ರವ್ಯವಹಾರ ನಡೆಸುತ್ತಿದ್ದಾರೆ. ಶೀಘ್ರವೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...